ಘಟನೆ ಬಗ್ಗೆ ಗೊತ್ತಿಲ್ಲ: ಸಚಿವ ಪ್ರಮೋದ್
ಉಡುಪಿ, ಜೂ.29: ನಗರಸಭೆ ಸಾಮಾನ್ಯಸಭೆಯಲ್ಲಿ ನಡೆದ ಹಲ್ಲೆ ಪ್ರಕರಣ ನನ್ನ ಗಮನಕ್ಕೆ ಬಂದಿಲ್ಲ. ಅಲ್ಲಿ ಈ ರೀತಿಯ ಘಟನೆ ನಡೆದಿರುವುದು ಸತ್ಯವಾದರೆ ನಾನು ಅದನ್ನು ಖಂಡಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.
ಬಿಜೆಪಿಯವರಿಗೆ ಕೇವಲ ಆರೋಪ ಮಾಡುವುದೇ ಕೆಲಸ. ವಿರೋಧ ಪಕ್ಷದವರಾಗಿ ಬಿಜೆಪಿಯುವರು ಪ್ರತಿಭಟನೆ ಮಾಡುವುದು ಅವರ ಕರ್ತವ್ಯ. ಈ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡು ಪರಿಶೀಲಿಸುತ್ತೇನೆ. ಇಲ್ಲಿ ತಪ್ಪಾಗಿದ್ದರೆ ಅದನ್ನು ನಾನು ತಪ್ಪು ಅಂತ ಹೇಳುವುದಕ್ಕೆ ಹಿಂಜರಿಯುವುದಿಲ್ಲ ಎಂದರು.
Next Story





