ಚೀನಾದಲ್ಲಿ ಭೂ ಕುಸಿತ; 141ಕ್ಕೂ ಆಧಿಕ ಸಾವು

ಬೀಜಿಂಗ್, ಜೂ.24: ನೈರುತ್ಯ ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ಭೂಕುಸಿತದಿಂದಾಗಿ ಕನಿಷ್ಟ 141ಕ್ಕೂ ಅಧಿಕ ಮಂದಿ ಜೀವಂತ ಸಮಾಧಿಯಾಗಿದ್ದಾರೆ .
ನೈರುತ್ಯ ಚೀನಾದ ಸಿಚುವಾನ್ ಪ್ರಾಂತ್ಯದ ಕ್ಸಿನ್ ಮೋ ಗ್ರಾಮದ ಗುಡ್ಡ ಕುಸಿದ ಪರಿಣಾಮವಾಗಿ ಅಲ್ಲಿದ್ದ ಸುಮಾರು 40ಕ್ಕೂ ಹೆಚ್ಚು ಮನೆಗಳು ಹಾನಿಗೊಂಡಿದ್ದು ನೂರನಲುವತ್ತಕ್ಕೂ ಅಧಿಕ ಮಂದಿ ಮಣ್ಣಿನ ಅವಶೇಷಗಳಡಿಯಲ್ಲಿ ಸಮಾಧಿಯಾಗಿದ್ದಾರೆ ಎಂದು ಎಂದು ಚೀನಾ ಮಾಧ್ಯಮ ವರದಿ ಮಾಡಿದೆ.
ಚೀನಾದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಸುಮಾರು 1 ಕಿ.ಮೀ ವರಗೂ ಮಣಿನ ರಾಶಿ ಕುಸಿದಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಹುಬೈ ಪಾಂತ್ಯದಲ್ಲಿ ಕಳೆದ ಜವರಿಯಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ 12 ಮಂದಿ ಮೃತಪಟ್ಟಿದ್ದರು. 2015ರ ಡಿಸೆಂಬರ್ ನಲ್ಲಿ ಶೆನ್ಝೆನ್ ನಲ್ಲಿ ಸಂಭವಿಸಿದ ಭೂ ಕುಸಿತದಿಂದ 70ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು.
Next Story





