ಮದ್ರಸದಲ್ಲಿ ದೂರು ಪೆಟ್ಟಿಗೆ ತೆರೆಯಲು ಸೂಚನೆ
ಮಂಗಳೂರು, ಜೂ,23: ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016ರ ಜಿಲ್ಲಾ ಮಟ್ಟದ ಸಮಿತಿಯ ಸಭೆಯು ಬುಧವಾರ ಜಿಲ್ಲಾಧಿಕಾರಿ ಹಾಗೂ ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಆಡಳಿತಾಧಿಕಾರಿ ಡಾ.ಕೆ.ಜಿ.ಜಗದೀಶ್‌ರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಭೆಯಲ್ಲಿ ಜಿಲ್ಲೆಯ ಎಲ್ಲ ಮದ್ರಸಗಳಲ್ಲಿ ಮಕ್ಕಳ ರಕ್ಷಣಾ ಸಮಿತಿ ಹಾಗೂ ಮಕ್ಕಳ ಸಲಹಾ ಪೆಟ್ಟಿಗೆ ತೆರೆಯಲು ಜಿಲ್ಲಾ ವಕ್ಫ್ ಅಧಿಕಾರಿಗೆ ನಿರ್ದೇಶನ ನೀಡಿದರು.
ಹಾಗಾಗಿ ಜಿಲ್ಲೆಯ ಎಲ್ಲ ಮದ್ರಸಗಳಲ್ಲಿ ಮಕ್ಕಳ ರಕ್ಷಣಾ ಸಮಿತಿ ರಚಿಸಬೇಕು ಮತ್ತು ದೂರು ಪೆಟ್ಟಿಗೆಯನ್ನು ತೆರೆಯಲು ಜಿಲ್ಲಾ ವಕ್ಫ್ ಅಧಿಕಾರಿ ಮನವಿ ಮಾಡಿದ್ದಾರೆ.
Next Story





