ಅಸಹಾಯಕತೆ ಪ್ರದರ್ಶಿಸುವ ಸಚಿವ ರೈ ರಾಜೀನಾಮೆ ನೀಡಲಿ: ಇಲ್ಯಾಸ್ ಮುಹಮ್ಮದ್ ತುಂಬೆ

ಮಂಗಳೂರು, ಜೂ.22: ಪೊಲೀಸರು ನಮ್ಮ ಮಾತನ್ನು ಕೇಳುತ್ತಿಲ್ಲ ಎನ್ನುವ ಮೂಲಕ ಸಚಿವ ಸ್ಥಾನದಲ್ಲಿರುವ ರಮಾನಾಥ ರೈಯವರು ಅಸಹಾಯಕತೆಯನ್ನು ಪ್ರದರ್ಶಿಸಿದ್ದಾರೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮು ಗಲಭೆಯ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಮಾನಾಥ ರೈ ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಎಸ್ ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ವಿಫಲವಾಗಿದೆ. ಕರಾವಳಿಯಲ್ಲಿ ಪದೇ ಪದೇ ಕೋಮು ಗಲಭೆಗಳನ್ನು ಸೃಷ್ಟಿಸುತ್ತಿರುವ ಸಂಘಪರಿವಾರ ಸಂಘಟನೆಗಳನ್ನು ನಿಷೇಧಿಸಬೇಕು ಎಂದರು.
ಅಶ್ರಫ್ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು, ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಈ ಸಂದರ್ಭ ಅವರು ಒತ್ತಾಯಿಸಿದರು,
Next Story





