ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು, ಜು.1: ರಾಜ್ಯ ಸರಕಾರವು ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ವಿ.ಪೊನ್ನುರಾಜ್- ನಗರಾಭಿವೃದ್ಧಿ ಇಲಾಖೆ(ಪೌರಾಡಳಿತ)ಯ ಸರಕಾರದ ಕಾರ್ಯದರ್ಶಿ, ಡಾ.ಏಕ್‌ರೂಪ್‌ಕೌರ್- ಆರ್ಥಿಕ ಇಲಾಖೆ(ವೆಚ್ಚ)ಯ ಸರಕಾರದ ಕಾರ್ಯದರ್ಶಿ ಹಾಗೂ ರಾಜ್ಯ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.
ಹೇಮಾಜಿ ನಾಯಕ್- ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕ, ಅಂಜುಮ್ ಪರ್ವೇಝ್- ಬೆಂಗಳೂರು ಮಹಾನಗರ ಸಾರಿಗೆ ನಿಗಮ(ಬಿಎಂಟಿಸಿ)ದ ವ್ಯವಸ್ಥಾಪಕ ನಿರ್ದೇಶಕ, ಎ.ಬಿ.ಇಬ್ರಾಹೀಂ- ರಾಜ್ಯ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.
Next Story





