ಹೆಲ್ಪ್ ಇಂಡಿಯಾ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ

ಮಂಗಳೂರು, ಜೂ.24: ಸಮಾಜದಲ್ಲಿ ನಾವೆಲ್ಲರೂ ಒಂದೇ ಎನ್ನುವ ಸಂದೇಶ ಇಂದಿನ ಅಗತ್ಯ. ಇಫ್ತಾರ್‌ನಂತಹ ಸೌಹಾರ್ದ ಕೂಟಗಳಿಂದಾಗಿ ಸೌಹಾರ್ದ ಸಮಾಜ ನಿರ್ಮಾಣ ಸಾಧ್ಯ ಎಂದು ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.
ತೊಕ್ಕೊಟ್ಟಿನಲ್ಲಿ ಹೆಲ್ಪ್ ಇಂಡಿಯಾ ವತಿಯಿಂದ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಮುಡಾ ಮಾಜಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಮಾಜಿ ಶಾಸಕ ಕೆ.ಜಯರಾಮ ಶೆಟ್ಟಿ, ದೇರಳಕಟ್ಟೆ ವಿದ್ಯಾರತ್ನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಜೆಡಿಎಸ್ ರಾಷ್ಟ್ರೀಯ ಸಮಿತಿ ಸದಸ್ಯ ಹೈದರ್ ಪರ್ತಿಪ್ಪಾಡಿ, ನ್ಯಾಯವಾದಿ ರೋಶನ್, ಕ್ಷೇತ್ರ ಬಿಜೆಪಿ ಮಾಜಿ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್, ತುರವೇ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು, ಹೆಲ್ಪ್‌ಇಂಡಿಯಾ ತೊಕ್ಕೊಟ್ಟು ಘಟಕಾಧ್ಯಕ್ಷ ಯು.ಟಿ. ತೌಸೀಫ್, ಸ್ಥಾಪಕ ಕಾರ್ಯದರ್ಶಿ ರಾಝಿಕ್ ಉಳ್ಳಾಲ್, ಉಳ್ಳಾಲ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಉಸ್ಮಾನ್ ಕಲ್ಲಾಪು ಉಪಸ್ಥಿತರಿದ್ದರು.
ಜೆಪ್ಪುದಾರುಲ್ ಐಮನ್ ಧರ್ಮಗುರು ಮೌಲಾನ ಡಾ.ಮುಹಮ್ಮದ್ ಹಫೀಝ್ ರಮಝಾನ್ ಸಂದೇಶ ನೀಡಿದರು. ಅಹ್ಮದ್ ತಮೀಮ್ ಕಿರಾಅತ್ ಪಠಿಸಿದರು. ಪ್ರಧಾನ ಕಾರ್ಯದರ್ಶಿ ಶಕೀಲ್ ಅಹ್ಮದ್ ತುಂಬೆ ಸ್ವಾಗತಿಸಿದರು.





