Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರೇಷ್ಮೆ ಜವಳಿ ಮೇಲಿನ ಶೇ.5 ತೆರಿಗೆಗೆ...

ರೇಷ್ಮೆ ಜವಳಿ ಮೇಲಿನ ಶೇ.5 ತೆರಿಗೆಗೆ ವಿರೋಧ

ವಾರ್ತಾಭಾರತಿವಾರ್ತಾಭಾರತಿ30 Jun 2017 7:06 PM IST
share

ಬೆಂಗಳೂರು, ಜೂ.30: ರೇಷ್ಮೆ ಜವಳಿ ಮೇಲೆ ವಿಧಿಸಲು ಉದ್ದೇಶಿಸಿರುವ ಶೇ.5 ರಷ್ಟು ಸರಕು ಮತ್ತು ಸೇವಾ ತೆರಿಗೆಯನ್ನು ಕೇಂದ್ರ ಸರಕಾರ ಹಿಂಪಡೆಯಬೇಕು ಎಂದು ರೇಷ್ಮೆ ಬೆಳೆಗಾರರು, ನೇಕಾರರು ಹಾಗೂ ವರ್ತಕರು ಆಗ್ರಹಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಹಾಗೂ ಮಾಜಿ ಸಂಸದ ಸಿ.ನಾರಾಯಣಸ್ವಾಮಿ, ರೇಷ್ಮೆ ಉದ್ಯಮವು ಭಾರತದ ಪುರಾತನ ಉದ್ಯಮಗಳಲ್ಲಿ ಒಂದಾಗಿದ್ದು, ಚಾಕಿ ಸಾಕಾಣಿಕೆದಾರರು, ರೇಷ್ಮೆ ಬೇಸಾಯಗಾರರು, ರೇಷ್ಮೆ ಗೂಡು ಬೆಳೆಗಾರರು, ರೇಷ್ಮೆ ಮೊಟ್ಟೆ ಉತ್ಪಾದಕರು, ರೀಲರುಗಳು, ಬಣ್ಣ ಹಾಕುವವರು ಸೇರಿದಂತೆ ಅನೇಕ ಹಂತದ ಕುಟುಂಬದ ಸದಸ್ಯರನ್ನು ಒಳಗೊಂಡಿದೆ. ರೇಷ್ಮೆ ಉದ್ಯಮವನ್ನು ನಂಬಿಕೊಂಡು 85 ಲಕ್ಷಕ್ಕೂ ಅಧಿಕ ಜನರು ಜೀವನ ನಡೆಸುತ್ತಿದ್ದಾರೆ ಎಂದರು.


ವ್ಯಾಪಾರಿ, ಹಂಚಿಕೆದಾರ, ಸಗಟು ವ್ಯಾಪಾರಿ ಮತ್ತು ಚಿಲ್ಲರೆ ವ್ಯಾಪಾರಿಗಳ ಎಲ್ಲ ಹಂತಗಳಲ್ಲಿ ಸರಕು ಮತ್ತು ಸೇವಾ ತೆರಿಗೆ ವಿಧಿಸಲು ಮುಂದಾಗಿದ್ದಾರೆ. ಇದರಿಂದಾಗಿ ದೇಶದಾದ್ಯಂತ ಅಂದಾಜು 1 ಕೋಟಿಗೂ ಅಧಿಕ ಜನರು ಸಂಕಷ್ಟಕ್ಕೆ ಒಳಗಾಗುತ್ತಾರೆ. ಹಲವಾರು ಜನರು ನಿರುದ್ಯೋಗಿಗಳಾಗುತ್ತಾರೆ. ಇದನ್ನೆ ನಂಬಿ ಜೀವನ ನಡೆಸುತ್ತಿರುವವರು ಸಂಕಷ್ಟದ ಸ್ಥಿತಿ ಎದುರಿಸುವಂತಾಗುತ್ತದೆ ಎಂದು ತಿಳಿಸಿದರು.


ರೇಷ್ಮೆ ಉದ್ಯಮವು ಕೃತಕ ನೂಲಿನಿಂದ ತಯಾರಿಸುವ ಜವಳಿಯಿಂದ ತೀವ್ರ ಪೈಪೋಟಿ ಎದುರಿಸುತ್ತಿದೆ. ಅತ್ಯಂತ ಮುಂದುವರಿದ ತಂತ್ರಜ್ಞಾನ ಬಳಸಿ ರೇಷ್ಮೆ ಜವಳಿಯನ್ನು ಅನುಕರಿಸುವ, ಬಳಕೆದಾರರು ಗುರುತಿಸಲಾಗದ ಜವಳಿಯನ್ನು ಕೃತಕ ನೂಲಿನಿಂದ ತಯಾರಿಸಲಾಗುತ್ತಿದೆ. ಇದರಿಂದಾಗಿ ರೇಷ್ಮೆ ಜವಳಿಯ ದರದ ಶೇ.10 ರಷ್ಟು ದರದಲ್ಲಿ ಕೃತಕ ನೂಲಿನ ಜವಳಿ ಸಿಗುತ್ತಿದ್ದು, ರೇಷ್ಮೆಗೆ ಮಾರುಕಟ್ಟೆ ಪ್ರಮಾಣ ಇಳಿಕೆಯಾಗಿದೆ. ಇದೀಗ ಕೇಂದ್ರ ಸರಕಾರ ಜಾರಿ ಮಾಡುತ್ತಿರುವ ಜಿಎಸ್‌ಟಿಯಿಂದಾಗಿ ಮತ್ತಷ್ಟು ಇಳಿಮುಖವಾಗುತ್ತದೆ ಎಂದು ಅವರು ಹೇಳಿದರು.


ಈ ಹಿನ್ನೆಲೆಯಲ್ಲಿ ಸರಕಾರ ರೇಷ್ಮೆ ಬೆಳೆಗಾರರ, ನೇಕಾರರ ಹಾಗೂ ಮಾರಾಟಗಾರರ ಹಿತದೃಷ್ಟಿಯಿಂದ ಪುನರ್ ವಿಮರ್ಶೆ ಮಾಡಿ, ಪರಿಶೀಲನೆ ನಡೆಸಿ ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ನೇಕಾರರ ಸಂಘದ ಅಧ್ಯಕ್ಷ ಟಿ.ವಿ.ಮಾರುತಿ, ನಿವೃತ್ತ ಐಪಿಎಸ್ ಅಧಿಕಾರಿ ಡಿ.ಮುನಿಕೃಷ್ಣ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X