ದಕ್ಷಿಣ ಕನ್ನಡ ಜಿಲ್ಲೆಗೆ ಹೊಸ ಎಸ್ಪಿ
ಎಸ್ಪಿ ಅಣ್ಣಾಮಲೈಯವರಿಗೆ ಜಿಲ್ಲಾ ಭದ್ರತಾ ಉಸ್ತುವಾರಿ

ಮಂಗಳೂರು, ಜೂ.21: ಜಿಲ್ಲೆಯಲ್ಲಿ ಕೋಮು ಗಲಭೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸುಧೀರ್ ಕುಮಾರ್ ರೆಡ್ಡಿಯವರನ್ನು ನೇಮಿಸಲಾಗಿದ್ದು, ಜಿಲ್ಲಾ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಭೂಷಣ್ ಜಿ. ಬೊರಸೆಯವರನ್ನು ವರ್ಗಾವಣೆ ಮಾಡಲಾಗಿದೆ.
ಜಿಲ್ಲಾ ಭದ್ರತಾ ಉಸ್ತುವಾರಿಯನ್ನು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಅವರಿಗೆ ವಹಿಸಲಾಗಿದೆ. ಬಂಟ್ವಾಳ ವೃತ್ತ ನಿರೀಕ್ಷಕರಾಗಿ ಬೆಳ್ಳಿಯಪ್ಪರನ್ನು ನೇಮಕ ಮಾಡಲಾಗಿದ್ದು, ಮಂಜಯ್ಯರನ್ನು ವರ್ಗಾವಣೆ ಮಾಡಲಾಗಿದೆ.
Next Story