ಆಧಾರ್ ಕಡ್ಡಾಯ ಅಧಿಸೂಚನೆಗೆ ಸಂಬಂಧಿಸಿ ಯಾವುದೇ ಆದೇಶ, ಮಧ್ಯಂತರ ಅಸಾಧ್ಯ: ಸುಪ್ರೀಂ ಕೋರ್ಟ್

ಹೊಸದಿಲ್ಲಿ. ಜೂ. 27: ಸರಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಅನುಕೂಲವಾಗುವಂತೆ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿದ ಕೇಂದ್ರಸರಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ ಇದೀಗ ಮಧ್ಯಂತರ ಆದೇಶ ನೀಡಲು ಸಾಧ್ಯವಿಲ್ಲ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ಹೇಳಿದೆ.
ಇತ್ತೀಚೆಗಷ್ಟೇ ಕೇಂದ್ರ ಸರಕಾರ ಸಾಮಾಜಿಕ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಆಧಾರ್ ಕಾರ್ಡ್ ಕಡ್ಡಾಯಗೊಳಿಸಿತ್ತು. ಇದನ್ನು ಪ್ರಶ್ನಿಸಿ ಶಾಂತಾಸಿನ್ಹಾ ಎಂಬುವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಎಂಖಾನ್ವಿಲ್ಕರ್ ಹಾಗೂ ನವೀನ್ ಸಿನ್ಹಾ ಅವರು ಆಧಾರ್ ವಿಚಾರಕ್ಕೆ ಸಂಬಂಧಿಸಿದಂತೆ ಮಧ್ಯಂತರ ಆದೇಶ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮುಂದಿನ ವಿಚಾರಣೆಯನ್ನು ಜುಲೈ 7ಕ್ಕೆ ಮುಂದೂಡಲಾಗಿದೆ
Next Story





