Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಐರಿಲೀಫ್‌ ಆ್ಯಪ್ ಸೇವೆ ಆರಂಭ

ಐರಿಲೀಫ್‌ ಆ್ಯಪ್ ಸೇವೆ ಆರಂಭ

ವಾರ್ತಾಭಾರತಿವಾರ್ತಾಭಾರತಿ29 Jun 2017 5:51 PM IST
share
ಐರಿಲೀಫ್‌ ಆ್ಯಪ್ ಸೇವೆ ಆರಂಭ

ಮಡಿಕೇರಿ. ಜೂ.29: ಪ್ರತಿಯೊಬ್ಬ ನಾಗರಿಕನಿಗೆ ತುರ್ತು ಆರೋಗ್ಯ ಸೇವೆಗಳನ್ನು ಆತನ ಮನೆ ಬಾಗಿಲಿಗೆ ತಲುಪಿಸುವ ಚಿಂತನೆಯಡಿ ಬೆಂಗಳೂರಿನಲ್ಲಿ ಕೇಂದ್ರ ಕಛೇರಿ ಹೊಂದಿರುವ ಐರಿಲೀಫ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಐರಿಲೀಫ್‌ ಎನ್ನುವ ಆ್ಯಪ್ ಮೂಲಕ ತನ್ನ ಸೇವೆಯನ್ನು ಆರಂಭಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಮುಖ್ಯ ನಿರ್ವಹಣಾಧಿಕಾರಿ ರಾಘವೇಂದ್ರ ಪ್ರಸಾದ್ ಈ ಕುರಿತು ಮಾಹಿತಿ ನೀಡಿದರು.  ಆಂಡ್ರಾಯ್ಡ್ ಹೊಂದಿರುವ ಸ್ಮಾರ್ಟ್ ಫೋನ್‌ಗಳ ಗೂಗಲ್ ಪ್ಲೇ ಸ್ಟೋರ್ ಮೂಲಕ ಐರಿಲೀಫ್‌ ಆ್ಯಪ್‌ನ್ನು ಡೌನ್ ಲೋಡ್ ಮಾಡಿಕೊಳ್ಳುವ ಮೂಲಕ ತುರ್ತು ಆಂಬ್ಯೂಲೆನ್ಸ್ ಸೇವೆ, ರಕ್ತನಿಧಿ ಕೇಂದ್ರದ ಸೌಲಭ್ಯ, ಹೋಂ ಕೇರ್ ಸೌಲಭ್ಯಗಳನ್ನು ಹೊಂದಿಕೊಳ್ಳಲು ಸಂಸ್ಥೆ ನೆರವಾಗಲಿದೆಯೆಂದು ತಿಳಿಸಿದರು.

ಅಪಘಾತ ಸೇರಿದಂತೆ ತುರ್ತು ಸಂದರ್ಭಗಳಲ್ಲಿ ರಕ್ತದ ಕೊರತೆ ಯಾವುದೇ ಕಾರಣಕ್ಕೂ ಉದ್ಭವಿಸಬಾರದು ಎನ್ನುವ ಕಾರಣಕ್ಕೆ ಐರಿಲೀಫ್ ಸಂಸ್ಥೆ ರಕ್ತ ನಿಧಿ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ಸರ್ಕಾರದ ಸಹಭಾಗಿತ್ವದೊಂದಿಗೆ ಸಾರ್ವಜನಿಕರಿಗೆ ಒದಗಿಸಲಿದೆ. ಇದರೊಂದಿಗೆ ಅಗತ್ಯವಿರುವ ವಿವಿಧ ಗುಂಪುಗಳ ರಕ್ತವನ್ನು ಯಾವ ರಕ್ತ ನಿಧಿಯಿಂದ ಪಡೆಯಬಹುದೆನ್ನುವ ಬಗ್ಗೆ ಅಗತ್ಯ ಮಾಹಿತಿಯನ್ನು ಒದಗಿಸಲಾಗುತ್ತದೆ. ಇದರೊಂದಿಗೆ ಸಂಸ್ಥೆಯ ಮುಖೇನ ರಕ್ತ ದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ರಕ್ತವನ್ನು ಸಂಗ್ರಹಿಸುವ ಉದ್ದೇಶವನ್ನೂ ಸಂಸ್ಥೆ ಹೊಂದಿರುವುದಾಗಿ ತಿಳಿಸಿದರು.

ಆಯಾ ಪ್ರದೇಶಗಳಲ್ಲಿನ ಆಂಬುಲೆನ್ಸ್ ಸೇವೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವ ಮೂಲಕ ಸಾರ್ವಜನಿಕರಿಗೆ ನಿರ್ದಿಷ್ಟ ದರದಲ್ಲಿ ಆಂಬ್ಯೂಲೆನ್ಸ್ ಸೇವೆಯನ್ನು ಒದಗಿಸಲಾಗುತ್ತದೆಂದು ತಿಳಿಸಿದ ರಾಘವೇಂದ್ರ ಪ್ರಸಾದ್, ಐರಿಲೀಫ್ ಮೂಲಕ ಮನೆಯಿಂದಲೇ ಹಲವು ಸೇವೆಗಳನ್ನು ಹೊಂದಲು ಅವಕಾಶವನ್ನು ಕಲ್ಪಿಸಲಾಗಿದೆ. ಅದರಂತೆ ಪ್ರಯೋಗಾಲಯ ಪರೀಕ್ಷೆ, ದಾದಿಯರ ಸೇವೆಯನ್ನೂ ಪಡೆಯಲು ಅವಕಾಶವನ್ನು ಕಲ್ಪಿಸಲಾಗಿದೆ. ಇವೆಲ್ಲಕ್ಕು ಕೈಗೆಟಕುವ ದರವನ್ನು ನಿಗಧಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸ್ಮಾರ್ಟ್ ಫೆನ್ ಮೂಲಕ ಐರಿಲೀಫ್ ಆ್ಯಪ್ ಬಳಸಿ ಸೌಲಭ್ಯಗಳನ್ನು ಪಡೆಯಬಹುದಲ್ಲದೆ, ಸಹಾಯವಾಣಿ ಕೇಂದ್ರದ ದೂ.7847840000ಕ್ಕೆ ಕರೆ ಮಾಡುವ ಮೂಲಕವೂ ಸೌಲಭ್ಯಗಳನ್ನು ಪಡೆಯಲು ಅವಕಾಶವನ್ನು ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಳಿಗಾಗಿ ಐರಿಲೀಫ್‌ನ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಶುಜಾತ್ ಪಾಶ ಮೊ. 9632502351, ಆಪರೇಷನ್ಸ್ ಅಂಡ್ ಮಾರ್ಕೆಟಿಂಗ್‌ನ ಮ್ಯಾನೇಜರ್ ರಾಕೇಶ್ ಪಿ.ಎಂ. ಮೊ.9880929143 ಯನ್ನು ಸಂಪರ್ಕಿಸಬಹುದೆಂದು ತಿಳಿಸಿದರು.


ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಪದಾಧಿಕಾರಿಗಳಾದ ತಪೋರಾಜ್ ಹಾಗೂ ರಾಕೇಶ್ ಪಿ.ಎಂ. ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X