ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಿ: ಗಾಯತ್ರಿ ಶಾಂತೇಗೌಡ

ಚಿಕ್ಕಮಗಳೂರು, ಜೂ.26: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಾಲ್ಕು ವರ್ಷಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಐದನೇ ವರ್ಷದಲ್ಲಿ ಮುನ್ನಡೆಯುತ್ತಿದ್ದು, ಸರ್ಕಾರದ ಯೋಜನೆಗಳು ಮತ್ತು ಸಾಧನೆಗಳನ್ನು ಜನರಿಗೆ ತಿಳಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದು ಮಾಜಿ ಎಂಎಲ್‌ಸಿ ಶ್ರೀಮತಿ ಗಾಯತ್ರಿ ಶಂತೇಗೌಡ ಸಲಹೆ ಮಾಡಿದರು.
ನಗರದ ತಮ್ಮ ಕಚೇರಿಯಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಜಾಗೃತ ಸಮಿತಿ ಸದಸ್ಯ ಹೊನ್ನಬೋವಿ ಅವರನ್ನು ಅಭಿನಂದಿಸಿ ಮಾತನಾಡಿದದರು. ಚುನಾವಣೆ ಸಂದರ್ಭದಲ್ಲಿ ಕೊಟ್ಟ 165 ಭರವಸೆಗಳಲ್ಲಿ 150 ಕ್ಕೂ ಹೆಚ್ಚು ಭರವಸೆಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ರಾಜ್ಯ ಸರ್ಕಾರ ಜನ ಪರವಾಗಿ ಕೆಲಸ ಮಾಡಿದೆ ಎಂದರು.
ಬರಗಾಲದಿಂದ ತೊಂದರೆಗೆ ಒಳಗಾಗಿದ್ದ ರೈತರಿಗೆ ನೆರವಾಗುವ ಉದ್ದೇಶದಿಂದ ಸಹಕಾರ ಸಂಸ್ಥೆಗಳಲ್ಲಿ ಪಡೆದಿರುವ 50 ಸಾವಿರ ರೂ.ಗಳವರೆಗಿನ ಸಾಲವನ್ನು ಮುಖ್ಯ ಮಂತ್ರಿಗಳು ಮನ್ನಾ ಮಾಡಿರುವುದು ಸ್ವಾಗತಾರ್ಹವಾಗಿದೆ. ಜನಪರ, ರೈತ ಪರವಾಗಿ ಸರ್ಕಾರ ಕೆಲಸ ಮಾಡುತ್ತಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ ಎಂದು ಹೇಳಿದರು.
ಚುನಾವಣೆ ಸಮೀಪಿಸುತ್ತಿರುವುದರಿಂದ ಕಾರ್ಯಕರ್ತರು, ಮುಖಂಡರು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದ ಅವರು, ಪಕ್ಷ ಯಾರಿಗಾದರು ಟಿಕೇಟ್ ಕೊಡಲಿ ಗೆಲ್ಲಿಸುವ ನಿಟ್ಟಿನಲ್ಲಿ ಎಲ್ಲರೂ ಪಕ್ಷ ಬಲಗೊಳಿಸಬೇಕಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಎಸ್.ಶಾಂತೇಗೌಡ ಮಾತನಾಡಿ, ರಾಜ್ಯ ಸರ್ಕಾರ ಮತ್ತು ಮುಖ್ಯ ಮಂತ್ರಿ ಸಿದ್ದರಾಮಯ್ಯ ಎಲ್ಲ ವರ್ಗದ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಬಿಜೆಪಿಯವರು ಸುಳ್ಳನ್ನೆ ಹೇಳಿ ಹೇಳಿ ಸತ್ಯವಾಗಿಸಲು ಪ್ರಯತ್ನಿಸುತ್ತಾರೆ. ಪಕ್ಷದ ಕಾರ್ಯಕರ್ತರು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು ಎಂದು ತಿಳಿಸಿದರು.
ನಗರಸಭೆ ಸದಸ್ಯ ಹಿರೇಮಗಳೂರು ಪುಟ್ಟಸ್ವಾಮಿ, ಸಖರಾಯಪಟ್ಟಣ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆಂಗೇಗೌಡ ಮಾತನಾಡಿದರು. ಎಪಿಎಂಸಿ ಮಾಜಿ ನಿರ್ದೇಶಕ ಬೆಳವಾಡಿ ಅಮೀರ್, ಎಪಿಎಂಸಿ ನಿರ್ದೇಶಕಿ ಸುನಿತಾ ಶಂಕರನಾಯ್ಕ, ಮುಖಂಡರಾದ ರಮೇಶ್, ಅಸ್ಲಂ, ವೆಂಕಟಸ್ವ ಆಮಿ, ವೆಂಕಟೇಶ್, ನಂಜುಂಡ, ಕೃಷ್ಣಮೂರ್ತಿ, ಸುನಿಲ್, ನಂಜೇಶ್, ಆನಂದ್, ಲೋಕೇಶ್ ಲಕ್ಷ್ಮೀಬಾಯಿ ಹಾಜರಿದ್ದರು.







