ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸಲು ಕ್ರಮ

ಮಂಗಳೂರು, ಜೂ.21: ಮಂಗಳೂರು ವಿಶ್ವ ವಿದ್ಯಾನಿಲಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 19 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 650 ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
ರಾಜ್ಯ ವಿಧಾನ ಮಂಡಲ ಅಧಿವೇಶನದಲ್ಲಿ ಸರಕಾರದ ಮುಖ್ಯಸಚೇತಕ ಐವನ್ ಡಿಸೋಜರ ಪ್ರಶ್ನೆಗೆ ಅವರು ಉತ್ತರಿಸಿದರು.
ಜೂ.19ರಿಂದ ಕಾಲೇಜುಗಳು ಆರಂಭವಾಗಿದೆ. ಆದರೆ, 19 ಸರಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಬೇಕಿದ್ದ 650 ಅತಿಥಿ ಉಪನ್ಯಾಸಕರ ನೇಮಕಾತಿ ಆಗದೆ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಇದೇ ಕಾರಣ ನೀಡಿ ವಿದ್ಯಾರ್ಥಿಗಳಿಗೆ ರಜೆ ನೀಡಲಾಗುತ್ತಿದೆ ಎಂಬ ಐವನ್‌ರ ಹೇಳಿಕೆಗೆ ಸಚಿವರು ಪ್ರತಿಕ್ರಿಯಿಸಿದರು.
Next Story





