Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅನಧಿಕೃತ ದೇವಸ್ಥಾನ ನಿರ್ಮಾಣ:...

ಅನಧಿಕೃತ ದೇವಸ್ಥಾನ ನಿರ್ಮಾಣ: ಎಂ.ಕೃಷ್ಣಪ್ಪ, ವಿ.ಸೋಮಣ್ಣ, ಪ್ರಿಯಾಕೃಷ್ಣಗೆ ಹೈಕೋರ್ಟ್ ನೋಟೀಸ್

ವಾರ್ತಾಭಾರತಿವಾರ್ತಾಭಾರತಿ29 Jun 2017 8:24 PM IST
share
ಅನಧಿಕೃತ ದೇವಸ್ಥಾನ ನಿರ್ಮಾಣ: ಎಂ.ಕೃಷ್ಣಪ್ಪ, ವಿ.ಸೋಮಣ್ಣ, ಪ್ರಿಯಾಕೃಷ್ಣಗೆ ಹೈಕೋರ್ಟ್ ನೋಟೀಸ್

ಬೆಂಗಳೂರು, ಜೂ.29: ನಗರದ ಮಾಗಡಿ ಮುಖ್ಯ ರಸ್ತೆಯ ಪೊಲೀಸ್ ವಸತಿ ಗೃಹಗಳ ಸಮುಚ್ಚಯ ಸಮೀಪ ಸಾರ್ವಜನಿಕರ ಉಪಯೋಗಕ್ಕೆ ಮೀಸಲಿಟ್ಟಿರುವ ಒಂದು ಎಕರೆ ವಿಸ್ತಾರದ ಪಾರ್ಕ್‌ನ ಜಾಗದಲ್ಲಿ ಅನಧಿಕೃತವಾಗಿ ಸಾಯಿಬಾಬಾ ದೇವಾಲಯ ನಿರ್ಮಿಸುತ್ತಿರುವುದಕ್ಕೆ ಬೆಂಬಲ ನೀಡುತ್ತಿರುವ ಆರೋಪ ಸಂಬಂಧ ವಸತಿ ಸಚಿವ ಎಂ.ಕೃಷ್ಣಪ್ಪ, ಅವರ ಪುತ್ರ ಹಾಗೂ ಗೋವಿಂದರಾಜನಗರ ಕ್ಷೇತ್ರದ ಶಾಸಕ ಪ್ರಿಯಾಕೃಷ್ಣ ಮತ್ತು ವಿಧಾನ ಪರಿಷತ್ ಬಿಜೆಪಿ ಸದಸ್ಯ ವಿ.ಸೋಮಣ್ಣ ಅವರಿಗೆ ಹೈಕೋರ್ಟ್ ಗುರುವಾರ ನೋಟಿಸ್ ಜಾರಿಗೊಳಿಸಿದೆ.

ದೇವಸ್ಥಾನದ ನಿರ್ಮಾಣದ ಕ್ರಮ ಪ್ರಶ್ನಿಸಿ ಎಸ್.ರವಿಚಂದ್ರ ಸೇರಿ ಮತ್ತಿತರ ಸ್ಥಳೀಯ ನಿವಾಸಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಕೆ. ಮುಖರ್ಜಿ ಮತ್ತು ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಪ್ರಕರಣ ಸಂಬಂಧ ಹೈಕೋರ್ಟ್ ಈ ಹಿಂದೆ ಸರಕಾರದ ಮುಖ್ಯ ಕಾರ್ಯದರ್ಶಿ ಮತ್ತು ರಾಜ್ಯ ಮುಜರಾಯಿ ಇಲಾಖೆ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿತ್ತು. ಗುರುವಾರ ವಸತಿ ಸಚಿವರಷ್ಟಲ್ಲದೆ ಬಿಬಿಎಂಪಿ ಆಯುಕ್ತರು, ನಗರ ಪೂರ್ವ ವಿಶೇಷ ಆಯುಕ್ತರು, ಸಾಯಿಬಾಬಾ ಸಾರ್ವಜನಿಕ ಗಣಪತಿ ದೇವಾಲಯ ಟ್ರಸ್ಟ್‌ಗೂ ನ್ಯಾಯಪೀಠ ಇದೇ ವೇಳೆ ನೋಟಿಸ್ ನೀಡಿತು.

ಮಾಗಡಿ ರಸ್ತೆಯಲ್ಲಿ ಸುಮಾರು 500ಕ್ಕೂ ಹೆಚ್ಚು ಪೊಲೀಸ್ ವಸತಿ ಗೃಹಗಳನ್ನು ಸರಕಾರ ನಿರ್ಮಾಣ ಮಾಡುತ್ತಿದೆ. ಇಲ್ಲಿ ಸುಮಾರು 1 ಸಾವಿರ ಪೊಲೀಸ್ ಕುಟುಂಬಗಳು ವಾಸ ಮಾಡುತ್ತಿವೆ. ಪಕ್ಕದ ಒಂದು ಎಕರೆ ಜಾಗವನ್ನು ಪಾರ್ಕ್ ನಿರ್ಮಾಣಕ್ಕಾಗಿ ಗೊತ್ತು ಮಾಡಲಾಗಿದ್ದರೂ, ಆ ಜಾಗದಲ್ಲಿ ಸಾಯಿಬಾಬಾ ಸಾರ್ವಜನಿಕ ಗಣಪತಿ ದೇವಾಲಯ ಟ್ರಸ್ಟ್, ಅನಧಿಕೃತವಾಗಿ ಸಾಯಿಬಾಬ ದೇವಸ್ಥಾನ ನಿರ್ಮಾಣ ಮಾಡುತ್ತಿದೆ. ಅದಕ್ಕೆ ವಸತಿ ಸಚಿವ ಎಂ.ಕೃಷ್ಣಪ್ಪ, ಶಾಸಕ ಪ್ರಿಯಾಕೃಷ್ಣ ಮತ್ತು ವಿಧಾನ ಪರಿಷತ್ ಸದಸ್ಯ ವಿ.ಸೋಮಣ್ಣ ಬೆಂಬಲ ನೀಡುತ್ತಿದ್ದಾರೆ. ರಾಜಕಾರಣಿಗಳ ಬೆಂಬಲದೊಂದಿಗೆ ಸಾಯಿಬಾಬಾ ದೇವಾಲಯದ ಟ್ರಸ್ಟ್, ಭಕ್ತಾಧಿಗಳಿಂದ ಹಣ ಸಂಗ್ರಹಿಸುತ್ತಾ ಹಗಲು ದರೋಡೆ ಮಾಡುತ್ತಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಜೊತೆಗೆ, ಸಾರ್ವಜನಿಕ ಪಾರ್ಕ್, ಸಾರ್ವಜನಿಕ ರಸ್ತೆ ಹಾಗೂ ಪ್ರದೇಶಗಳಲ್ಲಿ ದೇವಸ್ಥಾನ, ಕ್ರೈಸ್ತ ದೇವಾಲಯ ಮತ್ತು ಗುರುದ್ವಾರ ಸೇರಿದಂತೆ ಯಾವುದೇ ಧಾರ್ಮಿಕ ಕಟ್ಟಡ ನಿರ್ಮಾಣ ಮಾಡುವುದನ್ನು ತಡೆಗಟ್ಟಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಹೀಗಿದ್ದರೂ ಪಾರ್ಕ್ ಜಾಗದಲ್ಲಿ ಸಾಯಿಬಾಬ ದೇವಸ್ಥಾನ ನಿರ್ಮಿಸುತ್ತಿರುವುದು ಕಾನೂನು ಬಾಹಿರವಾಗಿವೆ ಮತ್ತು ಇದನ್ನು ತಡೆಗಟ್ಟಲು ಬಿಬಿಎಂಪಿ ಹಾಗೂ ಸರಕಾರ ವಿಫಲವಾಗಿದೆ. ಹೀಗಾಗಿ, ದೇವಸ್ಥಾನವನ್ನು ಮುಜರಾಯಿ ಇಲಾಖೆಯ ವಶಕ್ಕೆ ಪಡೆದು, ಆಡಳಿತ ನಿರ್ವಹಣೆಗೆ ಸರಕಾರದಿಂದ ಆಡಳಿತಾಧಿಕಾರಿಯನ್ನು ನೇಮಿಸಲು ಸರಕಾರಕ್ಕೆ ಆದೇಶಿಸುವಂತೆ ಅರ್ಜಿದಾರರು ಕೋರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X