ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು, ಜೂ.28: ಪರೀಕ್ಷೆ ಪ್ರವೇಶಾತಿ ಪತ್ರ ನೀಡದ ಹಿನ್ನೆಲೆಯಲ್ಲಿ ಏರೋನಾಟಿಕಲ್ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಇಲ್ಲಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಚೆನ್ನಸಂದ್ರದ ಲೋಕೇಶ್(20) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ ಎಂದು ಪೊಲೀಸರು ತಿಳಿಸಿದ್ದಾರೆ. ಚನ್ನಸಂದ್ರ ಬಳಿಯ ಎಂವಿಜೆ ಕಾಲೇಜಿನಲ್ಲಿ ಲೋಕೇಶ್ ಏರೋನಾಟಿಕ್ಸ್ ಇಂಜನಿಯರಿಂಗ್ ಪದವಿಯ 4ನೆ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ. ಹಾಜರಾತಿ ಸಮಸ್ಯೆಯಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರವೇಶಪತ್ರ ನೀಡಲು ಕಾಲೇಜು ಆಡಳಿತ ಮಂಡಳಿ ನಿರಾಕರಿಸಿತ್ತು.
ಪರೀಕ್ಷೆ ಸಂದರ್ಭದಲ್ಲಿ ಕಾಲೇಜು ಪರೀಕ್ಷಾ ಪ್ರವೇಶ ಪತ್ರ ನೀಡದ ಹಿನ್ನೆಲೆಯಲ್ಲಿ ಮನನೊಂದ ಲೋಕೇಶ್ ಕಾಲೇಜಿನ ಹಾಸ್ಟೆಲ್‌ನಲ್ಲಿದ್ದ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಈ ಸಂಬಂಧ ಕಾಡುಗೋಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
Next Story





