Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮನೆಯಂಗಳದಲ್ಲಿ ಮಹಿಳಾ ಜಾಗೃತಿ ಕಾರ್ಯಕ್ರಮ

ಮನೆಯಂಗಳದಲ್ಲಿ ಮಹಿಳಾ ಜಾಗೃತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ23 Jun 2017 5:30 PM IST
share

ಪುತ್ತೂರು, ಜೂ.23:  ಕೌಟುಂಬಿಕ ಹಾಗೂ ಕೆಲಸದ ಒತ್ತಡಗಳಿಂದಾಗಿ ತಮ್ಮ ವೈಯುಕ್ತಿಕ ಆರೋಗ್ಯ ಮತ್ತಿತರ ಸಮಸ್ಯೆಗಳನ್ನು ನಿರ್ಲಕ್ಷಿಸಿ ಬದುಕುತ್ತಿರುವ ಮಹಿಳೆಯರ ಮನಸ್ಸನ್ನು ಅರಳಿಸಿ ಅರಿವು ಮೂಡಿಸುವ ಮನೆಯಂಗಳದ ಮಹಿಳಾ ಜಾಗೃತಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯುವಂತಾಗಬೇಕೆಂದು ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಗಿರಿಜಾ ಧನಂಜಯ್ ತಿಳಿಸಿದರು.

ಅವರು ಶುಕ್ರವಾರ ಜನ ಶಿಕ್ಷಣ ಟ್ರಸ್ಟ್, ದಿ ಹಂಗರ್ ಪ್ರೋಜೆಕ್ಟ್, ಜಾಗೃತಿ ವೇದಿಕೆಯ ಸಹಭಾಗಿತ್ವದಲ್ಲಿ ಕೊಳ್ತಿಗೆ ಗ್ರಾಮದ ಸುಗ್ರಾಮ ಸದಸ್ಯೆ ಯಶೋಧಾ ಅವರ ಮನೆಯಂಗಳದಲ್ಲಿ ನಡೆದ ಮಹಿಳಾ ಜಾಗೃತಿ ಕಾರ್ಯಕ್ರಮದಲ್ಲಿ ಮಹಿಳೆಯರ ಕುಂದುಕೊರತೆ ವಿಚಾರಣೆ, ಮಾಹಿತಿ ವಿನಿಮಯದ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದರು.

 ಮಹಿಳೆಯರ ಆರೋಗ್ಯ ಮತ್ತು ಅಭಿವೃದ್ಧಿಗೆ ಪೂರಕವಾಗಿರುವ ವೈಯುಕ್ತಿಕ ಗೃಹ ಹಾಗೂ ಗ್ರಾಮದ ಸಂಪೂರ್ಣ ಸ್ವಚ್ಚತೆ, ಉದ್ಯೋಗ ಖಾತರಿ ಯೋಜನೆಯ ಪರಿಣಾಮಕಾರಿ ಅನುಷ್ಟಾನ, ಮಹಿಳೆಯರ ಮೇಲಿನ ಹಿಂಸೆಯನ್ನು ತಡೆಗಟ್ಟುವ ಕಾರ್ಯಗಳನ್ನು ಗ್ರಾಮ ಪಂಚಾಯತ್, ಸುಗ್ರಾಮ, ಜಾಗೃತಿ ವೇದಿಕೆಯ ಸಹಭಾಗಿತ್ವದಲ್ಲಿ ನಿರ್ವಹಿಸಲಾಗುವುದು ಎಂದು ತಿಳಿಸಿದರು.

ಪುತ್ತೂರು ಮಹಿಳಾ ಪೋಲಿಸ್ ಠಾಣೆಯ ಎ.ಎಸ್.ಐ ಸೇಸಮ್ಮ ಸಂವಾದಕ್ಕೆ ಚಾಲನೆ ನೀಡಿ ಮಾತನಾಡಿದರು. ಮಹಿಳೆಯರ ಮತ್ತು ಮಕ್ಕಳ ರಕ್ಷಣೆಗೆ ಇರುವ ವಿಶೇಷ ಕಾನೂನು ಮತ್ತು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಮಹಾತ್ಮಾಗಾಂಧೀ ನರೇಗಾದ ಮಾಜಿ ಓಂಬಡ್ಸ್‌ಮನ್ ಶೀನ ಶೆಟ್ಟಿ ಅವರು ಕಿಶೋರಿಯರ ಮತ್ತು ಮಹಿಳೆಯರ ಮೇಲೆ ಹೆಚ್ಚಾಗುತ್ತಿರುವ ಹಿಂಸೆ, ಬಾಲ್ಯವಿವಾಹ, ಗೃಹ ಹಾಗೂ ಗ್ರಾಮದ ಸ್ವಚ್ಚತೆ, ದುಡಿಯುವ ಕೈಗಳಿಗೆ ಕೆಲಸದ ಖಾತರಿಯೊಂದಿಗೆ ನೆಲ ಜಲ ಸಂರಕ್ಷಣೆ, ಬಡವರ ಬದುಕಿಗೆ ಭದ್ರತೆ ನೀಡುವ ಉದ್ಯೋಗ ಖಾತರಿ ಯೋಜನೆ ಬಗ್ಗೆ ಮಾಹಿತಿ ನೀಡಿ ಸಂವಾದ ನಡೆಸಿದರು.

ಜನ ಶಿಕ್ಷಣ ಟ್ರಸ್ಟ್‌ನ ನಿರ್ದೇಶಕ ಕೃಷ್ಣ ಮೂಲ್ಯ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಲಕ್ಷ್ಮಿ, ಸದಸ್ಯೆಯರಾದ ಲಲಿತಾ, ವಾರಿಜ, ಗ್ರಾಮ ವಿಕಾಸ ಕೇಂದ್ರದ ಪ್ರೇರಕಿ ಪುಷ್ಪಲತಾ, ಸ್ಥಳೀಯ ಮುಖಂಡರಾದ ಧನಂಜಯ, ಅಮಲಾ ರಾಮಚಂದ್ರ, ಅಂಗನವಾಡಿ ಕಾರ್ಯಕರ್ತೆ ಚಂದ್ರಾವತಿ, ಪೂರ್ಣಿಮಾ, ಆಶಾ ಕಾರ್ಯಕರ್ತೆ ರೇವತಿ ಸಂವಾದದಲ್ಲಿ ಭಾಗವಹಿಸಿ ಮಾಹಿತಿ ನೀಡಿದರು. ಮನೆಯಂಗಳ ಮಹಿಳಾ ಜಾಗೃತಿ ಕಾರ್ಯಕ್ರಮವನ್ನು ಯಶೋಧಾ, ಕೋಟ್ಯಪ್ಪ ಪೂಜಾರಿ, ಅಶ್ವಥ್ ಸಂಯೋಜಿಸಿದರು.

                                                         

share
ವಾರ್ತಾಭಾರತಿ
ವಾರ್ತಾಭಾರತಿ
Next Story
X