ಐಎಎಸ್ ತರಬೇತಿ: ಸಾಮಾನ್ಯ ಪ್ರವೇಶ ಪರೀಕ್ಷೆ
ಮಂಗಳೂರು, ಜೂ.24: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2017-18ನೇ ಸಾಲಿಗೆ ಉಚಿತವಾಗಿ ನೀಡುವ ಐ.ಎ.ಎಸ್. ಮತ್ತು ಕೆ.ಎ.ಎಸ್. ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗಳಿಗಾಗಿ ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ಜೂ.25ರಂದು ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ.
ಹೆಚ್ಚಿನ ವಿವರಗಳಿಗೆ ದೂ.ಸಂ 080-65970009ನ್ನು ಸಂಪರ್ಕಿಸಲು ದ.ಕ.ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





