ಭೂ ಕಬಳಿಕೆದಾರರ ವಿರುದ್ಧ ಏನೆಲ್ಲ ಕ್ರಮ ಕೈಗೊಂಡಿದ್ದೀರಿ: ಸರಕಾರಕ್ಕೆ ಹೈಕೋರ್ಟ್ ಪ್ರಶ್ನೆ

ಬೆಂಗಳೂರು, ಜೂ.27: ರಾಜ್ಯದಲ್ಲಿ ಒತ್ತುವರಿ ಆಗಿರುವ ಸರಕಾರಿ ಜಮೀನು ತೆರವುಗೊಳಿಸಿ ವಶಕ್ಕೆ ಪಡೆಯಲು ಸರಕಾರಕ್ಕೆ ಸೂಚಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಮುಂದಿನ ವಿಚಾರಣೆ ವೇಳೆಗೆ ಸಂಪೂರ್ಣ ವರದಿ ನೀಡುವಂತೆ ಸೂಚಿಸಿದೆ. ಈ ಸಂಬಂಧ ನಮ್ಮ ಬೆಂಗಳೂರು ಫೌಂಡೇಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿತು.
ರಾಜ್ಯದಲ್ಲಿ 11 ಲಕ್ಷ ಎಕರೆ ಭೂಕಬಳಿಕೆ ಆಗಿದ್ದು, ಈವರೆಗೆ ಕಬಳಿಕೆದಾರರ ವಿರುದ್ಧ ಏನೆಲ್ಲ ಕ್ರಮ ಕೈಗೊಂಡಿದ್ದೀರಿ. ಹಾಗೂ ಭೂಗಳ್ಳರ ವಿರುದ್ಧ ಎಷ್ಟು ಪ್ರಕರಣ ದಾಖಲಿಸಿದ್ದೀರಿ ಎಂದು ಪ್ರಶ್ನಿಸಿರುವ ನ್ಯಾಯಪೀಠವು ಸರಕಾರದ ವಿರುದ್ಧ ಚಾಟಿ ಬೀಸಿದೆ.
ಭೂಕಬಳಿಕೆದಾರರ ವಿರುದ್ಧ ಸರಕಾರ ಏನು ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿರುವ ನ್ಯಾಯಪೀಠವು ಮುಂದಿನ ವಿಚಾರಣೆ ವೇಳೆಗೆ ಸಂಪೂರ್ಣ ವರದಿ ನೀಡುವಂತೆ ಸೂಚಿಸಿದೆ.
Next Story





