Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಮ್ಮ ವಿಭಜನೆಯಿಂದ ರಾಜಕಾರಣೆಗಳ ಅಸ್ತಿತ್ವ...

ನಮ್ಮ ವಿಭಜನೆಯಿಂದ ರಾಜಕಾರಣೆಗಳ ಅಸ್ತಿತ್ವ ಗಟ್ಟಿಗೊಳ್ಳುತ್ತದೆ: ಈದ್ ಸೌಹರ್ದಕೂಟದಲ್ಲಿ ಡಾ.ಪಿ.ವಿ.ಭಂಡಾರಿ

ವಾರ್ತಾಭಾರತಿವಾರ್ತಾಭಾರತಿ28 Jun 2017 10:06 PM IST
share
ನಮ್ಮ ವಿಭಜನೆಯಿಂದ ರಾಜಕಾರಣೆಗಳ ಅಸ್ತಿತ್ವ ಗಟ್ಟಿಗೊಳ್ಳುತ್ತದೆ: ಈದ್ ಸೌಹರ್ದಕೂಟದಲ್ಲಿ ಡಾ.ಪಿ.ವಿ.ಭಂಡಾರಿ

ಉಡುಪಿ, ಜೂ.28: ಇಂದು ಧರ್ಮ ಧರ್ಮಗಳ ನಡುವೆ ದ್ವೇಷ ಬಿತ್ತಿ ವಿಭಜಿಸುವ ಪ್ರಯತ್ನ ಮಾಡಲಾಗುತ್ತದೆ. ಇದರ ಹಿಂದೆ ರಾಜಕೀಯ ವ್ಯಕ್ತಿಗಳ ಹಿತಾಸಕ್ತಿ ಅಡಗಿದೆ. ನಾವು ವಿಭಜನೆಗೊಂಡಾಗ ರಾಜಕಾರಣಿಗಳ ಅಸ್ತಿತ್ವಗಟ್ಟಿ ಗೊಳ್ಳುತ್ತದೆಂದು ಖ್ಯಾತ ಮನರೋಗ ತಜ್ಞ ಡಾ.ಪಿ.ವಿ ಭಂಡಾರಿ ಜಮಾಅತೇ ಇಸ್ಲಾಮಿ ಹಿಂದ್ ಹೂಡೆ ಹಾಗೂ ಸಾಲಿಹಾತ್ ಸಮೂಹ ಸಂಸ್ಥೆ ಜಂಟಿಯಾಗಿ ಆಯೋಜಿಸಿದ್ದ ಈದ್ ಸೌಹರ್ದಕೂಟವನ್ನುದ್ದೇಶಿಸಿ ಮಾತನಾಡಿದರು.

ನಮ್ಮ ಜಗಳಗಳಿಂದ ತೊಂದರೆಗೊಳಪಡುವವರು ನಾವೇ ಹೊರತು ಬೇರೆಯವರಲ್ಲ. ರಾಜಕಾರಣಿಗಳಿಗೆ ಇದರಿಂದ ಲಾಭವಾಗುತ್ತದೆ. ನಮ್ಮ ನಡುವೆ ಆಚಾರ ವಿಚಾರಗಳ ಭಿನ್ನತೆಯಿದ್ದರೂ, ಗೌರವಿಸಿ ಬದುಕುವವರು ನಾವಾಗಬೇಕೆಂದ ಅವರು, ಸೌಹರ್ದತೆಯ ಜೀವನಕ್ಕೆ ಹಾಜಿ ಅಬ್ದುಲ್ಲಾ ಅವರು ಸ್ಪೂರ್ತಿ ಅವರ ವಿಚಾರಗಳನ್ನು ಮೈಗೂಡಿಸಿಕೊಂಡು ಬದುಕುವವರು ನಾವಾಗಬೇಕೆಂದರು.

ಪ್ರೊ.ಸಿರಿಲ್ ಮಥಾಯಿಸ್ ಮಾತನಾಡಿ, ಸೌಹರ್ದ ಸೇತುವೆಗಳನ್ನು ಕಟ್ಟುವ, ಮನಸ್ಸನ್ನು ಜೋಡಿಸುವ ಕೆಲಸಗಳನ್ನು ಮಾಡುತ್ತ ಮನಸ್ಸಿನ ಹಣತೆಗಳನ್ನು ಬೆಳಗಿಸುವವರು ನಾವಾಗಬೇಕೆಂದರು. 

ಕೆಮ್ಮಣ್ಣು ಚರ್ಚಿನ ಧರ್ಮಗುರುಗಳಾದ ಫಾ.ಹೆರಾಲ್ಡ್‌ ಪಿರೇರಾ ಮಾತನಾಡುತ್ತಾ, ಬೇರೆಯವರಿಂದ ಒಳಿತನ್ನು ಆಶಿಸುವ ಬದಲು ಸ್ವತಃ ನಾವೇ ನಮ್ಮ ಜೀವನದಲ್ಲಿ ಒಳಿತನ್ನು ಪಾಲಿಸುವಂತವರಾಗಬೇಕೆಂದರು.

ಕೊನೆಯಲ್ಲಿ ಶಾಂತಿ ಪ್ರಕಾಶನದ ವ್ಯವಸ್ಥಾಪಕ ಮುಹಮ್ಮದ್ ಕುಂಞ ಮಾತನಾಡಿ, ಜಗತ್ತನ್ನು ನಿಯಂತ್ರಿಸಲು ಯಂತ್ರಗಳನ್ನು ತಯಾರು ಮಾಡಿದ ಮಾನವ, ತನ್ನನ್ನು ನಿಯಂತ್ರಿಸುವಲ್ಲಿ ಸೋತು ಹೋಗಿದ್ದಾನೆ. ಆ ಕಾರಣಕ್ಕಾಗಿ ಮನುಷ್ಯ ಹಲವಾರು ಸಮಸ್ಯೆಗಳಲ್ಲಿ ಸಿಲುಕಿ ಹಾಕಿಕೊಂಡಿದ್ದಾನೆ. ಆದ್ದರಿಂದ ನಮ್ಮನ್ನು ನಿಯಂತ್ರಿಸುವ ತರಬೇತಿಗಾಗಿ ರಂಝಾನ್ ಉಪವಾಸ ಆಚರಿಸಲಾಗುತ್ತದೆ. ಉಪವಾಸ ವಿವೇಕವನ್ನು ಕಲಿಸುತ್ತದೆ. ಇಂದು ಎಲ್ಲ ಕ್ಷೇತ್ರಗಳು ಅವಿವೇಕಿಗಳಿಂದ ತುಂಬಿ ಹೋಗಿದೆ. ಆದ್ದರಿಂದ ವಿವೇಕದ ಮಹತ್ವ ತುಂಬಾ ಇದೆ ಎಂದ ಅವರು ಇವತ್ತು ಧರ್ಮ ಗ್ರಂಥಗಳ ಹೆಸರಿನಲ್ಲಿ ಅಶಾಂತಿ ಹರಡಲಾಗುತ್ತದೆ. ಗೂಂಡಾಗಳು, ಅಪರಾಧಿಕ ಹಿನ್ನಲೆಯವರು ಧರ್ಮ ರಕ್ಷಣೆಯ ಹೆಸರಿನಲ್ಲಿ ಅಶಾಂತಿ ಹುಟ್ಟು ಹಾಕುತ್ತಿದ್ದಾರೆ. ಆದ್ದರಿಂದ ನಾವು ಮೂಲ ಧರ್ಮ ಗ್ರಂಥಗಳನ್ನು ಅಧ್ಯಯನ ಮಾಡಿ ಧರ್ಮಗಳನ್ನು ಅರ್ಥೈಸಿ ಅದರ ಸಂದೇಶದಂತೆ ಪರಸ್ಪರ ಅರಿತು ಬಾಳುವವರಾಗಬೇಕೆಂದರು.

ಮನುಷ್ಯ ಮಾನವೀಯತೆಯನ್ನು ಮರೆತು ಮೃಗಗಳಂತೆ ವರ್ತಿಸುತ್ತಿದ್ದಾನೆ. ಅರಣ್ಯದಲ್ಲಿ ಪ್ರಾಣಿಗಳು ಇನ್ನೊಂದು ಪ್ರಾಣಿಯನ್ನು ಯಾವುದೇ ಕಾರಣವಿಲ್ಲದೆ ಕೊಲ್ಲುವಂತೆ ಮನುಷ್ಯ ಮನುಷ್ಯನನ್ನು ನಿರ್ದಯವಾಗಿ ಹತ್ಯೆ ಮಾಡುತ್ತಿದ್ದಾನೆ. ಆದ್ದರಿಂದ ಮಾನವೀಯತೆ ಪರಿಪಾಠವನ್ನು ವ್ಯಾಪಕಗೊಳಿಸಿ ಯುವ ಸಮುದಾಯವನ್ನು ಕ್ರೂರತೆಯಿಂದ ರಕ್ಷಿಸಬೇಕೆಂದರು.

ಈ ಸಂಧರ್ಭದಲ್ಲಿ ಜಮಾಅತೆ ಇಸ್ಲಾಮಿನ ವಲಯ ಸಂಚಾಲಕರಾದ ಅಕ್ಬರ್ ಅಲಿ ಉಡುಪಿ, ಸ್ಥಾನೀಯ ಅಧ್ಯಕ್ಷರಾದ ಅಬ್ದುಲ್ ಖಾದೀರ್ ಮೊಯ್ದಿನ್, ಸಾಲಿಹಾತ್ ಸಮೂಹ ಸಂಸ್ಥೆಯ ಆಡಾಳಿತಾಧಿಕಾರಿ ಅಸ್ಲಮ್ ಹೈಕಾಡಿ ಉಪಸ್ಥಿತರಿದ್ದರು. ಆರಂಭದಲ್ಲಿ ಫಾಕರುಲ್ ಇಸ್ಲಾಮ್ ಕುರಾನ್ ಪಠಿಸಿದರು. ಇದ್ರಿಸ್ ಹೂಡೆ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.ಜಿ.ಎಮ್ ಶರೀಫ್ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X