ರೈತ ಆತ್ಮಹತ್ಯೆ

ನಾಗಮಂಗಲ, ಜೂ.26: ತಾಲೂಕಿನ ಬಿಂಡಿಗನವಿಲೆ ಹೋಬಳಿ ಹುಚ್ಚನಕೊಪ್ಪಲು ಗ್ರಾಮದ ರೈತರೊಬ್ಬರು ಸಾಲಬಾಧೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ.
ನಾಗರಾಜು ಎಂಬವರ ಪುತ್ರ ನಂದೀಶ್ (26) ಆತ್ಮಹತ್ಯೆ ಮಾಡಿಕೊಂಡವರೆಂದು ಗುರುತಿಸಲಾಗಿದ್ದು, ಜಾಮೀನಿನಲ್ಲಿ ಕೊರೆಸಿದ್ದ ಎರಡು ಕೊಳವೆಬಾವಿಗಳು ವಿಫಲವಾದ ಹಿನ್ನೆಲೆಯಲ್ಲಿ ಹಾಗೂ ಕೃಷಿ ಚಟುವಟಿಕೆಗಾಗಿ ಸಾಲ ಮಾಡಿದ್ದರು ಎನ್ನಲಾಗಿದ್ದು, ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ಇಲ್ಲಿನ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
Next Story





