ಉಳ್ಳಾಲ: ಈದ್ ವಿವಾದ; ಹಲವರ ವಿರುದ್ಧ ಪ್ರಕರಣ ದಾಖಲು
ಉಳ್ಳಾಲ, ಜೂ. 26: ಉಳ್ಳಾಲ ಕೇಂದ್ರ ಜುಮಾ ಮಸೀದಿಯಲ್ಲಿ ಸೋಮವಾರ ಈದ್ ನಮಾಝ್ ವೇಳೆ ನಡೆದ ಗೊಂದಲ, ಹೊಯ್‌ಕೈ, ಹಲ್ಲೆಗೆ ಸಂಬಂಧಿಸಿದಂತೆ ಹಲವರು ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಲ್ಲೆಗೊಳಗಾದ ಮಸೀದಿ-ದರ್ಗಾ ಆಡಳಿತ ಸಮಿತಿಯ ಸದಸ್ಯ ಕೆ.ಎನ್. ಮಹ್ಮೂದ್ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಸೆ. 307ರ ಅನ್ವಯ 17 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಉಳ್ಳಾಲ ಮಾಸ್ತಿಕಟ್ಟೆ ನಿವಾಸಿ ಮುಹಮ್ಮದ್ ರಿಲ್ವಾನ್ ನೀಡಿದ ದೂರಿನಲ್ಲಿ ಮೂವರು ಪರಿಚಿತ ಹಾಗು ನಾಲ್ಕೈದು ಮಂದಿ ಅಪರಿಚಿತರು ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಿದ್ದಾರೆ.
ಎರಡೂ ದೂರನ್ನು ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳ ಬಂಧನಕ್ಕೆ ಕ್ರಮ ಜರಗಿಸಲಾಗುತ್ತದೆ ಎಂದು ಇನ್‌ಸ್ಪೆಕ್ಟರ್ ಗೋಪಿಕೃಷ್ಣ ತಿಳಿಸಿದ್ದಾರೆ.
Next Story





