ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಾಂಶುಪಾಲ ನಾಪತ್ತೆ
ಬೆಂಗಳೂರು, ಜೂ.28: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿಬಂದ ಬೆನ್ನಲ್ಲೇ ಶಾಲೆಯ ಪ್ರಾಂಶುಪಾಲರೊಬ್ಬರು ನಾಪತ್ತೆಯಾದ ಪ್ರಕರಣ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಂಗಳೂರು ಮೂಲದ ಮುರಳೀಧರ್ ನಾಪತ್ತೆಯಾದ ಪ್ರಾಂಶುಪಾಲ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಲದೇವನಹಳ್ಳಿಯಲ್ಲಿರುವ ಗೋಪಾಲ ವಿದ್ಯಾಕೇಂದ್ರ ಎಂಬ ಶಾಲೆಯನ್ನು 10 ವರ್ಷಗಳ ಹಿಂದೆ ಕಟ್ಟಿದ್ದ ಮುರಳಿಧರ್, ವಿದ್ಯಾರ್ಥಿನಿಯರು ಮತ್ತು ಶಿಕ್ಷಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನುವ ಆರೋಪ ಕೇಳಿಬಂದಿತ್ತು.
ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರನ್ನು ಪಾಸು ಮಾಡಬೇಕಿದ್ದರೆ, ತಾನು ಹೇಳಿದಂತೆ ಕೇಳಬೇಕು ಎಂದು ಪೀಡಿಸುತ್ತಿದ್ದ. ಈ ವಿಚಾರ ಪೊಲೀಸರ ಗಮನಕ್ಕೆ ಬರುತ್ತಿದ್ದಂತೆ ಮುರಳಿಧರ್ ನಾಪತ್ತೆಯಾಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಸೋಲದೇವನಹಳ್ಳಿ ಠಾಣೆ ಪೊಲೀಸರು, ಆತನಿಗಾಗಿ ಪತ್ತೆಕಾರ್ಯ ನಡೆಸುತ್ತಿದ್ದಾರೆ.
Next Story





