ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ
ಮೂಡುಬಿದಿರೆ,ಜೂ.20: ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ಹಾಗೂ ಎಂಬಿಎ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಮಣಿಪಾಲ ವಿಶ್ವವಿದ್ಯಾಲಯದ ಕುಲಸಚಿವ ಡಾ.ನಾರಾಯಣ ಸಭಾಹಿತ್ ಮಾತನಾಡಿ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿ, ಕಾಲೇಜಿನಲ್ಲಿ ಕಲಿತ ಶಿಕ್ಷಣದ ಜೊತೆಗೆ ಮುಂದೆ ಬದುಕನ್ನು ರೂಪಿಸಿಕೊಳ್ಳುವ ಬಹುದೊಡ್ಡ ಜವಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಆಳ್ವಾಸ್‌ನಲ್ಲಿ ತಾಂತ್ರಿಕ ಶಿಕ್ಷಣ ಪಡೆದ ನಮ್ಮ ವಿದ್ಯಾರ್ಥಿಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಅತ್ಯುನ್ನತ ಮಟ್ಟಕ್ಕೇರಬೇಕೆಂದು ಹಾರೈಸಿದ ಅವರು ಸಂಸ್ಥೆಯಲ್ಲಿ ಕಲಿತ ಉತ್ತಮ ವಿಚಾರಗಳಿಂದ ಭವಿಷ್ಯದ ಸವಾಲುಗಳನ್ನು ದಿಟ್ಟತನದಿಂದ ಎದುರಿಸಿ ಎಂದು ಶುಭ ಹಾರೈಸಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ವೇದಿಕೆಯಲ್ಲಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ಫರ್ನಾಂಡಿಸ್ ಪ್ರಾಸ್ತಾವಿಕವಾಗಿ ಮಾತನಾಡಿದರು.ವಿದ್ಯಾರ್ಥಿಗಳಾದ ದೀಕ್ಷಿತಾ, ಅನ್ವಿತ ಜೈನ್, ಮನಸ್ವಿತ ಶೆಟ್ಟಿ, ಫರಿನಾ, ಹನ್ಸಿಲ್ ಡಿಸೋಜಾ ಹಾಗೂ ಮುರಳಿ ಕೃಷ್ಣ ಕಾಲೇಜು ಜೀವನದ ಅನುಭವ ಹಂಚಿಕೊಂಡರು.
ಉಪನ್ಯಾಸಕ ಸಚಿನ್ ಅತಿಥಿಗಳನ್ನು ಪರಿಚಯಿಸಿದರು.ಶೈಕ್ಷಣಿಕ ವಿಭಾಗದ ಡೀನ್ ಡಾ.ಪ್ರವೀಣ್ ಜೆ ವಂದಿಸಿದರು. ತಾನ್ಯ ಮೆಂಡಿಸ್ ಕಾರ್ಯಕ್ರಮ ನಿರೂಪಿಸಿದರು.