Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ಪತ್ರಿಕಾ ಭವನದಲ್ಲಿ ಪತ್ರಿಕಾ...

ಮಂಗಳೂರು ಪತ್ರಿಕಾ ಭವನದಲ್ಲಿ ಪತ್ರಿಕಾ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ1 July 2017 9:09 PM IST
share
ಮಂಗಳೂರು ಪತ್ರಿಕಾ ಭವನದಲ್ಲಿ ಪತ್ರಿಕಾ ದಿನಾಚರಣೆ

ಮಂಗಳೂರು, ಜು. 1: ನಗರದ ಪತ್ರಿಕಾ ಭವನದಲ್ಲಿ ಇಂದು ಪತ್ರಿಕಾ ದಿನದ ಆಚರಣೆ ನಡೆಯಿತು.

ಬೆಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಸದಾಶಿವ ಶೆಣೈ ಕಾರ್ಯಕ್ರಮ ಉದ್ಘಾಟಿಸಿ, ಪತ್ರಕರ್ತನಾದವನಿಗೆ ಸವಾಲುಗಳು ಸಹಜ. ಆದರೆ ತನ್ನಲ್ಲಿ ಕ್ರೀಯಾಶೀಲತೆಯನ್ನು ಮೈಗೂಡಿಸಿಕೊಂಡು ಆ ಸವಾಲಿಗೆ ಸರಿಸಮಾನನಾಗಿ ಬೆಳೆಯುವ ಶಕ್ತಿಯನ್ನು ಆತ ಮೈಗೂಡಿಸಿಕೊಳ್ಳಬೇಕು. ಸಾಮಾಜಿಕ ನ್ಯಾಯ ವಿಷಯದಲ್ಲಿ ಇಂದಿಗೂ ಸಮಾಜ ಮಾಧ್ಯಮಗಳಿಂದ ಭಾರೀ ನಿರೀಕ್ಷೆಯನ್ನು ಹೊಂದಿರುತ್ತದೆ. ಈ ನಿಟ್ಟಿನಲ್ಲಿ ಮಾಧ್ಯಮಗಳು ಸಾಜಕ್ಕೆ ಶಕ್ತಿಯಾಗಿರಬೇಕು ಎಂದರು.

ಪತ್ರಕರ್ತ ಕೇವಲ ವರದಿಗಾರನಾಗಬಾರದು, ಅವನು ಹೋರಾಟಗಾರ, ಚಳುವಳಿಗಾರ, ರಾಜಕಾರಣಿ, ಸಂಶೋಧಕನಾಗಿದ್ದಾಗ ಅವನಿಂದ ಹೆಚ್ಚಿನದ್ದನ್ನು ನಿರೀಕ್ಷಿಸಲು ಸಾಧ್ಯವಿದೆ. ವರದಿಗಾರ ವರದಿಯಾಚೆಗೂ ದೃಷ್ಟಿಯಿರಿಸಿ ವಿಮರ್ಶಿಸಿದಾಗ ಹೆಚ್ಚು ಪ್ರಬುದ್ಧನಾಗಲು ಸಾಧ್ಯ ಎಂದವರ ಉಹೇಳಿದರು.

ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಗೋಪಾಲಕೃಷ್ಣ ಕುಂಟಿನಿ ‘ಮಾಧ್ಯಮ-ಹೊಸ ಆಯಾಮಗಳು’ ಎಂಬ ವಿಷಯದಲ್ಲಿ ಮಾತನಾಡಿ, ಫೇಸ್‌ಬುಕ್, ವಾಟ್ಸಪ್, ಟ್ವಿಟರ್‌ನಂತಹ ನವಮಾಧ್ಯಮಗಳಿಗೆ ಉಳಿದ ಮಾಧ್ಯಮಗಳು ಶರಣಾಗಿರುವುದು ಆಘಾತಕಾರಿ ಬೆಳವಣಿಗೆ ಎಂದರು.

ಮುಖ್ಯ ಅತಿಥಿಯಾಗಿ ಪತ್ರಕರ್ತ ಮನೋಹರ್ ಪ್ರಸಾದ್ ಮಾತನಾಡಿ, ಸಾಹಿತ್ಯ ಜ್ಞಾನವಿದ್ದವ ಪತ್ರಿಕೋದ್ಯಮದಲ್ಲಿ ಯಶಸ್ಸುಗಳಿಸಲು ಸಾಧ್ಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ವಹಿಸಿದ್ದರು. ಶ್ರೀನಿವಾಸ್ ಇಂದಾಜೆ ಉಪಸ್ಥಿತರಿದ್ದರು.

ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಪಿ.ಬಿ. ಹರೀಶ್ ರೈ ಕಾರ್ಯಕ್ರಮ ನಿರೂಪಿಸಿದರು.

ಕಪ್ಪುಪಟ್ಟಿಧರಿಸಿ ಪ್ರತಿಭಟನೆ

ರಾಜ್ಯದ ಇಬ್ಬರು ಪತ್ರಕರ್ತರಿಗೆ ವಿಧಾನಸಭೆ ಹಕ್ಕು ಬಾಧ್ಯತಾ ಸಮಿತಿ ಜೈಲು ಶಿಕ್ಷೆ ವಿಧಿಸಿರುವುದನ್ನು ವಿರೋಧಿಸಿ ಶನಿವಾರ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಪತ್ರಕರ್ತರು ಕಪ್ಪು ಪಟ್ಟಿಧರಿಸಿ ಸಾಂಕೇತಿಕವಾಗಿ ವಿರೋಧ ವ್ಯಕ್ತಪಡಿಸಿದರು.

ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಸದಾಶಿವ ಶೆಣೈ ಅವರನ್ನು ಪತ್ರಕರ್ತರ ಸಂಘದಿಂದ ಅಭಿನಂದಿಸಲಾಯಿತು. ಪತ್ರಕರ್ತ ಪುಷ್ಪರಾಜ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X