ಅವಧಿ ಪೂರ್ವ ಚುನಾವಣೆಯಿಲ್ಲ: ಸಿಎಂ ಸ್ಪಷ್ಟನೆ

ಹಾಸನ, ಜೂ.25: ವಿಧಾನಸಭಾ ಚುನಾವಣೆಯು ನಿಗದಿಯಂತೆಯೇ ನಡೆಯಲಿದ್ದು ಯಾವುದೇ ಕಾರಣಕ್ಕೂ ಅವಧಿ ಪೂರ್ವ ಚುನಾವಣೆಯಿಲ್ಲ. ಈ ವಿಚಾರದಲ್ಲಿ ಬಿಜೆಪಿ ವಿನಾ ಕಾರಣ ಗೊಂದಲ ಸೃಷ್ಟಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯು ನಿಗದಿಯಂತೆ ಎಪ್ರಿಲ್-ಮೇನಲ್ಲಿ ನಡೆಯಲಿದೆ. ಅವಧಿಗಿಂತ ಮೊದಲೇ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ ಎಂಬುದೆಲ್ಲವೂ ಸತ್ಯಕ್ಕೆ ದೂರವಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ಇತ್ತೀಚೆಗೆ ರೈತರ ಸಾಲ ಮನ್ನಾದಂತಹ ಮಹತ್ವದ ತೀರ್ಮಾನ ತೆಗೆದುಕೊಂಡಿರುವ ಸಿದ್ದರಾಮಯ್ಯ ಅವಧಿಗಿಂತ ಮೊದಲೇ ಚುನಾವಣೆ ನಡೆಸಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಂಶಯ ವ್ಯಕ್ತಪಡಿಸಿದ್ದರು. .
Next Story





