Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಾನುವಾರು ಕಳ್ಳರಿಗೆ ಕಠಿಣ ಶಿಕ್ಷೆ ನೀಡಿ:...

ಜಾನುವಾರು ಕಳ್ಳರಿಗೆ ಕಠಿಣ ಶಿಕ್ಷೆ ನೀಡಿ: ಸುನ್ನಿ ಮುಸ್ಲಿಂ ಜಮಾಅತ್ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ21 Jun 2017 5:09 PM IST
share

ಮಡಿಕೇರಿ ಜೂ.21: ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಕೊಟ್ಟಿಗೆಗಳಲ್ಲಿ ಕಟ್ಟಿದ್ದ ಮತ್ತು ಮೇಯಲು ಬಿಟ್ಟ ದನಕರುಗಳನ್ನು ಕಳವು ಮಾಡಿರುವ ಪ್ರಕರಣ ಖಂಡನೀಯವಾಗಿದ್ದು, ಜಾನುವಾರುಗಳ ಕಳ್ಳರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಕೊಂಡಂಗೇರಿಯ ಸುನ್ನಿ ಮುಸ್ಲಿಂ ಜಮಾಅತ್ ಒತ್ತಾಯಿಸಿದೆ.

ಪತ್ರಿಕಾ ಹೇಳಿಕೆ ನೀಡಿರುವ ಜಮಾಅತ್‌ನ ಅಧ್ಯಕ್ಷ ಕೆ.ವೈ.ಮುಹಮ್ಮದ್, ತಕ್ಕರಾದ ಕೆ.ಎಂ.ಯಹ್ಯಾ ಹಾಗೂ ಸಮಿತಿ ಸದಸ್ಯರಾದ ಕೆ.ಎಂ.ಆಲಿ, ಜಿಲ್ಲೆಯಲ್ಲಿ ಹಿಂದೂ-ಮುಸ್ಲಿಂ ಸಮುದಾಯದವರು ಪರಸ್ಪರ ಸ್ನೇಹಭಾವ, ಸೌರ್ಹಾತೆಯಿಂದ ಬಾಳುತ್ತಿರುವಾಗ ಕೆಲವರು ಸಹಬಾಳ್ವೆಗೆ ವಿರುದ್ಧವಾದ ಚಟುವಟಿಕೆಗಳನ್ನು ನಡೆಸುವ ಮೂಲಕ ಶಾಂತಿ, ಸಾಮರಸ್ಯಕ್ಕೆ ಹುಳಿ ಹಿಂಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಸ್ಲಾಂ ಧರ್ಮವು ಕಳ್ಳತನ ಮಾಡುವವರ ಕೈಯನ್ನು ಕಡಿಯುವಂತೆ ಆದೇಶಿಸಿದೆ. ಆದರೆ ಧರ್ಮನುಯಾಯಿ ಎಂದು ಹೇಳಿಕೊಳ್ಳುತ್ತಿರುವ ಕೆಲವರು ಗೋವುಗಳನ್ನು ಕಳ್ಳತನ ಮಾಡುವ ಮೂಲಕ ಧರ್ಮ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವುದು ಅಕ್ಷಮ್ಯ ಅಪರಾಧವಾಗಿದೆ. ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಗೋವುಗಳ ಕಳವು ಪ್ರಕರಣವನ್ನು ನಮ್ಮ ಜಮಾಅತ್ ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ.

ನೈಜ ಮುಸ್ಲಿಮರು ಎಂದಿಗೂ ಕಳವು. ಕೊಲೆ, ಅತ್ಯಾಚಾರಗಳಂತಹ ದುಷ್ಕೃತ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದಿಲ್ಲ. ಧರ್ಮದ ತತ್ವಾದರ್ಶಗಳನ್ನು ಗಾಳಿಗೆ ತೂರಿ ನಡೆಯುವ ಕೆಲವು ನಾಮಧಾರಿ ಮುಸ್ಲಿಮರಿಂದ ಇಂತಹ ದುಷ್ಕೃತ್ಯಗಳು ನಡೆಯುತ್ತಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾದಾಗಲೇ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಲು ಸಾಧ್ಯವಾಗಬಹುದು ಎಂದು ಅವರುಗಳು ಅಭಿಪ್ರಾಯಪಟ್ಟಿದ್ದಾರೆ.

ರಮಝಾನ್ ವ್ರತಾಚರಣೆಯ ದಿನಗಳು ಪ್ರತಿಯೋರ್ವ ಮುಸ್ಲಿಮನ ಪಾಲಿಗೂ ಅತ್ಯಂತ ಮಹತ್ವಪೂರ್ಣವಾಗಿದ್ದು, ವ್ರತಕಾಲದಲ್ಲಿ ಸಾಧ್ಯವಾದಷ್ಟು ಒಳಿತನ್ನು, ಪರೋಪಕಾರವನ್ನು ಮಾಡಬೇಕೆಂದು ಮುಸ್ಲಿಂ ಧರ್ಮ ಉಪದೇಶಿಸಿದೆ. ವಸ್ತು ಸ್ಥಿತಿ ಹೀಗಿದ್ದರೂ ಕೆಲವು ಬೆರಳೆಣಿಕೆಯ ಮಂದಿ ಇಡಿಯ ಮುಸ್ಲಿಂ ಸಮೂಹಕ್ಕೆ ಕೆಟ್ಟ ಹೆಸರು ತರುವ ಕೃತ್ಯವನ್ನು ಎಸಗಿದ್ದಾರೆ. ಗೋವುಗಳನ್ನು ಕಳೆದು ಕೊಂಡವರಿಗೆ ಅಗತ್ಯ ಪರಿಹಾರವನ್ನು ಕಳ್ಳತನ ಮಾಡಿದವರಿಂದಲೇ ವಸೂಲಿ ಮಾಡಿ ಕೊಡಬೇಕೆಂದು ಪ್ರಮುಖರು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X