Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವೈವಿಧ್ಯ
  3. ಆನ್‌ಲೈನ್ ಶಾಪಿಂಗ್ ಮೇಲೆ ಜಿಎಸ್‌ಟಿ...

ಆನ್‌ಲೈನ್ ಶಾಪಿಂಗ್ ಮೇಲೆ ಜಿಎಸ್‌ಟಿ ಪರಿಣಾಮವೇನು?

ವಾರ್ತಾಭಾರತಿವಾರ್ತಾಭಾರತಿ29 Jun 2017 11:58 PM IST
share
ಆನ್‌ಲೈನ್ ಶಾಪಿಂಗ್ ಮೇಲೆ ಜಿಎಸ್‌ಟಿ ಪರಿಣಾಮವೇನು?

ಜಿಎಸ್‌ಟಿ ಜಾರಿಗೊಳ್ಳಲು ಇನ್ನು ಒಂದು ದಿನವಷ್ಟೇ ಬಾಕಿಯಿದ್ದು, ತಮ್ಮ ಬಳಿ ಉಳಿದಿರುವ ದಾಸ್ತಾನನ್ನು ಖಾಲಿ ಮಾಡಲು ಆನ್‌ಲೈನ್ ಶಾಪಿಂಗ್ ತಾಣಗಳು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿವೆ. ಅವು ಗ್ರಾಹಕರಿಗೆ ಶೇ.25ರಿಂದ ಶೇ.90ರವರೆಗೂ ರಿಯಾಯಿತಿಗಳನ್ನು ಘೋಷಿಸಿವೆ.
ಆದರೆ ಜುಲೈ 1ರಂದು ಜಿಎಸ್‌ಟಿ ಜಾರಿಗೆ ಬಂದ ನಂತರ ಇವೆಲ್ಲವೂ ಬದಲಾಗಲಿದೆ. ನಿಮ್ಮ ಹೆಚ್ಚಿನ ಆನ್‌ಲೈನ್ ಖರೀದಿಗಳು ದುಬಾರಿಯಾಗಲಿವೆ. ಅದು ಹೇಗೆ ಎನ್ನುವುದನ್ನು ಓದಿ.........

ಮೂಲದಲ್ಲಿ ತೆರಿಗೆೆ ಸಂಗ್ರಹ

ಹಾಲಿ ಇ-ಕಾಮರ್ಸ್ ಜಾಲತಾಣಗಳು ಗ್ರಾಹಕರಿಂದ ಯಾವುದೇ ರೂಪದಲ್ಲಿ ತೆರಿಗೆ ಯನ್ನು ಸಂಗ್ರಹಿಸುವುದಿಲ್ಲ. ಆದರೆ ಜಿಎಸ್‌ಟಿಯಡಿ ಈ ಜಾಲತಾಣಗಳು ತಮ್ಮಲ್ಲಿ ನೋಂದಾಯಿಸಿ ಕೊಂಡಿರುವ ಚಿಲ್ಲರೆ ಮಾರಾಟಗಾರರಿಗೆ ಹಣ ಪಾವತಿಸುವಾಗ ಶೇ.1ರಷ್ಟು ನಿಗದಿತ ದರದಲ್ಲಿ ತೆರಿಗೆಯನ್ನು ಸಂಗ್ರಹಿಸಬೇಕಿದೆ. ಇದು ಬೆಲೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿದ್ದು, ಅಂತಿಮವಾಗಿ ಆನ್‌ಲೈನ್ ಖರೀದಿ ದುಬಾರಿ ಯಾಗಲಿದೆ. ಸದ್ಯಕ್ಕೆ ಈ ಶೇ.1 ತೆರಿಗೆ ಪ್ರಸ್ತಾವವನ್ನು ಮುಂದೂಡಲಾಗಿದೆಯಾದರೂ ನಂತರದ ದಿನಗಳಲ್ಲಿ ಅನ್ವಯಗೊಳ್ಳುವ ಸಾಧ್ಯತೆಯಿದೆ.

ತ್ವರಿತ ಪೂರೈಕೆ

ಜಿಎಸ್‌ಟಿಯಡಿ ಚಿಲ್ಲರೆ ಮಾರಾಟಗಾರರು ಪ್ರತಿಯೊಂದು ರಾಜ್ಯಕ್ಕೂ ಪ್ರತ್ಯೇಕ ತೆರಿಗೆ ದಾಖಲೆ ಗಳನ್ನು ಸಲ್ಲಿಸುವ ಅಗತ್ಯವಿಲ್ಲ. ಹೀಗಾಗಿ ಗ್ರಾಹಕರು ಆನ್‌ಲೈನ್‌ನಲ್ಲಿ ಖರೀದಿಸಿದ ವಸ್ತು ಹೆಚ್ಚು ತ್ವರಿತವಾಗಿ ಅವರಿಗೆ ತಲುಪಲಿದೆ. ಉಚಿತ ಕೊಡುಗೆ, ರಿಯಾಯಿತಿಗಳು ಅಂತ್ಯ?

ಆನ್‌ಲೈನ್ ಶಾಪಿಂಗ್‌ನಲ್ಲಿ ಭಾರೀ ರಿಯಾಯಿತಿ ಮತ್ತು ಉಚಿತ ಕೊಡುಗೆಗಳನ್ನು ಪಡೆದು ಅಭ್ಯಾಸವಾಗಿದೆಯೇ? ಭವಿಷ್ಯದಲ್ಲಿ ಇಂತಹ ಸೌಲಭ್ಯಗಳು ಕಡಿಮೆಯಾಗ ಬಹುದು, ಏಕೆಂದರೆ ಜಿಎಸ್‌ಟಿಯಡಿ ಈ ಉಚಿತ ಕೊಡುಗೆಗಳು ಮತ್ತು ರಿಯಾಯಿತಿಗಳು ಹೆಚ್ಚುವರಿ ತೆರಿಗೆಯನ್ನು ಆಕರ್ಷಿಸುತ್ತವೆ. ಅಲ್ಲದೆ ಇ-ಕಾಮರ್ಸ್ ಕಂಪೆನಿಯು ತಾನು ಪೂರೈಕೆದಾರನಿಂದ ಖರೀದಿಸಿದ ವಸ್ತುಗಳ ಬೆಲೆಗಳ ಮೇಲೆ ತೆರಿಗೆಯನ್ನು ಪಾವತಿಸಬೇಕಾಗಿರುವುದರಿಂದ ಹೆಚ್ಚಿನ ಸಂದರ್ಭಗಳಲ್ಲಿ ರಿಯಾಯಿತಿ ನೀಡಲು ಸಾಧ್ಯವಾಗುವುದಿಲ್ಲ.

ಜಾಗತಿಕ ಮಾರಾಟಗಾರರಿಂದ ಖರೀದಿ

ನೀವು ಅಮೆಝಾನ್ ಡಾಟ್ ಕಾಮ್ ಮತ್ತು ಇಬೇ ಡಾಟ್ ಕಾಮ್‌ನಂತಹ ಶಾಪಿಂಗ್ ತಾಣಗಳಿಂದ ವಸ್ತುಗಳನ್ನು ಖರೀದಿಸಿದರೆ ಅವು ವಿದೇಶಿ ಕರೆನ್ಸಿಗಳಲ್ಲಿ ವಹಿವಾಟು ನಡೆಸುತ್ತವೆ. ಇಂತಹ ಶಾಪಿಂಗ್ ತಾಣಗಳಿಗಾಗಿ ನಿಯಮಗಳನ್ನು ಸರಕಾರವು ಇನ್ನಷ್ಟೇ ಸ್ಪಷ್ಟಪಡಿಸಬೇಕಿದೆ.

ವಾಪಸಾತಿ ಮತ್ತು ರದ್ದತಿ ಕಠಿಣವಾಗಲಿದೆ

ಜಿಎಸ್‌ಟಿ ಜಾರಿಗೊಂಡ ಬಳಿಕ ನೀವು ಆನ್‌ಲೈನ್‌ನಲ್ಲಿ ಖರೀದಿಸಿದ ವಸ್ತುಗಳ ವಾಪಸಾತಿ ಮತ್ತು ಆರ್ಡರ್‌ಗಳ ರದ್ದತಿ ಸುಲಭವಾಗಿರುವುದಿಲ್ಲ. ಸದ್ಯ ಇ-ಕಾಮರ್ಸ್ ಕಂಪೆನಿಗಳಲ್ಲಿ ವಾಪಸಾತಿ ಮತ್ತು ರದ್ದತಿ ಪ್ರಮಾಣ ಸುಮಾರು ಶೇ.18ರಷ್ಟಿದೆ. ಮೂಲದಲ್ಲಿ ತೆರಿಗೆಯನ್ನು ಸಂಗ್ರಹಿಸುವಾಗ ವಾಪಸಾತಿ ಮತ್ತು ರದ್ದತಿ ಪ್ರಕರಣಗಳಲ್ಲಿ ಇ-ಕಾಮರ್ಸ್ ಕಂಪೆನಿಗಳು ತೆರಿಗೆ ಮೊತ್ತವನ್ನು ಸ್ವತಃ ಭರಿಸಬೇಕಾಗುತ್ತದೆ ಮತ್ತು ನಂತರ ಸರಕಾರದಿಂದ ಅದರ ಮರುಪಾವತಿಯನ್ನು ಪಡೆದು ಕೊಳ್ಳಬೇಕಾಗುತ್ತದೆ. ಹೀಗಾಗಿ ವಾಪಸಾತಿ ಮತ್ತು ರದ್ದತಿಗಳಿಂದಾಗಿ ಈ ಕಂಪೆನಿಗಳು ನಗದು ಹರಿವಿನ ಮೇಲೆ ಗಣನೀಯವಾಗಿ ವ್ಯತಿರಿಕ್ತ ಪರಿಣಾಮವನ್ನು ಎದುರಿಸಬೇಕಾಗುತ್ತದೆ.

ಕೃಪೆ: scroll.in

share
ವಾರ್ತಾಭಾರತಿ
ವಾರ್ತಾಭಾರತಿ
Next Story
X