ಆನ್‌ಲೈನ್ ವೇಶ್ಯಾವಾಟಿಕೆ ದಂಧೆ: ಇಬ್ಬರ ಬಂಧನ

ಬೆಂಗಳೂರು, ಜೂ.20: ಆನ್‌ಲೈನ್‌ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಇಲ್ಲಿನ ಇಂದಿರಾನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಇಂದಿರಾನಗರದ ನಿವಾಸಿಗಳಾದ ಶಿವರಾಜ್ ಯಾನೆ ಶಿವು, ಯೇಸುದಾಸ್ ಬಂಧಿತ ಆರೋಪಿಗಳೆಂದು ಪೊಲೀಸರು ಗುರುತಿಸಿದ್ದಾರೆ. ದಂಧೆಯಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಮತ್ತೋರ್ವ ಆರೋಪಿ ಅಜಯ್‌ಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.
ಪ್ರಕರಣದ ವಿವರ: ಆರೋಪಿಗಳು ಎಸ್ಕಾರ್ಟ್ ಸರ್ವೀಸ್ ನೀಡುವುದಾಗಿ ವೆಬ್‌ನಲ್ಲಿ ಜಾಹೀರಾತು ನೀಡಿದ್ದರು. ವೆಬ್‌ಸೈಟ್ ನೋಡಿ ಅವರನ್ನು ಒಬ್ಬ ವ್ಯಕ್ತಿ ಸಂಪರ್ಕಿಸಿದ್ದರು. ಈ ವೇಳೆ 15 ಸಾವಿರ ರೂಪಾಯಿಗೆ ಬೇಡಿಕೆಯಿಟ್ಟು 10 ಸಾವಿರ ರೂ. ಪಡೆದುಕೊಂಡಿದ್ದರು. ಇಂದಿರಾನಗರದ 3ಡಿಜ ಮೇನ್ ಜಂಕ್ಷನ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಕಚೇರಿ ಇರುವುದಾಗಿ ಹೇಳಿದ್ದರು. ಇದನ್ನು ನಂಬಿ ಅಪಾರ್ಟ್‌ಮೆಂಟ್‌ಗೆ ಹೋದಾಗ ಒಳಗಡೆ ಕಚೇರಿ ಇರಲಿಲ್ಲ. ಹೊರಗೆ ಬಂದಾಗ ಹಣ ಪಡೆದ ವ್ಯಕ್ತಿಯೂ ಇರಲಿಲ್ಲ. ಇದರಿಂದ ವಂಚನೆಗೊಳಗಾದ ವ್ಯಕ್ತಿ ಇಂದಿರಾನಗರ ಪೊಲೀಸರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ಬೆನ್ನತ್ತಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.





