Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಬ್ದಮಾಲಿನ್ಯಕ್ಕೆ ಮಸೀದಿಯ ಚಿತ್ರ...

ಶಬ್ದಮಾಲಿನ್ಯಕ್ಕೆ ಮಸೀದಿಯ ಚಿತ್ರ ಉದಾಹರಣೆ !

ಐಸಿಎಸ್‌ಇ ಪಠ್ಯಪುಸ್ತಕದಲ್ಲಿ ಉಲ್ಲೇಖ

ವಾರ್ತಾಭಾರತಿವಾರ್ತಾಭಾರತಿ29 Jun 2017 5:43 PM IST
share
ಶಬ್ದಮಾಲಿನ್ಯಕ್ಕೆ ಮಸೀದಿಯ ಚಿತ್ರ ಉದಾಹರಣೆ !

 ಹೊಸದಿಲ್ಲಿ, ಜೂ.30: ದಿಲ್ಲಿಯ ಐಸಿಎಸ್‌ಇ (ಇಂಡಿಯನ್ ಸರ್ಟಿಫಿಕೇಟ್ ಆಫ್ ಸೆಕೆಂಡರಿ ಎಜುಕೇಶನ್)ನ 6ನೇ ತರಗತಿಯ ಪಠ್ಯಪುಸ್ತಕವೊಂದರಲ್ಲಿ ಶಬ್ದ ಮಾಲಿನ್ಯವನ್ನು ವಿವರಿಸುವಾಗ ಮಸೀದಿಯ ಚಿತ್ರ ಬಳಸಿರುವ ಘಟನೆ ವರದಿಯಾಗಿದೆ.

ಐಸಿಎಸ್‌ಸಿಯ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಪಠ್ಯಪುಸ್ತಕಗಳನ್ನು ಖಾಸಗಿ ಪ್ರಕಾಶಕರಿಂದ ಪಡೆಯಲಾಗುತ್ತದೆ. ಅಂತೆಯೇ 6ನೇ ತರಗತಿಯ ‘ಇಂಟೆಗ್ರೇಟೆಡ್ ಸೈಯನ್ಸ್’ ಪಠ್ಯಪುಸ್ತಕವನ್ನು ಹೊಸದಿಲ್ಲಿ ದರಿಯಗಂಜ್‌ನ ಸೆಲಿನಾ ಪಬ್ಲಿಷರ್ಸ್ ಮುದ್ರಿಸಿದೆ.

    ಇದರಲ್ಲಿ ಶಬ್ದ ಮಾಲಿನ್ಯ ಕುರಿತ ಪಾಠದಲ್ಲಿ ವ್ಯಕ್ತಿಯೋರ್ವ ವಿವಿಧ ರೀತಿಯ ಶಬ್ದಮಾಲಿನ್ಯ ಮೂಲಗಳ ನಡುವೆ ನಿಂತಿರುವ ಚಿತ್ರವಿದೆ. ವಿಮಾನ, ವೇಗವಾಗಿ ಚಲಿಸುತ್ತಿರುವ ರೈಲು, ಕೆಲವು ಚತುಷ್ಚಕ್ರ ವಾಹನಗಳು ಹಾಗೂ ಮಸೀದಿಯ ಚಿತ್ರಗಳನ್ನು ಇಲ್ಲಿ ಉದಾಹರಣೆಯಾಗಿ ಬಳಸಲಾಗಿದೆ. ಓರ್ವ ವಿದ್ಯಾರ್ಥಿಯ ತಂದೆ ಈ ಚಿತ್ರವನ್ನು ವಾಟ್ಸಾಪ್‌ನಲ್ಲಿ ಪ್ರಸಾರ ಮಾಡಿದ ಬಳಿಕ ಈ ವಿಷಯ ಬೆಳಕಿಗೆ ಬಂದಿದೆ. ಚಿತ್ರವನ್ನು ನೋಡಿ ನನಗೆ ಸಿಟ್ಟು ತಡೆಯಲಾಗಲಿಲ್ಲ. ಈ ಚಿತ್ರದ ಮೂಲಕ ಯಾವ ಸಂದೇಶ ನೀಡಲು ಬಯಸಲಾಗಿದೆ. ಸಣ್ಣ ಮಕ್ಕಳ ಕೋಮಲ ಮನಸ್ಸಿನ ಮೇಲೆ ಇಂತಹ ಚಿತ್ರ ಯಾವ ರೀತಿಯ ಪರಿಣಾಮ ಬೀರಬಹುದು.ಈ ಮಕ್ಕಳು ದೇಶದ ಭವಿಷ್ಯವಲ್ಲವೇ. ಈ ಧರ್ಮವನ್ನೇ ಯಾಕೆ ಇವರು ಆಯ್ಕೆ ಮಾಡಿಕೊಂಡಿದ್ದಾರೆ ಎಂದವರು ಚಿತ್ರದ ಜೊತೆ ಬರೆದಿರುವ ಸಂದೇಶದಲ್ಲಿ ಪ್ರಶ್ನಿಸಿದ್ದಾರೆ.

ಇತರ ಧರ್ಮೀಯರ ಹಬ್ಬ ಅಥವಾ ಆಚರಣೆಯನ್ನು ಶಬ್ದ ಮಾಲಿನ್ಯಕ್ಕೆ ಯಾಕೆ ಉದಾಹರಣೆಯನ್ನಾಗಿ ನೀಡಿಲ್ಲ ಎಂದೂ ಅವರು ಪ್ರಶ್ನಿಸಿದ್ದಾರೆ. ಇದೀಗ ಪಿಎಫ್‌ಐ ಪುಣೆ ಪೊಲೀಸ್ ಠಾಣೆಯಲ್ಲಿ ಸೆಲಿನಾ ಪಬ್ಲಿಷರ್ಸ್, ಪುಸ್ತಕದ ಸಂಪಾದಕ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿದೆ.

    ಈ ಪುಸ್ತಕವನ್ನು ಎಸ್.ಕೆ.ಭಾಸಿನ್ ಎಂಬವರು ಸಂಪಾದಿಸಿದ್ದು ‘ ತಜ್ಞ ಶಿಕ್ಷಕರ ತಂಡ ’ ಈ ಪುಸ್ತಕದಲ್ಲಿರುವ ಲೇಖನಗಳನ್ನು ಬರೆದಿದೆ ಎಂದು ತಿಳಿಸಲಾಗಿದೆ. ಇದೊಂದು ಪ್ರಮಾದ . ಆದರೆ ಉದ್ದೇಶಪೂರ್ವಕವಾಗಿ ನಡೆದಿಲ್ಲ ಎಂದು ಸೆರಿನಾ ಪಬ್ಲಿಷರ್ಸ್‌ನ ಹಾಲಿ ಸಂಪಾದಕ ಬಿ.ಕೆ.ಜಾರ್ಜ್ ಒಪ್ಪಿಕೊಂಡಿದ್ದಾರೆ. ಈ ಪುಸ್ತಕವನ್ನು ಹಿಂಪಡೆದಿದ್ದೇವೆ. ಆದರೆ ಈಗಾಗಲೇ ಕೆಲವು ಪ್ರತಿಗಳು ಮಾರಾಟವಾಗಿವೆ. ಮುಂದಿನ ಪುಸ್ತಕದಲ್ಲಿ ಈ ತಪ್ಪನ್ನು ಸರಿಪಡಿಸಲಾಗುವುದು ಎಂದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X