Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಾಂವಿಧಾನಿಕ ಹುದ್ದೆಗಳಿಗೆ ಸಂವಿಧಾನ...

ಸಾಂವಿಧಾನಿಕ ಹುದ್ದೆಗಳಿಗೆ ಸಂವಿಧಾನ ವಿರೋಧಿ ವ್ಯಕ್ತಿಗಳನ್ನು ಏರಿಸಬೇಡಿ: ಪ್ರಶಾಂತ್ ಭೂಷಣ್

‘ಭಾರತೀಯ ಪ್ರಜಾಪ್ರಭುತ್ವದ ಪ್ರಚಲಿತ ಸಮಸ್ಯೆಗಳು’ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ1 July 2017 9:30 PM IST
share
ಸಾಂವಿಧಾನಿಕ ಹುದ್ದೆಗಳಿಗೆ ಸಂವಿಧಾನ ವಿರೋಧಿ ವ್ಯಕ್ತಿಗಳನ್ನು ಏರಿಸಬೇಡಿ: ಪ್ರಶಾಂತ್ ಭೂಷಣ್

ಬೆಂಗಳೂರು, ಜು.1: ದೇಶದ ಸಂವಿಧಾನ ಕೊಟ್ಟಿರುವ ಮೂಲಭೂತ ಹಕ್ಕುಗಳು ಹಾಗೂ ಮೌಲ್ಯಗಳು ಅಪಾಯದ ಅಂಚಿನಲ್ಲಿರುವಾಗ ಸಂವಿಧಾನ ವಿರೋಧಿ ವ್ಯಕ್ತಿಗಳನ್ನು ಸಾಂವಿಧಾನಿಕ ಹುದ್ದೆಗಳಿಗೆ ಏರುವುದನ್ನು ತಪ್ಪಿಸುವ ಅವಶ್ಯಕತೆಯಿದೆ ಎಂದು ಸಾಮಾಜಿಕ ಹೋರಾಟಗಾರ ಮತ್ತು ಸುಪ್ರೀಂಕೋರ್ಟ್ ವಕೀಲ ಪ್ರಶಾಂತ್ ಭೂಷಣ್ ಅಭಿಪ್ರಾಯ ಪಟ್ಟಿದ್ದಾರೆ.

ಶನಿವಾರ ಪ್ರಜಾಸತ್ತೆ ಹಾಗೂ ಕೋಮುಸೌಹಾರ್ದ ವೇದಿಕೆ (ಎಫ್‌ಡಿಸಿಎ)-ಕರ್ನಾಟಕ ಇದರ ವತಿಯಂದ ನಗರದ ಸೇಂಟ್ ಜೋಸೆಫ್ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ‘ಭಾರತೀಯ ಪ್ರಜಾಪ್ರಭುತ್ವದ ಪ್ರಚಲಿತ ಸಮಸ್ಯೆಗಳು’ ಕುರಿತ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗೋರಕ್ಷಣೆಯ ಹೆಸರಲ್ಲಿ ಕೆಲವರು ನಡೆಸುತ್ತಿರುವ ಸ್ವಯಂಘೋಷಿತ ಅಭಿಯಾನಕ್ಕೆ ಪರ್ಯಾಯವಾಗಿ ಸಂವಿಧಾನದ ರಕ್ಷಣೆ ಹೆಸರಿನ ಜನಚಳವಳಿ ನಡೆಸಬೇಕಾಗಿದೆ ಎಂದು ಹೇಳಿದರು.

ದೇಶದ ಸಂವಿಧಾನದ ಪ್ರತಿಯೊಬ್ಬ ನಾಗರಿಕನಿಗೆ ಕೊಟ್ಟಿರುವ ಮೂಲಭೂತ ಹಕ್ಕುಗಳು ಮತ್ತು ಮೌಲ್ಯಗಳು ಅಪಾಯದಲ್ಲಿವೆ. ಭ್ರಷ್ಟಾಚಾರ ತಡೆ ಕಾನೂನುಗಳನ್ನು ದುರ್ಬಲಗೊಳಿಸಿ ಹೋರಾಟಗಳನ್ನು ಹತ್ತಿಕ್ಕಲಾಗುತ್ತಿದೆ. ಸಾಂವಿಧಾನಿಕ ಸಂಸ್ಥೆಗಳನ್ನು ಅಶಕ್ತಗೊಳಿಸಲಾಗುತ್ತಿದೆ. ಮಾಧ್ಯಮಗಳ ಸ್ವಾತಂತ್ರ ಕಸಿದುಕೊಳ್ಳಲಾಗುತ್ತಿದೆ. ಚುನಾವಣೆಗಳಲ್ಲಿ ಹಣ, ಜಾತಿಯ ಪ್ರಭಾವ ಹೆಚ್ಚಾಗುತ್ತಿದೆ. ಸಂವಿಧಾನ ವಿರೋಧಿ ವ್ಯಕ್ತಿಗಳು ಸಾಂವಿಧಾನಿಕ ಹುದ್ದೆಗಳನ್ನು ಅಲಂಕರಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳನ್ನು ಬಲಪಡಿಸುವ, ಜನರಲ್ಲಿ ಜಾಗೃತಿ ಮೂಡಿಸುವ, ಕಾನೂನು ಹೋರಾಟ ನಡೆಸುವ ಮತ್ತು ಪ್ರಬಲ ಜನಚಳವಳಿ ಮೂಲಕ ಇದನ್ನು ಎದುರಿಸಬೇಕಾಗಿದೆ ಎಂದು ಭೂಷಣ್ ಸಲಹೆ ನೀಡಿದರು.

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಮಾತನಾಡಿ, ಕೋಮುವಾದ, ಮೂಲಭೂತವಾದ ಮತ್ತು ಭ್ರಷ್ಟಾಚಾರದ ಜೊತೆಗೆ ಪ್ರಜಾಪ್ರಭುತ್ವ ಇರಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವಕ್ಕೆ ಶಕ್ತಿ ತುಂಬಬೇಕಾದರೆ, ಈ ಸಮಾಜದಿಂದ ಕೋಮುವಾದ, ಮೂಲಭೂತವಾದ ಮತ್ತು ಭ್ರಷ್ಟಾಚಾರವನ್ನು ಕೊನೆಗಾಣಿಸಬೇಕು. ರಾಜಕೀಯ ಪ್ರಜಾಪ್ರಭುತ್ವದ ಜತೆಗೆ ಆರ್ಥಿಕ ಮತ್ತು ಸಾಮಾಜಿಕ ಪ್ರಜಾಪ್ರಭುತ್ವವನ್ನು ಇಂದು ಚುನಾವಣೆಗಳಿಗೆ ಜೋಡಿಸಬೇಕಾಗಿದೆ. ರಾಜಕೀಯ ಕ್ಷೇತ್ರಗಳಲ್ಲಿ ಮೌಲ್ಯಗಳನ್ನು ಪ್ರತಿಷ್ಠಾಪಿಸುವ ಮತ್ತು ಸಂಘಟಿತ ಹೋರಾಟದ ಮೂಲಕ ಬದಲಾವಣೆ ತರಬಹುದು ಎಂದರು.

ಹೊಸದಿಲ್ಲಿಯ ರೆಡಿಯನ್ಸ್ ಸಾಪ್ತಾಹಿಕದ ಸಂಪಾದಕ ಇಜಾಝ್ ಅಹ್ಮದ್ ಅಸ್ಲಂ ಮಾತನಾಡಿ, ದೇಶ ಉಳಿಯಬೇಕಾದರೆ ಪ್ರಜಾಪ್ರಭುತ್ವ ಉಳಿಯಬೇಕು. ಕೇವಲ ನದಿ, ಪರ್ವತಗಳಿದ್ದರೆ ಅದು ದೇಶ ಆಗುವುದಿಲ್ಲ. ಜೀವಂತ ದೇಶದ ಅಸ್ತಿತ್ವ ಕಾಣಬೇಕಾದರೆ ಅಲ್ಲಿ ಮನುಷ್ಯರು ಇರಬೇಕು. ಆದರೆ, ಇಂದು ಮನುಷ್ಯರ ಸಾಂವಿಧಾನಿಕ ಹಕ್ಕುಗಳ ದಮನ ಮಾಡಿ ಅವರ ಘನತೆ ಮತ್ತು ಸ್ವಾಭಿಮಾನವನ್ನು ಹರಾಜು ಹಾಕಲಾಗುತ್ತಿದೆ. ಅದಕ್ಕಾಗಿ ಇಂದು ನಾವು ಸಂವಿಧಾನದ ಮೂಲ ಆಶಯಗಳತ್ತ ಮರಳಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ನಿವೃತ್ತ ಮುಖ್ಯನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ, ಸೇಂಟ್ ಅಲೋಶಿಯೆಸ್ ಕಾಲೇಜು ಪ್ರಾಂಶುಪಾಲ ಫಾದರ್ ಆ್ಯಂಬ್ರೋಸ್ ಪಿಂಟೋ, ಸೇಂಟ್ ಜೊಸೇಫ್ ಕಾಲೇಜು ಪ್ರಾಂಶುಪಾಲ ಡಾ. ಫಾದರ್ ವಿಕ್ಟರ್ ಲೊಬೋ, ಎಫ್‌ಡಿಸಿಎ ಪ್ರಧಾನ ಕಾರ್ಯದರ್ಶಿ ಎಂ.ಎಫ್. ಪಾಷಾ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X