ಪ್ರತ್ಯೇಕ ಪ್ರಕರಣ: ಇಬ್ಬರು ಮೃತ್ಯು
ಚಿಕ್ಕಮಗಳೂರು, ಜೂ.28: ಕಳಸ ಮತ್ತು ಗೋಣಿಬೀಡು ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಇಬ್ಬರು ಅಕಸ್ಮಿಕವಾಗಿ ಮೃತಪಟ್ಟಿರುವ ಕುರಿತು ಪ್ರಕರಣ ದಾಖಲಿಸಲಾಗಿದೆ.
ಕಳಸ ಪೊಲೀಸ್ ಠಾಣೆ ವ್ಯಾಪ್ತಿಯ ಮಾವಿನಕೆರೆ ಗ್ರಾಮದ ಯಮ್ಮಯ್ಯ ಎಂಬವರ ಪುತ್ರ ರವಿ(45) ಬೇಡಕ್ಕಿ ಹಳ್ಳ ದಾಟುತ್ತಿದ್ದಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಈ ಕುರಿತು ಮೃತನ ಸಹೋದರ ಚಂದ್ರು ಎಂಬವರು ಕಳಸ ಪೊಲೀಸರಿಗೆ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಗೋಣಿಬೀಡು ಪೊಲೀಸ್ ಠಾಣೆ ವ್ಯಾಪ್ತಿಯ ಹೆಗ್ಗರವಳ್ಳಿ ಗ್ರಾಮದ ರಸ್ತೆಯಲ್ಲಿ 60-65 ವಯಸ್ಸಿನ ಅಪರಿತ ಮಹಿಳೆ ಮೃತಪಟ್ಟಿದ್ದಾರೆ. ಈಕೆ ಅಸ್ವಸ್ಥಗೊಂಡಿರುವುದನ್ನು ಕಂಡು ಕಿರಣ್ ಎಂಬವರು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಿದ್ದರು. ಅನಂತರ ಹೆಚ್ಚಿನ ಚಿಕಿತ್ಸೆಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಕರೆದೊಯ್ಯುತ್ತಿದ್ದ ಮಾರ್ಗ ಮದ್ಯೆ ಮಹಿಳೆ ಮೃತಪಟ್ಟಿದ್ದು, ಆಕೆ ಯಾರು ಎಂದು ಗೊತ್ತಾಗಿಲ್ಲ. ಈಕೆ ಮಾನಸಿಕ ಅಸ್ವಸ್ಥಳಂತೆ ಕಂಡು ಬರುತ್ತಿದ್ದು, ಗೋಣಿಬೀಡು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Next Story





