ಮಾನವ ಹಕ್ಕುಗಳ ಕುರಿತು ಅರಿವು ಅಗತ್ಯ: ದಿನಕರ ಬಾಬು
ಉಡುಪಿ, ಜೂ.20: ಮಾನವ ಹಕ್ಕುಗಳಿಗೆ ಸಂಬಂಧಿಸಿದಂತೆ ಎಲ್ಲಾ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಂಪೂರ್ಣ ಅರಿವು ಹೊಂದಿ ರುವುದು ಅತ್ಯಂತ ಅವಶ್ಯಕ ಎಂದು ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.
ಮಂಗಳವಾರ ಮಣಿಪಾಲದಲ್ಲಿರುವ ಜಿಪಂ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಾನವ ಹಕ್ಕು ಆಯೋಗ, ಜಿಪಂ ಉಡುಪಿ ಹಾಗೂ ಗ್ಲೋಬಲ್ ಕನ್ಸರ್ನ್ ಇಂಡಿಯಾ ಹಾಗೂ ಅಕಾಡೆಮಿ ಆಫ್ ಗಾಂಧೀಯನ್ ಸ್ಟಡೀಸ್ ಸಹಯೋಗದಲ್ಲಿ ಆಯೋಜಿಸಿದ್ದ ಮಾನವ ಹಕ್ಕು, ಲಿಂಗತ್ವ ಸಮಾನತೆ ಮತ್ತು ಮಾನವ ಕಳ್ಳ ಸಾಗಾಣಿಕೆ ಕುರಿತ ಕಾರ್ಯಾಗಾರವನ್ನು ಉ ್ಘಾಟಿಸಿ ಅವರು ಮಾತನಾಡುತಿದ್ದರು.
ಜನಪ್ರತಿನಿಧಿಗಳು ಸಾಮಾಜಿಕ ಕಾರ್ಯದಲ್ಲಿ ತೊಡಗಿದ್ದು, ನಾಗರಿಕರೊಂದಿಗೆ ನಿಕಟ ಸಂಬಂದ ಹೊಂದಿರುವುದರಿಂದ ಸಮಾಜದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಕಂಡುಬಂದಲ್ಲಿ ಸಂತ್ರಸ್ಥರಿಗೆ ಸೂಕ್ತ ನ್ಯಾಯ ಒದಗಿಸಬೇಕಾದರೆ ಮಾನವ ಹಕ್ಕುಗಳ ಕುರಿತು ಸಂಪೂರ್ಣ ಅರಿವು ಹೊಂದಿರುವುದು ಅಗತ್ಯ ಹಾಗೂ ಅಧಿಕಾರಿಗಳೂ ಸಹ ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಕಾರ್ಯ ನಿರ್ವಹಿಸಬೇಕಾದರೆ ಅವುಗಳ ಅರಿವು ಅಗತ್ಯ ಎಂದರು.
ಜನಪ್ರತಿನಿಧಿಗಳು ಸಾಮಾಜಿಕ ಕಾರ್ಯದಲ್ಲಿ ತೊಡಗಿದ್ದು, ನಾಗರಿಕರೊಂದಿಗೆ ನಿಕಟ ಸಂಬಂದ ಹೊಂದಿರುವುದರಿಂದ ಸಮಾಜದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಕಂಡುಬಂದಲ್ಲಿ ಸಂತ್ರಸ್ಥರಿಗೆ ಸೂಕ್ತ ನ್ಯಾಯ ಒದಗಿಸಬೇಕಾದರೆ ಮಾನವ ಹಕ್ಕುಗಳ ಕುರಿತು ಸಂಪೂರ್ಣ ಅರಿವು ಹೊಂದಿರುವುದು ಅಗತ್ಯ ಹಾಗೂ ಅಧಿಕಾರಿಗಳೂ ಸಹ ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಕಾರ್ಯ ನಿರ್ವಹಿಸಬೇಕಾದರೆ ಅವುಗಳ ಅರಿವು ಅಗತ್ಯ ಎಂದರು. ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಮಾತನಾಡಿ, ಸಮಾಜದ ಪ್ರತಿಯೊಬ್ಬ ಮಹಿಳೆ, ಮಗು ಸೇರಿದಂತೆ ಎಲ್ಲಾ ನಾಗರಿಕರಿಗೂ ಮಾನವ ಹಕ್ಕುಗಳು ಇವೆ. ಈ ಹಕ್ಕುಗಳ ರಕ್ಷಿಸಿಕೊಂಡು ಸ್ವತಂತ್ರವಾಗಿ ಬದುಕಬೇಕು. ಯಾವುದೇ ದಾಸ್ಯದಲ್ಲಿ ಬದುಕುವುದು ಸರಿಯಲ್ಲ ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡ ಬೃಂದಾ ಅಡಿಗೆ ಮಾತನಾಡಿ, ತಾಯಿಯ ಗರ್ಭದಿಂದಲೇ ಮಾನವ ಹಕ್ಕುಗಳು ದೊರಕುತ್ತವೆ. ವ್ಯಕ್ತಿಯ ಮಾನವ ಹಕ್ಕುಗಳ ರಕ್ಷಣೆಯ ಜವಾಬ್ದಾರಿ ಸರಕಾರದ್ದಾಗಿದೆ. ಪ್ರತಿಯೊಬ್ಬ ನಾಗರಿಕ ತಮ್ಮ ಹಕ್ಕುಗಳ ಬಗ್ಗೆ ತಿಳುವಳಿಕೆ ಹೊಂದಿರಬೇಕು ಎಂದರು.
ಜಿಪಂ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್ ಉಪಸ್ಥಿತರಿದ್ದರು. ಉಡುಪಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿಪಂ ಹಾಗೂ ತಾಪಂಗಳ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.