ಜೀಪ್ ಪಲ್ಟಿ: ಕೇರಳದ ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ

ಶಿವಮೊಗ್ಗ, ಜೂ. 26: ಚಾಲಕನ ನಿಯಂತ್ರಣ ಕಳೆದುಕೊಂಡ ಜೀಪ್‌ವೊಂದು ಉರುಳಿಬಿದ್ದ ಪರಿಣಾಮ ಕೇರಳದ ಮಹಿಳೆಯೋರ್ವರು ಮೃತಪಟ್ಟು, ಏಳು ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಕೊಡಚಾದ್ರಿ ಬೆಟ್ಟದಲ್ಲಿ ಸೋಮವಾರ ಮಧ್ಯಾಹ್ನ ವರದಿಯಾಗಿದೆ.
ಸವಿತಾ (38) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಕುಂದಾಪುರದ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ಹೇಳಲಾಗಿದೆ.
ಘಟನೆಯಲ್ಲಿ ಉಳಿದ ಪ್ರವಾಸಿಗರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ನಗರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ದೇವರಾಯ ಮತ್ತವರ ಸಿಬ್ಬಂದಿ ಘಟನಾ ಸ್ಥಳಕ್ಕೆ ತೆರಳಿ ಮಾಹಿತಿ ಪಡೆದುಕೊಂಡಿದ್ದಾರೆ.
Next Story





