Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಕಾಡಾನೆ...

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷ: ಸಂಚಾರಿಗಳಲ್ಲಿ ಭೀತಿ

ವಾರ್ತಾಭಾರತಿವಾರ್ತಾಭಾರತಿ19 Jun 2017 9:36 PM IST
share

ಮೂಡಿಗೆರೆ, ಜೂ.19: ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್ ರಸ್ತೆಯ ಮಧ್ಯ ಭಾಗದಲ್ಲಿ ಸೋಮವಾರ ಸಂಜೆ ಕಾಡಾನೆ ಕ್ಷಣಾರ್ಧದಲ್ಲಿ ಪ್ರತ್ಯಕ್ಷವಾಗಿ ವಾಹನ ಸವಾರರು ಭಯಭೀತರಾದ ಘಟನೆ ನಡೆದಿದೆ.

 ಚಾಮಾಡಿ ಘಾಟ್‌ನ 11ನೇ ತಿರುವಿನಲ್ಲಿ ಸೋಮವಾರ ಸಂಜೆ ರಸ್ತೆಯಲ್ಲಿಯೇ ನಿಂತ ಕಾಡಾನೆಯನ್ನು ಕಂಡು ಪ್ರವಾಸಿಗರು ವಾಹನ ಸವಾರರು ಭಯಗೊಂಡು ವಾಹನವನ್ನು ತುಸು ಅಂತರದಲ್ಲೇ ನಿಲ್ಲಿಸಿ ಜೀವ ಭಯದಿಂ ತತ್ತರಿಸಿದ್ದರು. ಕಾಡಾನೆಯೂ ಎರಡು ಬದಿಯಲ್ಲಿ ವಾಹನವನ್ನು ದ್ವಂಸಗೊಳಿಸುತ್ತದೆಯೋ ಎಂದು ಯೋಚಿಸಿದರೆ ಕೆಲವರು ಪ್ರಾಣದ ಹಂಗು ತೊರೆದು ವಾಹನದಲ್ಲೇ ಸುಮಾರು 15 ನಿಮಿಷ ಕಾದು ನಿಂತರು. ಆದರೆ ಕಾಡಾನೆ ಯಾರಿಗೂ ತೊಂದರೆ ಕೊಡದೇ ರಸ್ತೆಯಿಂದ ಕಾಡಿಗೆ ಸಾಗಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

 ವಾಹನದಲ್ಲಿ ಸಾಗುತ್ತಿದ್ದ ಪ್ರವಾಸಿಗರು ಬದುಕಿದೆಯೇ ಬಡಜೀವ ಎಂಬಂತೆ ಕಾಡಾನೆ ಸಾಗಿದ ಮೇಲೆ ಅಲ್ಲಿಂದ ವಾಹನ ಚಲಾಯಿಸಿ ಮುನ್ನಡೆದರು. ಕೊಟ್ಟಿಗೆಹಾರದಿಂದ ಉಜಿರೆ ಕಡೆಗೆ ಸಾಗುತ್ತಿದ್ದ ಕೊಟ್ಟಿಗೆಹಾರ ನಿವಾಸಿ ಕುಂಜಿಮೋಣು ಬೆಳಿಗ್ಗೆ 10ನೇ ತಿರುವಿನಲ್ಲಿ ಕಾಡಾನೆಯ ಕೂಗು ಕೇಳಿ ವಾಹನವನ್ನು ವೇಗವಾಹಗಿ ಚಲಾಯಿಸಿ ಉಜಿರೆ ಸೇರಿದ್ದಾರೆ. ತದ ನಂತರ ಸಂಜೆ ಕೊಟ್ಟಿಗೆಹಾರಕ್ಕೆ ವಾಪಾಸ್ ಬರುವಾಗ 11ನೇ ತಿರುವಿನಲ್ಲಿ ರಸ್ತೆಯಲ್ಲೇ ನಿಂತ ಕಾಡಾನೆಯಿಂದ ಅವರ ವಾಹನವು ಪವಾಡ ದೃಶ್ಯವಾಗಿ ಕೂದಲೆಳೆ ಅಂತರದಲ್ಲಿ ಕಾಡಾನೆಯ ಸನಿಹದಿಂದ ಪಾರಾಯಿತು ಎಂದು ಪ್ರತ್ಯಕ್ಷಧರ್ಶಿ ಕುಂಙಿಮೋಣು ತಿಳಿಸಿದ್ದಾರೆ.

ಕಾಡಾನೆ ಸ್ಥಳಾಂತರಕ್ಕೆ ಒತ್ತಾಯ:

ಬಣಕಲ್, ಚಕ್ಕಮಕ್ಕಿ, ಬಗ್ಗಸಗೋಡು, ಕೊಟ್ಟಿಗೆಹಾರ, ಆಲೇಖಾನ್, ಬಿದಿರುತಳ ಸುತ್ತಮುತ್ತ ಕಾಡಾನೆಗಳು ಊರಿಗೆ ಬರುತ್ತಿದ್ದು ಬೆಳೆ ಹಾನಿ ಸಂಭವಿಸುತ್ತಿರುವುದು ಇತ್ತೀಚೆಗೆ ವರದಿಯಾಗಿತ್ತು. ಅರಣ್ಯ ಇಲಾಖೆಯವರು ಬೇರೆ ಆನೆಯನ್ನು ಹಿಡಿದು ಪುಂಡಾಟಿಕೆ ಮಾಡುವ ಆನೆಯನ್ನು ಹಿಡಿಯದೇ ಜನರನ್ನು ಸಂಕಷ್ಟಕ್ಕೆ ಈಡು ಮಾಡಿದ್ದಾರೆ.

 ಎರಡು ಮೂರು ಆನೆಗಳಿರುವ ಹಿಂಡು ಆಗಾಗ ಊರಿಗೆ ಬಂದು ದಾಂದಲೇ ನಡೆಸುವುದಲ್ಲದೇ ಸಂಚರಿಸುವ ರಸ್ತೆಗಳಿಗೂ ಅಪಾಯವನ್ನು ತಂದೊಡ್ಡಿದೆ.ಸಂಬಂಧ ಪಟ್ಟ ಅರಣ್ಯ ಅಧಿಕಾರಿಗಳು ಈ ಭಾಗದಲ್ಲಿದಾಂಧಲೇ ನಡೆಸುತ್ತಿರುವ ಆನೆಗಳನ್ನು ಸ್ಥಳಾಂತರಿಸಿ ಜನರು ನೆಮ್ಮದಿಯಿಂದ ಬದುಕಲು ಅವಕಾಶ ಮಾಡಿಕೊಡಬೇಕೆಂದು ಕೊಟ್ಟಿಗೆಹಾರದ ಸಂಜಯ್‌ಗೌಡ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X