ಶಿಕ್ಷಕ ಮಹಾವಿದ್ಯಾಲಯದಲ್ಲಿ ಯೋಗ ದಿನಾಚರಣೆ

ಮಂಗಳೂರು ಜೂ.23: ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಇತ್ತೀಚೆಗೆ ಆಯೋಜಿಸಲಾಗಿತ್ತು.
ಯೋಗ ಗುರುಗಳಾದ ಪ್ರಕಾಶ ಮುಡಿತ್ತಾಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಪ್ರಾಂಶುಪಾಲ ನಾಗೇಂದ್ರ ಮಧ್ಯಸ್ಥ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ರವೀಂದ್ರರ ಮಾರ್ಗದರ್ಶನದಲ್ಲಿ ಪ್ರಶಿಕ್ಷಣಾರ್ಥಿಗಳು ಪ್ರಾತ್ಯಕ್ಷಿಕೆ ನೀಡಿದರು.
ಹನುಮಂತ ಸ್ವಾಗತಿಸಿದರು. ಗುರಪ್ಪ ವಂದಿಸಿದರು. ಮೋಹನ್ ಕಾರ್ಯಕ್ರಮ ನಿರೂಪಿಸಿದರು.
Next Story





