ನಾಲ್ಕು ತಾಲೂಕುಗಳಲ್ಲಿ ನಿಷೇಧಾಙ್ಞೆ ಮುಂದುವರಿಕೆ
ಬಂಟ್ವಾಳ, ಜೂ. 27: ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಮತ್ತು ಪುತ್ತೂರು ತಾಲೂಕಿನಲ್ಲಿ ಸೆಕ್ಷನ್ 144 ಅಡಿಯಲ್ಲಿ ಜಾರಿಯಲ್ಲಿರುವ ನಿಷೇಧಾಜ್ಷೆಯನ್ನು ಜೂನ್ 30ರ ಮಧ್ಯ ರಾತ್ರಿ 12 ಗಂಟೆಯವರೆಗೆ ವಿಸ್ತರಿಸಿ ದ.ಕ. ಜಿಲ್ಲಾಧಿಕಾರಿ ಡಾ. ಜಗದೀಶ್ ಆದೇಶ ಹೊರಡಿಸಿದ್ದಾರೆ.
ಗಲಭೆ ಪೀಡಿತ ಬಂಟ್ವಾಳ ತಾಲೂಕಿನ ಕಲ್ಲಡ್ಕ, ಮೆಲ್ಕಾರ್, ಬಿ.ಸಿ.ರೋಡ್, ಕೈಕಂಬ, ತುಂಬೆ, ಫರಂಗಿಪೇಟೆ, ವಿಟ್ಲ, ಕನ್ಯಾನ ಸಹಿತ ಕೋಮು ಸೂಕ್ಷ್ಮ ಪ್ರದೇಶದಲ್ಲಿ ನಿಯೋಜಿಸಲಾದ ಪೊಲೀಸ್ ಬಂದೋಬಸ್ತ್ ಮುಂದುವರಿಸಲಾಗಿದೆ.
Next Story





