ನಾಡಪ್ರಭು ಕೆಂಪೇಗೌಡ ಜಯಂತಿ..!
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳವಾರ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಆದಿಚುಂಚಗಿರಿ ಮಠದ ನಿರ್ಮಲಾನಂದನಾಥ ಸ್ವಾಮಿ, ಸ್ಫಟಿಕಪುರ ಮಠದ ನಂಜಾವಧೂತ ಸ್ವಾಮಿ, ವಿಶ್ವ ಒಕ್ಕಲಿಗ ಮಠದ ಕುಮಾರ ಚಂದ್ರಶೇಖರ ನಾಥ ಸ್ವಾಮಿ, ಸಚಿವರಾದ ಉಮಾಶ್ರೀ, ರೋಷನ್‌ಬೇಗ್, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಜಯಚಂದ್ರ, ಕೃಷ್ಣಭೈರೇಗೌಡ, ಡಾ.ಮಹದೇವಪ್ಪ ಮತ್ತಿತರರು ಉಪಸ್ಥಿತರಿದ್ದರು. ಕೆಂಪೇಗೌಡ ಜಯಂತಿ ಪ್ರಯುಕ್ತ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಮಂಗಳವಾರ ಸಾಂಸ್ಕೃತಿಕ ಮೆರವಣಿಗೆ ನಡೆಯಿತು.
Next Story





