Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಳೆಗೆರೆ ಪ್ರಕರಣ ಹಕ್ಕು ಚ್ಯುತಿ...

ಬೆಳೆಗೆರೆ ಪ್ರಕರಣ ಹಕ್ಕು ಚ್ಯುತಿ ಪರಿಮಿತಿಗೆ ಒಳಪಡುವುದಿಲ: ಎ.ಕೆ.ಸುಬ್ಬಯ್ಯ

ವಾರ್ತಾಭಾರತಿವಾರ್ತಾಭಾರತಿ1 July 2017 6:59 PM IST
share
ಬೆಳೆಗೆರೆ ಪ್ರಕರಣ ಹಕ್ಕು ಚ್ಯುತಿ ಪರಿಮಿತಿಗೆ ಒಳಪಡುವುದಿಲ: ಎ.ಕೆ.ಸುಬ್ಬಯ್ಯ

ಮಡಿಕೇರಿ ಜು.1: ಖ್ಯಾತ ಪತ್ರಕರ್ತ ರವಿ ಬೆಳಗೆರೆ ಮತ್ತು ಅನಿಲ್ ರಾಜ್ ಅವರ ಪ್ರಕರಣ ವಿಧಾನಸಭೆಯ ಹಕ್ಕು ಚ್ಯುತಿಯ ಪರಿಮಿತಿಗೆ ಒಳಪಡುವುದಿಲ್ಲವೆಂದು ಮಾಜಿ ಎಂಎಲ್‌ಸಿ ಹಾಗೂ ಹಿರಿಯ ವಕೀಲರಾದ ಎ.ಕೆ.ಸುಬ್ಬಯ್ಯ ಅಭಿಪ್ರಾಯಪಟ್ಟಿದ್ದಾರೆ.
  
ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆಯನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಜನಪ್ರತಿನಿಧಿಗಳಿಗೆ ಸಂಬಂಧಿಸಿದಂತೆ ಅವರ ವೈಯಕ್ತಿಕ ವಿಚಾರಗಳ ಕುರಿತು ಪತ್ರಿಕೆಯಲ್ಲಿ ಪ್ರಕಟವಾದ ವಿಚಾರ ವಿಧಾನಸಭೆಯ ಶಾಸಕರ ಶಾಸನ ಬದ್ಧ ಹಕ್ಕುಗಳಿಗೆ ಚ್ಯುತಿಯನ್ನು ಉಂಟು ಮಾಡಲಾರದು. ಈ ಹಿನ್ನೆಲೆಯಲ್ಲಿ ಇದು ಹಕ್ಕು ಚ್ಯುತಿಯ ವ್ಯಾಪ್ತಿಗೆ ಬರುವುದಿಲ್ಲ. ಬದಲಾಗಿ, ವೈಯಕ್ತಿಕ ವಿಚಾರಗಳಾದ್ದರಿಂದ ಪತ್ರಿಕಾ ವರದಿಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯನ್ನು ಹಾಕಬಹುದಷ್ಟೆ. ಈ ಪ್ರಕರಣದಲ್ಲಿ ಇಬ್ಬರು ಪತ್ರಕರ್ತರಿಗೆ ಒಂದು ವರ್ಷ ಶಿಕ್ಷೆಯನ್ನು ನೀಡುವುದಕ್ಕೂ ಮುನ್ನ ಶಿಕ್ಷೆಗೆ ಒಳಪಡುವ ವ್ಯಕ್ತಿಯ ಅನಿಸಿಕೆ ಅಭಿಪ್ರಾಯಗಳ ಮಂಡನೆ ಮತ್ತು ಸಮರ್ಥನೆಗೆ ಅವಕಾಶವನ್ನು ನ್ಯಾಯ ಬದ್ಧವಾಗಿ ಒದಗಿಸಬೆೇಕಾಗುತ್ತದೆ. ಆದರೆ, ಅಂತಹ ಅವಕಾಶವನ್ನು ನೀಡಿಲ್ಲವೆಂದು ಆರೋಪಿಸಿದರು. 

ವಿಧಾನಸಭೆಯ ಒಳಗೆ ಮೂಲಭೂತ ಹಕ್ಕುಗಳಿಗೆ ಚ್ಯುತಿ ಬಂದಲ್ಲಿ ಅದನ್ನು ಪರಿಶೀಲಿಸುವ ಹಕ್ಕನ್ನು ನ್ಯಾಯಾಲಯ ಹೊಂದಿರುತ್ತದೆ ಎಂದು ಸ್ಪಷ್ಟಪಡಿಸಿದ ಎ.ಕೆ. ಸುಬ್ಬಯ್ಯ, ಇದೀಗ ರಾಜ್ಯ ಉಚ್ಚ ನ್ಯಾಯಾಲಯ ಇಬ್ಬರು ಪತ್ರಕರ್ತರ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ಸದನದ ಅಧ್ಯಕ್ಷರ ನಿಲುವಿಗೆ ವಿರುದ್ಧವಾಗಿ ತೀರ್ಪು ನೀಡಿದಲ್ಲಿ ವಿಧಾನಸಭೆಯ ಗೌರವಕ್ಕೆ ಧಕ್ಕೆ ಬರುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.

ವಿಧಾನ ಸಭೆಯ ಶಾಸಕರು, ಲೋಕಸಭೆಯಲ್ಲಿನ ಸಂಸದರು ತಮ್ಮ ಕರ್ತವ್ಯವನ್ನು ನಿರ್ಭೀತಿಯಿಂದ ಕಾರ್ಯನಿರ್ವಹಿಸಲು ಸಾಧ್ಯವಾಗದ ರೀತಿಯ ಪತ್ರಿಕಾ ವರದಿಗಳು ಹಕ್ಕು ಚ್ಯುತಿಯ ವ್ಯಾಪ್ತಿಗೆ ಒಳಪಡುತ್ತದೆ ಮತ್ತು ಇಂತಹ ಸಂದರ್ಭಗಳಲ್ಲಿ ಶಿಕ್ಷೆ ವಿಧಿಸುವ ಅಧಿಕಾರವನ್ನು ಹೊಂದಿರುವುದಾಗಿ ಸುಬ್ಬಯ್ಯ ಸ್ಪಷ್ಟಪಡಿಸಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X