Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದಸರಾ ಮಾದರಿಯಲ್ಲಿ ಕೆಂಪೇಗೌಡರ ಜಯಂತಿ

ದಸರಾ ಮಾದರಿಯಲ್ಲಿ ಕೆಂಪೇಗೌಡರ ಜಯಂತಿ

ವಾರ್ತಾಭಾರತಿವಾರ್ತಾಭಾರತಿ20 Jun 2017 9:57 PM IST
share
ದಸರಾ ಮಾದರಿಯಲ್ಲಿ ಕೆಂಪೇಗೌಡರ ಜಯಂತಿ

ಬೆಂಗಳೂರು,ಜೂ.20: ರಾಜ್ಯ ಸರಕಾರದ ವತಿಯಿಂದ ಜೂ.27ರಂದು ಇದೇ ಮೊದಲ ಬಾರಿಗೆ ಹಮ್ಮಿಕೊಂಡಿರುವ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಸಂಭ್ರಮದ ಹಬ್ಬವಾಗಿ ಆಚರಣೆ ಮಾಡಬೇಕು ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದ್ದಾರೆ.

ರಾಜ್ಯ ಸರಕಾರದ ವತಿಯಿಂದ ಕೆಂಪೇಗೌಡ ದಿನಾಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ನಗರದ ರಾಜ್ಯ ಒಕ್ಕಲಿಗರ ಸಂಘದ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಪೂರ್ವಭಾವಿ ಸಿದ್ಧತೆ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ನಾಡಪ್ರಭು ಕೆಂಪೇಗೌಡರ ಆದರ್ಶ ಹಾಗೂ ಅವರ ವೌಲ್ಯಗಳನ್ನು ನಾಡಿನ ಜನರಿಗೆ ಪರಿಚುಸುವ ದೃಷ್ಟಿಯಲ್ಲಿ ಕಾರ್ಯಕ್ರಮ ನಡೆಯಬೇಕೆ ಹೊರತು ಒಕ್ಕಲಿಗ ಜನಾಂಗದ ಶಕ್ತಿ ಪ್ರದರ್ಶನಕ್ಕಲ್ಲ. ಸಮುದಾಯಕ್ಕೆ ಧಕ್ಕೆ ಬಂದಾಗ ಸಂಘಟಿತರಾಗಿ ಹಿಂದೆ ಹೋರಾಟ ಮಾಡಿದ್ದುಂಟು. ಮುಂದೆಯೂ ಮಾಡುತ್ತೇವೆ. ಆದರೆ, ಪ್ರಸ್ತುತ ಶಕ್ತಿ ಪ್ರದರ್ಶಿಸುವ ಬದಲು ಸಂಭ್ರಮಿಸುವ ಸಮಯ. ಅಂದಿನ ಕಾರ್ಯಕ್ರಮದಲ್ಲಿ ಯಾರೂ ಜೈ ಒಕ್ಕಲಿಗ ಎಂದು ಕೂಗಬೇಡಿ. ಇದರಿಂದ ಕೆಂಪೇಗೌಡರನ್ನು ನಾವೇ ಒಂದು ಜಾತಿಗೆ ಸೀಮಿತಗೊಳಿಸಿದಂತಾಗುತ್ತದೆ ಎಂದು ಹೇಳಿದರು.

ಸರಕಾರಿ ಅನುದಾನಿತ ಸಂಸ್ಥೆಗಳಲ್ಲಿಯೂ ಕೆಂಪೇಗೌಡ ಜಯಂತಿ ಆಚರಣೆ ನಡೆಯಲಿ. ಈ ಸಂಬಂಧ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸರಕಾರಿ ಕಚೇರಿ ಹಾಗೂ ಅನುದಾನಿತ ಸಂಸ್ಥೆಗಳಲ್ಲಿ ಜಯಂತಿ ಅಚರಣೆ ಮಾಡುವಂತೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಭರವಸೆ ನೀಡಿರುವುದು ಸಂತೋಷವಾಗಿದೆ ಎಂದರು.

ದಸರಾದಂತೆ ಆಚರಿಸಿ
ಸ್ಪಟಿಕಪುರಿ ಮಹಾಸಂಸ್ಥಾನದ ನಂಜಾವಧೂತ ಸ್ವಾಮೀಜಿ ಮಾತನಾಡಿ, ಕೆಂಪೇಗೌಡ ಆಚರಣೆಯು ನಾಡಿನ ಹಬ್ಬವಾಗಿ ಮಾಡಬೇಕಿದೆ. ಮೈಸೂರಿನಲ್ಲಿ ನಡೆಯುವ ದಸರಾ ಹಾಗೇ ಬೆಂಗಳೂರಿನಲ್ಲಿ ದಿನಾಚರಣೆಯನ್ನು ದಸರಾ ಹಬ್ಬದಂತೆ ಆಚರಿಸಬೇಕಿದೆ. ಸರಕಾರ ಒಪ್ಪದಿದ್ದರೂ ಪರ್ಯಾಯವಾಗಿ ನಾವೇ ಆಚರಣೆ ಮಾಡಬೇಕಿದೆ. ಈ ಮೂಲಕ ಕೆಂಪೇಗೌಡರು ಬೆಂಗಳೂರಿಗೆ ನೀಡಿದ ಕೊಡುಗೆ ಬಗ್ಗೆ ಎಲ್ಲರೂ ಸ್ಮರಿಸಬೇಕು ಎಂದರು.

ಗುಜರಾತ್‌ನಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಪ್ರತಿಮೆ ನಿರ್ಮಿಸಲಾಗುತ್ತಿದೆ. ಅದೇ ಮಹಾರಾಷ್ಟ್ರದಲ್ಲಿ ಶಿವಾಜಿ ಪ್ರತಿಮೆ ದೊಡ್ಡ ಮಟ್ಟದಲ್ಲಿ ಪ್ರತಿಷ್ಠಾಪನೆ ಕೆಲಸ ನಡೆಯುತ್ತಿದೆ. ಅದೇ ರೀತಿ ಬೆಂಗಳೂರಿನಲ್ಲಿ ಲಿಬರ್ಟಿ ಪ್ರತಿಮೆ ಮಾದರಿಯಲ್ಲಿ ಕೆಂಪೇಗೌಡ ಪ್ರತಿಮೆ ನಿರ್ಮಿಸುವ ಮೂಲಕ ವಿಶ್ವಕ್ಕೆ ಕೆಂಪೇಗೌಡರನ್ನು ಪರಿಚಯಿಸಬೇಕಿದೆ ಎಂದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ಸರಕಾರದ ವತಿಯಿಂದ ಅಧಿಕೃತವಾಗಿ ಕೆಂಪೇಗೌಡ ಆಚರಣೆಗೆ ಮುಂದಾಗಿರುವುದು ಅಭಿನಂದನೀಯ. ಆದರೆ ಮೊದಲ ವರ್ಷದ ಜಯಂತಿಯನ್ನು ಕೆಂಪೇಗೌಡರು ಕಟ್ಟಿಸಿದ ಕೆರೆಗಳ ಸಂರಕ್ಷಣೆ ವರ್ಷವಾಗಿ ಆಚರಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು. ನಗರದಲ್ಲಿ ಕಲುಷಿತಗೊಂಡಿರುವ ಕೆರೆಗಳನ್ನು ಶುದ್ಧೀಕರಣ ಮಾಡುವ ಮೂಲಕ ಅರ್ಥಪೂರ್ಣವಾಗಿ ಅಚರಿಸಬೇಕು ಎಂದರು.

ಸಂಸದ ಡಿ.ವಿ.ಸದಾನಂದಗೌಡ ಮಾತನಾಡಿ, ಇತರೆ ಸಮಾಜದೊಂದಿಗೆ ಸಂಘರ್ಷಕ್ಕೆ ಇಳಿಯದೆ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಒಟ್ಟಾಗಿ ಕೆಂಪೇಗೌಡ ಜಯಂತಿ ಆಚರಣೆ ಮಾಡಬೇಕಿದೆ. ಮೊದಲ ವರ್ಷ ಸಿದ್ಧತೆಗೆ ಸಮಯಾವಕಾಶ ಕಡಿಮೆಯಿರುವುದರಿಂದ ಮುಂದಿನ ವರ್ಷದಿಂದ ಒಂದು ತಿಂಗಳ ಕಾಲ ಸಿದ್ಧತೆ ನಡೆಸಿ ಜಯಂತಿ ದೊಡ್ಡ ಮಟ್ಟದಲ್ಲಿ ಆಚರಿಸೋಣ ಎಂದು ತಿಳಿಸಿದರು.

ರಾಜ್ಯ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮಾತನಾಡಿ, ನಿರ್ಮಲಾನಂದ ಸ್ವಾಮೀಜಿಗಳ ಸಲಹೆಯಂತೆ ಜೂ.27ರಂದು ಕೆಂಪೇಗೌಡ ಜಯಂತಿಯನ್ನು ಸರಕಾರದ ಮಟ್ಟದಲ್ಲಿ ಆಚರಿಸಲಾಗುತ್ತಿದೆ. ಈ ಸಂಬಂಧ ಸಮಿತಿ ರಚಿಸಬೇಕಿದೆ. ಸಮಿತಿ ಮೂಲಕ ಜನಾಂಗದ ನಾಯಕರನ್ನು ಬೆಳೆಸಬೇಕಿದೆ. ನಾನು ಮತ್ತು ಸದಾನಂದಗೌಡ ಸೇರಿದಂತೆ ಅನೇಕ ನಾಯಕರಿಗೂ ರಿಟೈರ್ಡ್ ಆಗುವ ಸಮಯ ಬಂದಿದ್ದು, ನೂರಾರು ನಾಯಕರನ್ನು ಬೆಳೆಸಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಚಂದ್ರಶೇಖರ ಸ್ವಾಮೀಜಿ, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬೆಟ್ಟೇಗೌಡ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ, ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಮತ್ತು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಬಿ.ಪಿ.ಮಂಜೇಗೌಡ, ವಿಧಾನಪರಿಷತ್ ಸದಸ್ಯ ನಾರಾಯಣಸ್ವಾಮಿ ಸೇರಿದಂತೆ ಇತರರು ಇದ್ದರು.

ರಾಜಕೀಯ ಕ್ಷೇತ್ರದಲ್ಲಿ ಒಬ್ಬರ ಮುಖ ಕಂಡರೆ ಒಬ್ಬರಿಗೆ ಆಗದಂತಹ ಬಿಗುವಿನ, ಜಿದ್ದಾಜಿದ್ದಿನ, ಪೈಪೋಟಿಯ ವಾತಾವರಣ ಸೃಷ್ಟಿಗೆ ಕಾರಣರಾಗಿರುವ ಕಾಂಗ್ರೆಸ್‌ನ ಡಿ.ಕೆ.ಶಿವಕುಮಾರ್ ಮತ್ತು ಜೆಡಿಎಸ್‌ನ ಎಚ್.ಡಿ.ಕುಮಾರಸ್ವಾಮಿ, ಇಬ್ಬರೂ ಇಂದಿನ ಸಭೆಗೆ ಹಾಜರಾಗಿದ್ದು, ಮುಖಾಮುಖಿಯಾದಾಗ ಕೈ ಕುಲುಕಿ ಕುಶಲ ವಿಚಾರಿಸಿದ್ದು, ವಿಶೇಷವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X