Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಭಾಕರ ಭಟ್ ವಿರುದ್ಧ ಸಿಬಿಐ ತನಿಖೆಗೆ...

ಪ್ರಭಾಕರ ಭಟ್ ವಿರುದ್ಧ ಸಿಬಿಐ ತನಿಖೆಗೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ21 Jun 2017 5:01 PM IST
share
ಪ್ರಭಾಕರ ಭಟ್ ವಿರುದ್ಧ ಸಿಬಿಐ ತನಿಖೆಗೆ ಒತ್ತಾಯ

ಮಡಿಕೇರಿ, ಜೂ.21 : ಸಂಘಪರಿವಾರ ಸಂಘಟನೆಯ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಇರುವ ಪ್ರಕರಣಗಳು ಹಾಗೂ ಅವರು ಗಳಿಸಿರುವ ಆಸ್ತಿಯ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್. ರಮಾನಾಥ್, ನಕಲಿ ಹಿಂದುತ್ವದ ಮುಖವಾಡ ತೊಟ್ಟಿರುವ ಪ್ರಭಾಕರ್ ಭಟ್ ಒಂದು ರಾಜಕೀಯ ಪಕ್ಷವನ್ನು ನಿಯಂತ್ರಿಸುವಂತೆ ಪ್ರತಿಬಿಂಬಿಸುತ್ತಾ ತಮ್ಮ ಸಾಮ್ರಾಜ್ಯವನ್ನು ವೃದ್ಧಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಭೂ ವ್ಯವಹಾರದಲ್ಲಿ ತೊಡಗಿರುವ ಇವರು ಬೇನಾಮಿ ಹೆಸರಿನಲ್ಲಿ ಸಾಕಷ್ಟು ಆಸ್ತಿ ಗಳಿಸಿದ್ದಾರೆ. ಇವರ ವಿರುದ್ಧ ಅನೇಕ ಕೋಮು ಪ್ರಚೋದಕ ಪ್ರಕರಣಗಳು ದಾಖಲಾಗಿವೆ. ಆದ್ದರಿಂದ ಆಸ್ತಿಗಳಿಕೆ ಮತ್ತು ಪ್ರಕರಣಗಳ ಬಗ್ಗೆ ಸಿಬಿಐ ತನಿಖೆಯಾಗಬೇಕೆಂದರು.

ಪ್ರಭಾಕರ ಭಟ್‌ರ ಕೋಮು ಪ್ರಚೋದನೆಯಿಂದಾಗಿ ಅಮಾಯಕ ಜೀವಗಳು ಬಲಿಯಾಗಿದ್ದು, ಮೃತಪಟ್ಟ ತಂದೆ ತಾಯಂದಿರ ಶಾಪ ತಟ್ಟಲಿದೆ ಎಂದು ರಮಾನಾಥ್ ಹೇಳಿದರು. ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವ ರಮಾನಾಥ್ ರೈ ಅವರು ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ತೆಗೆದುಕೊಂಡಿದ್ದಾರೆ. ಈ ಕ್ರಮಗಳನ್ನು ಟೀಕಿಸುವುದು ಖಂಡನೀಯವೆಂದು ರಮಾನಾಥ್ ಅಸಮಾಧಾನ ವ್ಯಕ್ತಪಡಿಸಿದರು.

ಪ್ರಭಾಕರ ಭಟ್ ಅವರು ನಿರಂತರ ಕೋಮು ಗಲಭೆ ಸೃಷ್ಟಿಸುತ್ತಿರುವುದರಿಂದ ಕಲ್ಲಡ್ಕ ಭಾಗದಲ್ಲಿ ಆರ್ಥಿಕ ಮತ್ತು ಶೈಕ್ಷಣಿಕ ಅಭಿವೃದ್ಧಿ ಕುಂಠಿತಗೊಂಡಿದೆ. ಈ ಭಾಗದ ಜನರು ಶಾಂತಿ ನೆಲೆಸಬೇಕೆನ್ನುವ ಉದ್ದೇಶದಿಂದ 2013ರ ಚುನಾವಣೆಯಲ್ಲಿ ಬದಲಾವಣೆಯನ್ನು ಬಯಸಿದ್ದರು ಎಂದು ಅಭಿಪ್ರಾಯಪಟ್ಟ ರಮಾನಾಥ್, ಕರಾವಳಿ ಭಾಗದ ಸಮೀಪದಲ್ಲೆ ಇರುವ ಕೊಡಗು ಜಿಲ್ಲೆಗೂ ಕೋಮು ಸಂಘರ್ಷ ವ್ಯಾಪಿಸದಂತೆ ಯುವ ಜನತೆ ಎಚ್ಚೆತ್ತುಕೊಳ್ಳಬೇಕೆಂದು ತಿಳಿಸಿದರು.

ಜಿಲ್ಲೆಯಲ್ಲಿ ರಚನಾತ್ಮಕ ಹೋರಾಟಗಳಿಗೆ ಆದ್ಯತೆ ನೀಡದೆ, ಭಾವನಾತ್ಮಕ ಹೋರಾಟಗಳೆ ವಿಜೃಂಭಿಸುತ್ತಿದೆ. ಕೆಲವು ಶಕ್ತಿಗಳು ತಾವು ಹೇಳಿದಂತೆ ಕೊಡಗು ಜಿಲ್ಲೆ ನಡೆಯಬೇಕೆನ್ನುವ ಮನೋಭಾವ ಹೊಂದಿವೆ. ಪಾಕಿಸ್ತಾನಕ್ಕೆ ಧಿಕ್ಕಾರ ಹೇಳಿದರೆ ಮಾತ್ರ ದೇಶ ಪ್ರೇಮವಲ್ಲ ಎಂದು ಅಭಿಪ್ರಾಯಪಟ್ಟ ಅವರು, ಶಾಂತಿ ಸೌಹಾರ್ದತೆಯನ್ನು ಕಾಪಾಡಲು ಯುವ ಜನತೆ ಮುಂದಾಗಬೆೇಕೆಂದರು. ಪಾಕಿಸ್ತಾನ ಶತ್ರು ರಾಷ್ಟ್ರ ಎನ್ನುವ ವಿಚಾರವನ್ನೆ ಭಾವನಾತ್ಮಕವಾಗಿ ಪರಿವರ್ತಿಸಿ ಶಾಂತಿ ಕದಡುವುದು ಸರಿಯಲ್ಲ. ಪಾಕಿಸ್ತಾನ ಶತ್ರುರಾಷ್ಟ್ರ ಎನ್ನುವ ಪರಿಕಲ್ಪನೆಯೆ ತಪ್ಪು ಎಂದು ಅಭಿಪ್ರಾಯಪಟ್ಟ ರಮಾನಾಥ್, ಏಳನೇ ಹೊಸಕೋಟೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದನ್ನು ಖಂಡಿಸುವುದಾಗಿ ತಿಳಿಸಿದರು.

ಜಿಲ್ಲಾ ಕಾರ್ಯದರ್ಶಿ ನೆರವಂಡ ಉಮೇಶ್ ಮಾತನಾಡಿ, ಕೋಮು ಪ್ರಚೋದನೆ ಎನ್ನುವುದು ಒಂದು ಸೋಂಕಾಗಿ ಪರಿವರ್ತನೆಯಾಗಿದ್ದು, ಕಳೆದ ಕೆಲವು ವರ್ಷಗಳಿಂದ ಜನರು ಸಾಕಷ್ಟು ನೊಂದಿದ್ದಾರೆ ಎಂದು ಬೆೇಸರ ವ್ಯಕ್ತಪಡಿಸಿದರು. 

ಸೌಹಾರ್ದತೆಯ ವಾತಾವರಣ ಕಲುಷಿತವಾಗಬಾರದೆಂದ ಅವರು, ಯಾರೂ ಕೋಮು ಪ್ರಚೋದನೆಗೆ ಒಳಗಾಗಬಾರದೆಂದರು. ಸೂಕ್ಷ್ಮ ಪರಿಸರ ವಲಯ ವಿಚಾರಕ್ಕೆ ಸಂಬಂಧಿಸಿದಂತೆ ಯಾರೇ ಪಕ್ಷಾತೀತ ಹೋರಾಟ ನಡೆಸಿದರು ಅದಕ್ಕೆ ಕಾಂಗ್ರೆಸ್ ಪಕ್ಷದ ಬೆಂಬಲವಿದೆಯೆಂದು ಸ್ಪಷ್ಟಪಡಿಸಿದರು.
ಜೂ.27 ರಂದು ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಸಭೆಯು ನಗರದ ಬಾಲಭವನದಲ್ಲಿ ಬೆಳಗ್ಗೆ 10.30ಕ್ಕೆ ನಡೆಯಲಿದೆ ಎಂದು ಬಿ.ಎಸ್. ರಮಾನಾಥ್ ಇದೇ ಸಂದರ್ಭ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ನಗರಸಭಾ ಸದಸ್ಯ ಪ್ರಕಾಶ್ ಆಚಾರ್ಯ, ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಾನೆಹಿತ್ಲು ಮೊಣ್ಣಪ್ಪ, ಭಾಗಮಂಡಲ ವಲಯ ಕಾಂಗ್ರೆಸ್ ಅಧ್ಯಕ್ಷ ಸುನಿಲ್ ಪತ್ರಾವೋ ಹಾಗೂ ಕಾರ್ಯದರ್ಶಿ ಕುದುಪಜೆ ಪ್ರಕಾಶ್ ಉಪಸ್ಥಿತರಿದ್ದರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X