ನಿಷೇಧಿತ ಸ್ಥಳಗಳಲ್ಲಿ ಧೂಮಪಾನ: 206 ಪ್ರಕರಣ ದಾಖಲು
ಮಂಗಳೂರು, ಜು. 1: ಅಂಗಡಿಯಲ್ಲೇ ಬೀಡಿ, ಸಿಗರೇಟು ಮಾರಾಟ ಮಾಡಿ ಸ್ಥಳದಲ್ಲೇ ಧೂಮಪಾನಕ್ಕೆ ಅವಕಾಶ ನೀಡುತ್ತಿರುವ ಬಗ್ಗೆ ಬಂದಿದ್ದ ದೂರಿನ ಹಿನ್ನೆಲೆಯಲ್ಲಿ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪೊಲೀಸರು ವಿವಿಧೆಡೆ ದಾಳಿ ನಡೆಸಿ 206 ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶುಕ್ರವಾರ ನಡೆದ ಪೊಲೀಸ್ ಫೋನ್-ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರೊಬ್ಬರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಕಮಿಷನರ್ ದಾಳಿ ನಡೆಸುವ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಕಾರ್ಯಾಚರಣೆ ನಡೆಸಲಾಗಿತ್ತು.
Next Story





