Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೇ.80ರಷ್ಟು ಅವಶ್ಯಕ ವಸ್ತುಗಳಿಗೆ...

ಶೇ.80ರಷ್ಟು ಅವಶ್ಯಕ ವಸ್ತುಗಳಿಗೆ ಶೇ.18ರೊಳಗೆ ಜಿಎಸ್‌ಟಿ

ವಾರ್ತಾಭಾರತಿವಾರ್ತಾಭಾರತಿ30 Jun 2017 11:01 PM IST
share
ಶೇ.80ರಷ್ಟು ಅವಶ್ಯಕ ವಸ್ತುಗಳಿಗೆ ಶೇ.18ರೊಳಗೆ ಜಿಎಸ್‌ಟಿ

   ಹೊಸದಿಲ್ಲಿ,ಜೂ.30: ದೇಶದ ಅರ್ಥಿಕ ವ್ಯವಸ್ಥೆಗೆ ಹೊಸ ತಿರುವನ್ನೇ ನೀಡುವುದೆಂದು ಭಾವಿಸಲಾಗಿರುವ ಸರಕು ಹಾಗೂ ಸೇವಾ ತೆರಿಗೆ (ಜಿಎಸ್‌ಟಿ)ಯ ಜಾರಿಯಿಂದ ಉಪ್ಪು ಹಾಗೂ ಸೋಪುಗಳು ಸೇರಿದಂತೆ ಹಲವಾರು ಅವಶ್ಯಕ ವಸ್ತುಗಳ ಬೆಲೆಗಳು ಬದಲಾವಣೆಯಾಗದು. ಯಾಕೆಂದರೆ ಹಲವಾರು ದಿನಬಳಕೆಯ ವಸ್ತುಗಳಿಗೆ ಜಿಎಸ್‌ಟಿಯಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ ಅಥವಾ ಜಿಎಸ್‌ಟಿಯನ್ನು ಹಾಲಿ ತೆರಿಗೆಯ ಮಟ್ಟಕ್ಕೆ ನಿಗದಿಪಡಿಸಲಾಗಿದೆ.

   ಚಹಾಪುಡಿ, ಖಾದ್ಯ ತೈಲ, ಸಕ್ಕರೆ, ಜವಳಿ ಹಾಗೂ ಶಿಶು ಆಹಾರಗಳಿಗೆ ಕೇವಲ ಶೇ.5ರಷ್ಟು ತೆರಿಗೆ ವಿಧಿಸಲಾಗಿದೆ. ತೆರಿಗೆಗೆ ಯೋಗ್ಯವಾದ ಸಾಮಾಗ್ರಿಗಳ ಪೈಕಿ ಶೇ.19ರಷ್ಟಿರು ಮೋಟಾರ್ ಸೈಕಲ್, ಸುಗಂಧದ್ರವ್ಯ ಹಾಗೂ ಶಾಂಪೂ ಸೇರಿದಂತೆ ಹಲವಾರು ವಿಲಾಸಿ ಸಾಧನಗಳಿಗೆ ಶೇ.18 ಅಥವಾ ಅದಕ್ಕಿಂತ ಹೆಚ್ಚಿನ ತೆರಿಗೆ ವಿಧಿಸಲಾಗಿದೆ.

  ಜಿಎಸ್‌ಟಿಯ ಬಗ್ಗೆ ಮಾಹಿತಿ ನೀಡಲು ತೆರಿಗೆ ಇಲಾಖೆಯು ಕಳೆದ ಹಲವು ತಿಂಗಳುಗಳಿಂದ ಶ್ರಮಿಸುತ್ತಿದೆ. ನೂತನ ತೆರಿಗೆ ವ್ಯವಸ್ಥೆಯು, ವಾಣಿಜ್ಯ ರಂಗದಲ್ಲಿ ಪಾರದರ್ಶಕತೆಯನ್ನು ತರಲಿದ್ದು, ಕರಗಳ್ಳತನವನ್ನು ತಡೆಯಲು ನೆರವಾಗಲಿದೆ ಹಾಗೂ ಪ್ರಾಮಾಣಿಕ ತೆರಿಗೆ ಪಾವತಿದಾರರಿಗೆ ಪ್ರಯೋಜನಕಾರಿಯಾಗಲಿದೆ ಎಂದು ಕಂದಾಯ ಕಾರ್ಯದರ್ಶಿ ಹಸ್ಮುಖ್ ಅಧಿಯಾ ತಿಳಿಸಿದ್ದಾರೆ.

 ಜಿಎಸ್‌ಟಿ ಜಾರಿಯ ಮುನ್ನ 10 ಲಕ್ಷಕ್ಕೂ ಅಧಿಕ ವಹಿವಾಟು ನಡೆಸುವ ವರ್ತಕರು ವ್ಯಾಟ್ ತೆರಿಗೆಯನ್ನು ಪೂರ್ಣ ದರದಲ್ಲಿ ಪಾವತಿಸಬೇಕಾಗಿತ್ತು. ಆದರೆ ಅವರಿಗೆ ಅಬಕಾರಿ ಸುಂಕದಿಂದ ವಿನಾಯಿತಿ ನೀಡಲಾಗಿತ್ತು. ಆದರೆ ಇದೀಗ 20ರಿಂದ 75 ಲಕ್ಷಕ್ಕೂ ಅಧಿಕ ವಹಿವಾಟು ನಡೆಸುವ ವ್ಯಾಪಾರಿಗಳಿಗೆ ಕೇವಲ ಶೇ.2.5ರಷ್ಟು ತೆರಿಗೆ ವಿಧಿಸಲಾಗುವುದು. 20 ಲಕ್ಷ ರೂ.ವರೆಗೆ ವ್ಯವಹಾರ ನಡೆಸುವ ಉದ್ಯಮಿಗಳಿಗೆ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ.

ಸಾಮಾನ್ಯ ಕುಟುಂಬಗಳಿಗೂ ಜಿಎಸ್‌ಟಿ ಒಂದು ವರದಾನವಾಗಿದೆ. ಶೇ. 81ರಷ್ಟು ಆವಶ್ಯಕ ಸಾಮಾಗ್ರಿಗಳು ಶೇ.18ರೊಳಗಿನ ಜಿಎಸ್‌ಟಿ ತೆರಿಗೆಯ ವ್ಯಾಪ್ತಿಗೆ ಬರಲಿವೆ. ಬೆಣ್ಣೆ, ತುಪ್ಪ, ಬಾದಾಮಿ, ಹಣ್ಣಿನ ರಸ, ಮೊಬೈಲ್ ಫೋನ್‌ಗಳು ಹಾಗೂ ಕೊಡೆ ಮತ್ತಿತರ ಸಾಮಾಗ್ರಿಗಳ ಮೇಲೆ ಜಿಎಸ್‌ಟಿ ತೆರಿಗೆಯನ್ನು ಶೇ.12ರೊಳಗಿರಿಸಲಾಗಿದೆ. ಟೂಥ್‌ಪೇಸ್ಟ್, ತಲೆಗೂದಲ ಎಣ್ಣೆ,ಸೋಪ್, ಐಸ್‌ಕ್ರೀಮ್ ಹಾಗೂ ಪ್ರಿಂಟರ್‌ಗಳ ಮೇಲೆ ಶೇ.18ರಷ್ಟು ಜಿಎಸ್‌ಟಿ ವಿಧಿಸಲಾಗಿದೆ.

ಚೂಯಿಂಗ್‌ಗಮ್, ಚಾಕೊಲೇಟ್, ಕಸ್ಟರ್ಡ್ ಪೌಡರ್ ಹಾಗೂ ಚಾಕಲೇಟ್ ಯುಕ್ತ ವ್ಯಾಫರ್‌ಗಳ ಮೇಲೆ ಅತ್ಯಧಿಕ ದರದಲ್ಲಿ ಅಂದರೆ ಶೇ.28ರಷ್ಟು ತೆರಿಗೆ ವಿಧಿಸಲಾಗಿದೆ.

ಇದರ ಜೊತೆಗೆ ಕಾರುಗಳು, ಹವಾನಿಯಂತ್ರಕಗಳು, ರೆಫ್ರಿಜರೇಟರ್‌ಗಳು ಹಾಗೂ ಕೆಲವು ಕೈಗಾರಿಕಾ ಉಪಕರಣಗಳಿಗೂ ಶೇ.28ರಷ್ಟು ಜಿಎಸ್‌ಟಿ ವಿಧಿಸಲಾಗಿದೆ.

ಜಿಎಸ್‌ಟಿ ಜಾರಿಯ ಬಳಿಕ ವ್ಯಾಪಾರಿಗಳು ಆನ್‌ಲೈನ್ ಮೂಲಕ ತಮ್ಮ ರಿಟರ್ನ್‌ಗಳನ್ನು ಸಲ್ಲಿಸಬೇಕಾಗುತ್ತದೆ. ರಿಟೇಲ್ ವ್ಯಾಪಾರಿಗಳು ತಿಂಗಳಿಗೊಮ್ಮೆ ತಮ್ಮ ಜಿಎಸ್‌ಟಿ ರಿಟರ್ನ್‌ಗಳನ್ನು ಆನ್‌ಲೈನ್ ಮೂಲಕ ಫಾರಂ ಭರ್ತಿ ಮಾಡಿ ಸಲ್ಲಿಸಬೇಕಾಗುತ್ತದೆ. ಅವರ ರಿಟರ್ನ್ ಸಲ್ಲಿಕೆಯನ್ನು, ಲಭ್ಯವಿರುವ ಕ್ರೆಡಿಟ್ ಇನ್‌ಪುಟ್ ಜೊತೆ ತಾಳೆ ಮಾಡಲಾಗುವುದು ಹಾಗೂ ಆ ಬಳಿಕ ಅವರು ಪಾವತಿಸಬೇಕಾದ ತೆರಿಗೆ ಬಾಧ್ಯತೆಯನ್ನು ಕಂಪ್ಯೂಟರ್ ಮೂಲಕ ನಿರ್ಧರಿಸಲಾಗುವುದು.

‘‘ಇಂದು ಆದಾಯ ತೆರಿಗೆ ರಿಟರ್ನ್‌ಗಳನ್ನು ಆನ್‌ಲೈನ್ ಮೂಲಕವೇ ಸಲ್ಲಿಸಲಾಗುತ್ತಿದೆ.ಅದೇ ರೀತಿ ಜಿಎಸ್‌ಟಿ ರಿಟರ್ನ್‌ನ್ನು ಅನ್‌ಲೈನ್ ಮೂಲಕ ಸಲ್ಲಿಸುವುದು ಅತ್ಯಂತ ಸರಳ ಹಾಗೂ ಸುಲಭವಾದುದು’’ ಎಂದು ಅಧಿಯಾ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X