ಬ್ಯಾರೀಸ್: ವಿಶ್ವಯೋಗ ದಿನಾಚರಣೆ

ಕುಂದಾಪುರ, ಜೂ. 22: ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆ ಕೋಡಿ ಕುಂದಾಪುರ ಇಲ್ಲಿ ವಿಶ್ವಯೋಗ ದಿನಾಚರಣೆಯನ್ನು ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ಹಾಗೂ ಬ್ಯಾರೀಸ್ ಶಿಕ್ಷಣ ಮಹಾ ವಿದ್ಯಾಲಯ ಕೋಡಿ ಸಹಯೋಗದಲ್ಲಿ ಆಚರಿಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ, ಯೋಗ ತರಬೇತಿದಾರರಾಗಿ ಆಮಿಸಿದ್ದ ರಾಘೇಂದ್ರ ಚಿಕ್ಕೇರ ಇವರು ವಿದ್ಯಾರ್ಥಿಗಳಿಗೆ ಯೋಗದ ಮಹತ್ವ ತಿಳಿಸಿ, ಯೋಗಾಭ್ಯಾಸ ಮಾಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆ ಕೋಡಿ ಕುಂದಾಪುರ ಇದರ ಅಧ್ಯಕ್ಷ ಹಾಜಿ ಮಾಸ್ಟರ್ ಮೆಹಮೂದ್ ವಹಿಸಿದರು. ಸಿದ್ದಪ್ಪ ಕೆ. ಎಸ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ವೇದಿಕೆಯಲ್ಲಿ ಬ್ಯಾರೀಸ್ ಡಿ.ಎಡ್. ಕಾಲೇಜಿನ ಪ್ರಾಂಶುಪಾಲರು ಫಿದೌಸ್, ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ( ಸಿ.ಬಿ.ಎಸ್.ಸಿ) ಪ್ರಾಂಶುಪಾಲರು ರೇಶ್ಮಾ ಡಿಸೋಜಾ ಉಪಸ್ಥಿತರಿದ್ದರು. ಶಿಲ್ಪಶ್ರೀ ಕಾರ್ಯಕ್ರಮ ನಿರೂಪಿಸಿದರು. ಮಲ್ಲಿಕಾ ಸ್ವಾಗತಿಸಿ, ನೇತ್ರಾವತಿ ವಂದಿಸಿದರು.
Next Story





