ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ
ಚಿಕ್ಕಮಗಳೂರು, ಜೂ.29: ಶೃಂಗೇರಿ ಮತ್ತು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಗಳ ವ್ಯಾಪ್ತಿಗಳಲ್ಲಿ ಎರಡು ಪ್ರತ್ಯೇಕ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ.
ಶೃಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ನೀಲಂ ಊರು ಗ್ರಾಮದ ಸುಭ್ರಮಣ್ಯ(43) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಮಾನಸೀಕ ಖಾಯಿಲೆಯಿಂದ ಬಳಲುತ್ತಿದ್ದರು. ಇದೇ ಕಾರಣದಿಂದ ಹಲವು ಸಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಸೂಕ್ತ ಪ್ರಯೋಜನವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರು ಜೀವನದಲ್ಲಿ ಜೀಗುಪ್ಸೆಗೊಂಡು ಮರದ ಕೊಂಬೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಮೃತನ ಸಹೋದರ ಕೃಷ್ಣ ಪೊಲೀಸರಿಗೆ ನೀಡಿರುವ ದೂರಿನನ್ವಯ ಪ್ರಕರಣ ದಾಖಲಿಸಲಾಗಿದೆ.
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಳ್ಳಿ ಗ್ರಾಮದ ನಿಂಗೇಗೌಡ(70) ಹೊಟ್ಟೆ ನೋವಿನ ಕಾರಣಂದಿಂದ ಜೀವನದಲ್ಲಿ ಜೀಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಹೊಸಳ್ಳಿ ಗ್ರಾಮದ ದೇವಸ್ತಾನದ ಬಳಿ ಯಾರಗೂ ತಿಳಿಯದಂತೆ ವಿಷ ಸೇವಿಸಿ ಮೃತಪಟ್ಟಿದ್ದರು. ಈ ಕುರಿತು ಮೃತರ ಪುತ್ರ ಬೀರೇಗೌಡ ಪೊಲೀಸರಿಗೆ ನೀಡಿದ ದೂರನ್ನು ಅಧರಿಸಿ ಪ್ರಕರಣ ದಾಖಲಿಸಲಾಗಿದೆ.





