Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದುಷ್ಕರ್ಮಿಗಳ ಪತ್ತೆಗೆ ಐದು ತಂಡಗಳ ರಚನೆ:...

ದುಷ್ಕರ್ಮಿಗಳ ಪತ್ತೆಗೆ ಐದು ತಂಡಗಳ ರಚನೆ: ಐಜಿಪಿ

ವಾರ್ತಾಭಾರತಿವಾರ್ತಾಭಾರತಿ21 Jun 2017 9:28 PM IST
share

ಬಂಟ್ವಾಳ, ಜೂ. 21: ಮುಹಮ್ಮದ್ ಅಶ್ರಫ್ ರನ್ನು ಕೊಲೆ ನಡೆಸಿರುವ ದುಷ್ಕರ್ಮಿಗಳನ್ನು ಪತ್ತೆ ಹಚ್ಚಲು ಐದು ವಿಶೇಷ ತಂಡವನ್ನು ರಚಿಸಲಾಗಿದೆ. ಹಂತಕರ ಸುಲಿವು ಲಭ್ಯವಾಗಿದ್ದು ಶೀರ್ಘವೇ ಬಂಧಿಸಲಾಗುವುದು ಎಂದು ಪಶ್ಚಿಮ ವಲಯದ ಐಜಿಪಿ ಪಿ.ಹರಿಶೇಖರನ್ ತಿಳಿಸಿದ್ದಾರೆ. 

ಬುಧವಾರ ಬಂಟ್ವಾಳ ನಗರ ಠಾಣೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಾಲೂಕಿನ ಆಯಕಟ್ಟಿನ ಜಾಗಗಳಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸ್ ಸರ್ಪಗಾವಲು ಇರಿಸಲಾಗಿದೆ. ತಪಾಸಣೆ ಸಂದರ್ಭದಲ್ಲಿ ಯಾರಲ್ಲಾದರೂ ಮಾರಕಾಸ್ತ್ರ ಸಹಿತ ಯಾವುದೇ ಆಯುಧ ಪತ್ತೆಯಾದಲ್ಲಿ ಅಂಥವರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ. 

ಕಳೆದ ಒಂದು ತಿಂಗಳಿಂದ ಬಂಟ್ವಾಳ ಪರಿಸರದಲ್ಲಿ ನಡೆಯುತ್ತಿರುವ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಬಂದೋಬಸ್ತ್ ಮತ್ತು ತನಿಖೆಯ ಪೂರ್ಣ ಹೊಣೆಗಾರಿಕೆಯನ್ನು ಖುದ್ದು ತಾನೆ ವಹಿಸಿದ್ದು, ಇಲ್ಲೇ ಮೊಕ್ಕಾಂ ಹೂಡುತ್ತೇನೆ. ಇತ್ತೀಚಿನ ದಿನಗಳಲ್ಲಿ ಬಂಟ್ವಾಳದಲ್ಲಿ ಪೊಲೀಸರಿಗೆ ಸವಾಲು ಹಾಕುವಂಥ ಪ್ರಕ್ರಿಯೆಗಳು ನಡೆಯುತ್ತಿದ್ದು, ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಜಾತಿ, ಧರ್ಮದ ಹೆಸರಿನ ಸಂಘಟನೆಗಳು ಶಾಂತಿ ಕಾಪಾಡಲು ಅವಕಾಶ ನೀಡಬೇಕು. ಯಾವುದೇ ಅನುಮಾನಗಳು ಇದ್ದಲ್ಲಿ ಸಂಘಟನೆಯ ಮುಖಂಡರು ತನ್ನನ್ನು ನೇರವಾಗಿ ಭೇಟಿಯಾಗಿ ಚರ್ಚೆ ನಡೆಸಲು ಮುಕ್ತ ಅವಕಾಶ ಇದೆ ಎಂದ ಐಜಿಪಿ, ಅನುಮಾನದ ಆಧಾರದಲ್ಲಿ ಯಾರ ಮೇಲೂ ಕೈ ಮಾಡುವ ದುಸ್ಸಾಹಸ ಸಲ್ಲದು ಎಂದು ಎಚ್ಚರಿಸಿದರು. 

ಕಲ್ಲಡ್ಕ, ಮಾಣಿ, ಬಿ.ಸಿ.ರೋಡ್, ಕೈಕಂಬ, ಫರಂಗಿಪೇಟೆ, ಬಂಟ್ವಾಳ ಪರಿಸರದಲ್ಲಿ ಪರಿಸ್ಥಿತಿ ಹತೋಟಿಗೆ ತರುವ ನಿಟ್ಟಿನಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಜನರ ಆಸ್ತಿ ಪಾಸ್ತಿ ಹಾಗೂ ಶಾಂತಿ ಕಾಪಾಡುವುದು ಪೊಲೀಸರ ಹೊಣೆಗಾರಿಕೆಯಾಗಿದ್ದು, ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದ ಅವರು ಯಾವುದನ್ನೂ ಕೋಮು ಭಾವನೆಯಲ್ಲಿ ಗಮನಿಸಬೇಡಿ ಎಂದು ಮನವಿ ಮಾಡಿದರು.

ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳಿಂದಲೂ ಹೆಚ್ಚುವರಿ ಪೊಲೀಸರನ್ನು ಬಂದೋಬಸ್ತ್ ಗಾಗಿ ಏರ್ಪಡಿಸಲಾಗಿದ್ದು, 10 ಡಿಆರ್ ಸಹಿತ ಹೆಚ್ಚುವರಿ ಕೆಎಸ್‍ಆರ್ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ನಕ್ಸಲ್ ನಿಗ್ರಹ ದಳದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ತಾನೇನಾದರೂ ಎಸ್ಪಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರೆ, ಪರಿಸ್ಥಿತಿ ಹತೋಟಿಗೆ ತರುತ್ತಿದ್ದೆ ಎಂದರು.

ಊಹಾ ಪೋಹಗಳಿಗೆ ಕಿವಿಗೊಡಬೇಡಿ:

ಪ್ರಸಕ್ತ ಸಮಯದಲ್ಲಿ ಹರಡುವ ವದಂತಿ, ಊಹಾಪೋಹಗಳಿಗೆ ಕಿವಿಗೊಡಬೇಡಿ. ಕಳೆದ ಒಂದು ತಿಂಗಳಿನಿಂದ ಪೊಲೀಸರು ಇಲ್ಲೇ ಬೀಡುಬಿಟ್ಟಿದ್ದಾರೆ. ಅವರಿಗೂ ಸಂಸಾರವಿದೆ. ಠಾಣೆಗೆ ಸಮಸ್ಯೆ ಹೇಳಿಕೊಂಡು ಬರುವಂಥ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲು ಅಸಾಧ್ಯವಾಗುತ್ತಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲರೂ ಸಹರಿಸಿ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X