Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗಿನಲ್ಲಿ ಉತ್ತಮ ಮಳೆ : ಮಂಜು,...

ಕೊಡಗಿನಲ್ಲಿ ಉತ್ತಮ ಮಳೆ : ಮಂಜು, ಮಳೆಗೆಂದೇ ಹರಿದು ಬಂತು ಪ್ರವಾಸಿಗರ ದಂಡು !

ವಾರ್ತಾಭಾರತಿವಾರ್ತಾಭಾರತಿ25 Jun 2017 6:10 PM IST
share
ಕೊಡಗಿನಲ್ಲಿ ಉತ್ತಮ ಮಳೆ : ಮಂಜು, ಮಳೆಗೆಂದೇ ಹರಿದು ಬಂತು ಪ್ರವಾಸಿಗರ ದಂಡು !

ಮಡಿಕೇರಿ ಜೂ.25: ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಮಡಿಕೇರಿಯಲ್ಲಿ ಮಂಜು ಮಳೆಗಾಗಿಯೇ ಪ್ರವಾಸಿಗರ ಆಗಮನ ಹೆಚ್ಚಾಗಿದೆ.
ಮೇ ಕೊನೆಯ ವಾರದಿಂದಲೇ ಮಳೆಯಾಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದ ಕಾವೇರಿ ನಾಡು ಕೊಡಗಿಗೆ ಜೂನ್ ಕೊನೆಯ ವಾರದಲ್ಲಿ ಮಳೆಯಾಗುತ್ತಿದೆ.

ಕಳೆದ ಎರಡು ದಿನಗಳಿಂದ ಮಡಿಕೇರಿ, ಸೋಮವಾರಪೇಟೆ, ತಲಕಾವೇರಿ, ಭಾಗಮಂಡಲ, ಸಿದ್ದಾಪುರ ವ್ಯಾಪ್ತಿಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ. ಮಡಿಕೇರಿ ನಗರದಲ್ಲಿ ಚರಂಡಿಗಳ ಅವ್ಯವಸ್ಥೆಯಿಂದ ರಸ್ತೆ ತುಂಬಾ ನೀರು ಹರಿಯಿತು. ಪ್ರವಾಸಿಗರ ವಾಹನವೂ ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ವಾಹನ ಚಾಲಕರು ಹಾಗೂ ಪಾದಾಚಾರಿಗಳು ಕೆಸರಿನಿಂದ ಪರದಾಡುವಂತ್ತಾಯಿತು. ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ಆಟೋರಿಕ್ಷಾಗಳು ತೆರಳಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಕೊಂಚ ಬಿಡುವು ನೀಡುತ್ತಾ ಮಳೆಯಾದರೂ ಚರಂಡಿ, ತೋಡುಗಳು ತುಂಬಿ ಹರಿಯುತ್ತಿವೆ. ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗುವ ಕಾರಣದಿಂದ ಮಡಿಕೇರಿ ನಗರಸಭೆ ಈಗಾಗಲೇ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಎತ್ತರ ಹಾಗೂ ತಗ್ಗು ಪ್ರದೇಶಗಳ ನಿವಾಸಿಗಳಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಅಧಿಕಾರಿಗಳು ಸೂಚನೆಯನ್ನು ನೀಡಿದ್ದಾರೆ.
 
ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಮಂಜು ಸಹಿತ ಉತ್ತಮ ಮಳೆಯಾಗುತ್ತಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಹರಿವು ಹೆಚ್ಚಾಗಿದೆ.

:: ಮಳೆ ವಿವರ ::

ಕೊಡಗು ಜಿಲ್ಲೆಯ ಇಂದಿನ ಸರಾಸರಿ ಮಳೆ 23.5 ಮಿ.ಮೀ. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 35.9 ಮಿ.ಮೀ. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 16.6 ಮಿ.ಮೀ. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 18.2 ಮಿ.ಮೀ. ಮಳೆಯಾಗಿದೆ. ಮಡಿಕೇರಿ ಕಸಬಾ 28.6, ನಾಪೋಕ್ಲು 34, ಸಂಪಾಜೆ 32.2, ಭಾಗಮಂಡಲ 49, ವಿರಾಜಪೇಟೆ 13.6, ಹುದಿಕೇರಿ 27.2, ಶ್ರೀಮಂಗಲ 22.6, ಪೊನ್ನಂಪೇಟೆ 10, ಅಮ್ಮತ್ತಿ 16.5, ಬಾಳೆಲೆ 10, ಸೋಮವಾರಪೇಟೆ ಕಸಬಾ 10.2, ಶನಿವಾರಸಂತೆ 25.2, ಶಾಂತಳ್ಳಿ 37.2, ಕೊಡ್ಲಿಪೇಟೆ 17, ಕುಶಾಲನಗರ 9.8, ಸುಂಟಿಕೊಪ್ಪ 10 ಮಿ.ಮೀ. ಮಳೆಯಾಗಿದೆ.

:: ಹಾರಂಗಿ ನೀರಿನ ಮಟ್ಟ ::

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2816.29 ಅಡಿಗಳು, ಹಾರಂಗಿಯಲ್ಲಿ ಬಿದ್ದ ಮಳೆ 10.2 ಮಿ.ಮೀ. ಇಂದಿನ ನೀರಿನ ಒಳ ಹರಿವು 680 ಕ್ಯೂಸೆಕ್.
 
:: ಹರಿದು ಬಂದ ಪ್ರವಾಸಿಗರ ದಂಡು ::

ಸೋಮವಾರ ಕೂಡ ಸರಕಾರಿ ರಜೆ ಇರುವ ಕಾರಣ ಶನಿವಾರದಿಂದಲೇ ಪ್ರವಾಸಿಗರ ದಂಡು ಕೊಡಗಿಗೆ ಹರಿದು ಬಂತು. ಹೆಸರುವಾಸಿ ಪ್ರವಾಸಿತಾಣ ರಾಜಾಸೀಟು, ಅಬ್ಬಿಜಲಪಾತ, ಮಾಂದಲಪಟ್ಟಿಯಲ್ಲಿ ಸುರಿಯುತ್ತಿದ್ದ ಮಳೆಯ ನಡುವೆಯೂ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಮೋಜು ಮಸ್ತಿಯಲ್ಲಿ ತೊಡಗಿದರು.

ಮಂಜು, ಮಳೆಯಲ್ಲಿ ನೆನೆದು ಕೇಕೇ ಹಾಕಿದರು, ಸೆಲ್ಫಿ ಕ್ಲಿಕ್ಕಿಸಿದರು. ಅಧಿಕ ಸಂಖ್ಯೆಯ ಪ್ರವಾಸಿ ವಾಹನಗಳ ಕಾರಣದಿಂದ ಪ್ರವಾಸಿತಾಣಗಳಲ್ಲಿ ವಾಹನದಟ್ಟಣೆ ಇತ್ತು. ಎಟಿಎಂಗಳಲ್ಲಿ ನಗದು ಖಾಲಿಯಾಗಿ ಪ್ರವಾಸಿಗರು ಪರದಾಡುವ ಪರಿಸ್ಥಿತಿಯೂ ನಿರ್ಮಾಣವಾಗಿತ್ತು. ಹೊಟೇಲ್, ಹೋಂಸ್ಟೇಗಳು ಬಹುತೇಕ ಭರ್ತಿಯಾಗಿದ್ದವು. ಮಳೆಯಲ್ಲೇ ಮೈ ಮರೆಯುವುದಕ್ಕಾಗಿ ಮಡಿಕೇರಿಗೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪ್ರವಾಸಿಗರ ನಿರೀಕ್ಷೆಯಂತೆ ಮಳೆಯೂ ಸಾಥ್ ನೀಡುತ್ತಿದೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X