Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂಸದರು ಶಾಂತಿ ಕದಡುವ ಹೇಳಿಕೆಗಳನ್ನು...

ಸಂಸದರು ಶಾಂತಿ ಕದಡುವ ಹೇಳಿಕೆಗಳನ್ನು ಬಿಟ್ಟು ಸೌಹಾರ್ಧಯುತ ಸಾಮರಸ್ಯ ಜೀವನಕ್ಕೆ ಸಹಕರಿಸಿ: ಬಿ.ಎಂ.ಸಂದೀಪ್

ವಾರ್ತಾಭಾರತಿವಾರ್ತಾಭಾರತಿ28 Jun 2017 6:31 PM IST
share
ಸಂಸದರು ಶಾಂತಿ ಕದಡುವ ಹೇಳಿಕೆಗಳನ್ನು ಬಿಟ್ಟು ಸೌಹಾರ್ಧಯುತ ಸಾಮರಸ್ಯ ಜೀವನಕ್ಕೆ ಸಹಕರಿಸಿ: ಬಿ.ಎಂ.ಸಂದೀಪ್

ಚಿಕ್ಕಮಗಳೂರು, ಜೂ.28: ಉಡುಪಿ ಪೇಜಾವರ ಶ್ರೀಗಳ ಇಫ್ತಾರ್ ಕೂಟದ ಬಗ್ಗೆ ಟೀಕೆ ಮಾಡಿ ಪ್ರಚಾರ ಗಿಟ್ಟಿಸಲು ಮುಂದಾಗಿರುವ ಸಂಸದೆ ಶೋಭಾ ಕರಂದ್ಲಾಜೆ ಶಾಂತಿ ಕದಡುವ ಹೇಳಿಕೆಗಳನ್ನು ನೀಡುವುದು ಬಿಟ್ಟು ಸೌಹಾರ್ಧತೆ-ಸಾಮರಸ್ಯದಿಂದ ಜೀವನ ನಡೆಸಲು ಸಹಕಾರಿಯಾಗುವಂತೆ ರಾಜೀವ್‌ಗಾಂಧಿ ಪಂಚಾಯತ್‌ ರಾಜ್ ಸಂಘಟನೆ ರಾಜ್ಯ ಸಂಚಾಲಕ ಬಿ.ಎಂ.ಸಂದೀಪ್ ಸಲಹೆ ನೀಡಿದ್ದಾರೆ.

ಅವರು ಬುಧವಾರ ಈ ಕುರಿತು ಹೇಳಿಕೆ ನೀಡಿದ್ದು, ಶ್ರೀಕೃಷ್ಣ ಮಠದಲ್ಲಿ ಪೇಜಾವರ ಶ್ರೀಗಳು ನಡೆಸಿದ ಇಫ್ತಾರ್ ಕೂಟ ಕುರಿತು ಶೋಭಾರವರ ಅಪಸ್ವರದ ಹೇಳಿಕೆ ಸಾಮರಸ್ಯದಿಂದ ಬಾಳ್ವೆ ನಡೆಸುತ್ತಿರುವವರ ನಡುವೆ ಸಂಘರ್ಷಕ್ಕೆ ಪ್ರೇರಣೆ ನೀಡಿದಂತಾಗುತ್ತದೆ. ಅಧಿಕಾರಕ್ಕಾಗಿ ಕೋಮು ಭಾವನೆ ಕೆರಳಿಸಿ ರಾಜಕೀಯ ಮಾಡುವುದು ಬಿಜೆಪಿಗೆ ತಲತಲಾಂತರದಿಂದ ಬಂದ ಬಳುವಳಿ ಎಂದು ಟೀಕಿಸಿದ್ದಾರೆ.

ಹಿಂದೂಗಳ ಹಬ್ಬದಲ್ಲಿ ಮುಸಲ್ಮಾನರಿಗೆ ಪಾನಕ ನೀಡುವುದು, ಮುಸಲ್ಮಾನರ ಹಬ್ಬದಲ್ಲಿ ಇಫ್ತಾರ್‌ಕೂಟ ನಡೆಸುತ್ತಾ ಜಾತಿ, ಮತ, ಭೇದ ತೊರೆದು ಪರಸ್ಪರ ಪ್ರೀತಿ ವಿಶ್ವಾದಿಂದ ಜೀವನ ಮಾಡುತ್ತಿರುವುದು ಪ್ರತೀತಿ. ಒಗ್ಗಟ್ಟು ಸಾಮರಸ್ಯವಿದ್ದರೆ ಮಾತ್ರ ದೇಶದ ಸರ್ವತೋಮುಖ ಅಭಿವೃದ್ದಿ ಸಾಧ್ಯ ಇಲ್ಲವಾದರೆ ಸಂಘರ್ಷಕ್ಕೆ ನಾವೆ ಅಡಿಪಾಯ ಹಾಕಿ ಕೊಟ್ಟಂತಾಗುತ್ತದೆ ಎಂಬುದನ್ನು ಮನಗಾಣಬೇಕು. ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹಾಗೂ ಸಂಸದೆ ಶೋಭಾರವರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಇವರಿಬ್ಬರೂ ಗೋಡ್ಸೆ ಸಂಸ್ಕೃತಿಯಿಂದ ಹೊರ ಬಂದು, ಗಾಂಧಿ ಆತ್ಮ ಚರಿತ್ರೆ ಮತ್ತು ಸಂವಿಧಾನವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಮುಖ್ಯ. ಇವರುಗಳಿಗೆ ಮುಗ್ದಜನರ ಬಾವನೆ ಕೆರಳಿಸಿ, ಜಾತಿಗಳ ನಡುವೆ ವಿಷಬೀಜ ಬಿತ್ತುವುದೇ ಹವ್ಯಾಸ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ಪಾಕಿಸ್ತಾನಕ್ಕೆ ಹೋಗಿ ನವಾಜ್‌ ಶರೀಫ್ ರವರ ನಿವಾಸದಲ್ಲಿ ಔತಣ ಕೂಟ ನಡೆಸಿದಾಗ ಮೋದಿ ನಡೆಯನ್ನು ಖಂಡಿಸಬೇಕೆಂದು ಹೊಳೆಯದ ಶೋಭಾರಿಗೆ ಪೇಜಾವರ ಶ್ರೀಗಳ ಇಫ್ತಾರ್‌ಕೂಟವನ್ನು ಖಂಡಿಸಬೇಕು ಎನ್ನಿಸಿದ್ದು ಎರಡು ಕೋಮುಗಳ ನಡುವೆ ವಿಷಬೀಜ ಬಿತ್ತುವ ಹುನ್ನಾರ ಎಂಬುದು ಬಹಿಂರಂಗ ಸತ್ಯ ಎಂದು ಹೇಳಿದ್ದಾರೆ.

ಸಂಸದರಾದಾಗಿನಿಂದ ಕ್ಷೇತ್ರದ ಜನರ ಸಮಸ್ಯೆಯಾಗಲಿ, ಅಭಿವೃದ್ದಿಗಳ ಬಗ್ಗೆಯಾಗಲಿ ಹೇಳಿಕೆ ನೀಡದ ಶೋಭಾ ಜಾತಿ ರಾಜಕಾರಣದ ವಿಷಯದಲ್ಲಿ ತಟ್ಟನೆ ಮೂಗು ತೂರಿಸುವುದನ್ನು ಕಂಡಿರುವ ಜಿಲ್ಲೆಯ ಜನ ತಲೆ ತಗ್ಗಿಸುವಂತಾಗಿದೆ. ಈ ರೀತಿ ಹೇಳಿಕೆ ನೀಡಿ ನೀವು ಪ್ರತಿನಿಧಿಸಿರುವ ಮಲೆನಾಡಿನ ಗೌರವ ಹರಾಜು ಮಾಡುವ ಬದಲು ರೈತರು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿದರೆ ಉತ್ತಮ ಎಂದಿದ್ದಾರೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X