ಜು.3ರಂದು ಸಂಜೀವಿನಿ ಪುಸ್ತಕ ಬಿಡುಗಡೆ

ಮಂಗಳೂರು, ಜು. 1: ಡಾ.ಮುರಲೀ ಮೋಹನ್ ಚೂಂತಾರು ಅವರು ಬರೆದ ಆರನೇ ಕೃತಿ ಸಂಜೀವಿನಿ ಆರೋಗ್ಯ ಮಾರ್ಗದರ್ಶಿ-ಭಾಗ ಎರಡು ಇದರ ಲೋಕಾರ್ಪಣೆ ಜು.3ರಂದು ನಡೆಯಲಿದೆ.
ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ (ರಿ) ಮಂಗಳೂರು, ಇದರ ಆಶ್ರಯದಲ್ಲಿ ಮಂಗಳೂರಿನ ಓಷನ್ ಪರ್ಲ್ ಹೋಟೆಲಿನ ಪೆಸಿಫಿಕ್ ಸಭಾಭವನದಲ್ಲಿ, ಸುರಕ್ಷಾ ದಂತ ಚಿಕಿತ್ಸಾಲಯ, ಹೊಸಂಗಡಿ ಇದರ ವಿಂಶತಿ ಸಂಭ್ರಮದ ಜೊತೆಗೆ ಜು. 3ರಂದು ರಾತ್ರಿ 8 ಗಂಟೆಗೆ ಈ ಕಾರ್ಯಕ್ರಮ ಜರಗಲಿದೆ. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಅರಣ್ಯ ಪರಿಸರ ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ ಅವರು ಪುಸ್ತಕವನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಮುಖ್ಯ ಅತಿಥಿಯಾಗಿ ಹಿರಿಯ ಕುಟುಂಬ ವೈದ್ಯ ಡಾ.ರಮಾನಂದ ಬನಾರಿ ಮಂಜೇಶ್ವರ ಅವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ವಹಿಸಲಿದ್ದಾರೆ. ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಅಧ್ಯಕ್ಷ ಚೂಂತಾರು ಲಕ್ಷ್ಮೀ ನಾರಾಯಣ ಭಟ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.





