ದಕ್ಷಿಣ ಕನ್ನಡ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ನಿಯೋಜನೆ
ಬೆಂಗಳೂರು, ಜೂ. 21: ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಸಿ.ಎಚ್.ಸುಧೀರ್ ಕುಮಾರ್ ರೆಡ್ಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧಿಕಾರಿಯನ್ನಾಗಿ ವರ್ಗಾವಣೆ ಮಾಡಿ ರಾಜ್ಯ ಸರಕಾರ ಬುಧವಾರ ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಭೂಷಣ್ ಗುಲಾಬ್ ರಾವ್ ಬೊರಸೆ ಅವರನ್ನು ಬೆಂಗಳೂರು ನಗರದ ವಿಭಾಗದ(ಆಡಳಿತ) ಉಪ ಪೊಲೀಸ್ ಆಯುಕ್ತ ಸ್ಥಾನಕ್ಕೆ ನಿಯೋಜನೆ ಮಾಡಲಾಗಿದೆ.
ಡಾ.ಚೇತನ್ ಸಿಂಗ್ ರಾಠೋಡ್-ಬೆಂಗಳೂರು ನಗರ ಉತ್ತರ ವಿಭಾಗದ ಡಿಸಿಪಿ, ಜಿ.ರಾಧಿಕಾ-ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ನಿಶಾ ಜೇಮ್ಸ್- ರಾಯಚೂರು ಎಸ್ಪಿ, ಸೀಮಾ ಅನಿಲ್ ಲಾತ್ಕರ್-ಬೆಳಗಾವಿ ನಗರ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯನ್ನಾಗಿ ನೇಮಿಸಿ ವರ್ಗಾವಣೆ ಮಾಡಲಾಗಿದೆ.
Next Story





