Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಂಕ್ರಾಮಿಕ ರೋಗ: ಜಾಗೃತಿ ಮೂಡಿಸಲು...

ಸಾಂಕ್ರಾಮಿಕ ರೋಗ: ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ29 Jun 2017 7:59 PM IST
share
ಸಾಂಕ್ರಾಮಿಕ ರೋಗ: ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ, ಜೂ.29: ನೀರಿನಿಂದ ಹರಡುವ ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಮೂಡಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುರಕ್ಷಿತ ಕುಡಿಯುವ ನೀರು ಪೂರೈಕೆ ಮತ್ತು ನೀರಿನಿಂದ ಹರಡುವ ಸಾಂಕ್ರಾಮಿಕ ರೋಗಗಳ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಅಶುದ್ದ ನೀರು ಕುಡಿಯುವುದರಿಂದ ಕಾಲರಾ, ಕರುಳುಬೇನೆ, ವಿಷಮಶೀತ ಜ್ವರ, ಹೈಪಾಟೈಪಿಸ್, ಜಂತುಹುಳು ಸೋಂಕು ಇತರೆ ರೋಗಗಳು ಹರಡುವ ಸಾಧ್ಯತೆ ಇದೆ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯ ಎಂದು ತಿಳಿಸಿದರು.

ರೋಗ ಹರಡಲು ಕಾರಣವಾದ ನೀರಿನ ಮೂಲವನ್ನು ಪತ್ತೆ ಹಚ್ಚುವುದು, ಶುದ್ಧ ಕುಡಿಯುವ ನೀರು ಒದಗಿಸುವುದು, ಕುದಿಸಿ, ಆರಿಸಿದ ನೀರು ಮತ್ತು ಬಿಸಿಯಾದ ಆಹಾರ ಸೇವಿಸಲು ಸಾರ್ವಜನಿಕರಿಗೆ ಮಾಹಿತಿ ನೀಡುವುದು, ಶುದ್ದ ಆಹಾರ ತಯಾರಿಕೆ ಮತ್ತು ವೈಯಕ್ತಿಕ ಸ್ವಚ್ಛತಾ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸಲು ಮಾಹಿತಿ ಶಿಕ್ಷಣ ಚಟುವಟಿಕೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವಕುಮಾರ್ ಅವರು ನೀರಿನ ಸುರಕ್ಷತೆ ಕಾಪಾಡಲು ಮುಂಜಾಗ್ರತಾ ಕ್ರಮ ವಹಿಸಬೇಕಿದೆ. ಕುಡಿಯುವ ನೀರಿನ ಮೂಲಗಳ ಹತ್ತಿರ ಬಳಸಿದ ನೀರು ನಿಲ್ಲದಂತೆ ವ್ಯವಸ್ಥೆ ಮಾಡುವುದು, ಬಟ್ಟೆ ಪಾತ್ರೆ ತೊಳೆದನೀರು, ಕುಡಿಯುವ ನೀರಿನ ಮೂಲಗಳಿಂದ ದೂರ ಇರುವ ಹಾಗೆ ವ್ಯವಸ್ಥೆಗೊಳಿಸುವುದು. ನೀರಿನ ಪೈಪುಗಳು ಸೋರಿಕೆಯಿದ್ದಲ್ಲಿ ತ್ವರಿತವಾಗಿ ದುರಸ್ತಿಗೊಳಿಸುವುದು, ನಿಯಮಿತವಾಗಿ ಪ್ರತೀ ಹತ್ತು ದಿನಗಳಿಗೊಮ್ಮೆ ನೀರಿನ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವುದು ಹಾಗೂ ನೀರು ತುಂಬಿದ ಮೇಲೆ ಕ್ಲೋರಿನೇಷನ್ ಮಾಡುವುದು. ನೀರು ಪೂರೈಕೆ ನಲ್ಲಿಗಳು ಎತ್ತರದ ಸ್ಥಳದಲ್ಲಿ ಇರುವಂತೆ ಹಾಗೂ ಮುಚ್ಚಳವಿರುವ ನಲ್ಲಿಗಳನ್ನು ಉಪಯೋಗಿಸುವಂತೆ ಕ್ರಮ ಕೈಗೊಳ್ಳುವುದು. ಮನೆಯಲ್ಲಿ ಸಂಗ್ರಹಿಸಿದ ನೀರು ಮಕ್ಕಳಕೈಗೆ ಮತ್ತು ಸಾಕು ಪ್ರಾಣಿಗಳಿಗೆ ಎಟುಕದಂತೆ ಎತ್ತರದಲ್ಲಿರಿಸಿ, ನೀರು ತೆಗೆದುಕೊಳ್ಳಲು ಹಿಡಿಕೆ ಇರುವ ಬಟ್ಟಲನ್ನು ಉಪಯೋಗಿಸುವಂತಾಗಬೇಕು ಎಂದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X