Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೇಜಾವರ ಸ್ವಾಮೀಜಿ ಕ್ಷಮೆ ಯಾಚಿಸಲು...

ಪೇಜಾವರ ಸ್ವಾಮೀಜಿ ಕ್ಷಮೆ ಯಾಚಿಸಲು ಆಗ್ರಹಿಸಿ ಮಂಗಳೂರಿನಲ್ಲಿ ಧರಣಿ

ವಾರ್ತಾಭಾರತಿವಾರ್ತಾಭಾರತಿ2 July 2017 1:29 PM IST
share
ಪೇಜಾವರ ಸ್ವಾಮೀಜಿ ಕ್ಷಮೆ ಯಾಚಿಸಲು ಆಗ್ರಹಿಸಿ ಮಂಗಳೂರಿನಲ್ಲಿ  ಧರಣಿ

ಮಂಗಳೂರು, ಜು.2: ಉಡುಪಿ ಶ್ರೀಕೃಷ್ಣ ಮಠದಲ್ಲಿ ಪೇಜಾವರ ಸ್ವಾಮೀಜಿ ಇಫ್ತಾರ್ ಕೂಟ ಏರ್ಪಡಿಸುವ ಮೂಲಕ ಮಠದ ಪಾವಿತ್ರಕ್ಕೆ ಧಕ್ಕೆ ತಂದಿದ್ದಾೆ. ಹಿಂದೂಗಳಿಗೆ ಅವಮಾನ ಮಾಡಿದ್ದಾರೆ. ಹಾಗಾಗಿ ಪೇಜಾವರ ಸ್ವಾಮೀಜಿ ಹಿಂದೂ ಸಮಾಜದ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನೆ, ಅಖಿಲ ಭಾರತ ಹಿಂದೂ ಮಹಾಸಭೆ, ಹಿಂದೂ ಜನಜಾಗೃತಿ ಸಮಿತಿಯು ರವಿವಾರ ನಗರದ ಲಾಲ್‌ಬಾಗ್ ಸರ್ಕಲ್‌ನಲ್ಲಿ ಧರಣಿ ನಡೆಸಿತು.

ಗೋರಕ್ಷಕರಿಗೆ ತಿರಸ್ಕಾರ, ಗೋ ಭಕ್ಷಕರಿಗೆ ಸತ್ಕಾರ, ಶ್ರೀ ಕೃಷ್ಣ ಮಠದಲ್ಲಿ ನಮಾಜ್ ಮಾಡಲು ಅವಕಾಶ ನೀಡಿದ್ದು ಹಿಂದೂಗಳಿಗೆ ಮಾಡಿದ ಅವಮಾನ, ಮೂರ್ತಿಪೂಜಕರನ್ನು ವಿರೋಧಿಸುವ ಮುಸ್ಲಿಮರಿಗೆ ಮಠದಲ್ಲಿ ಇಫ್ತಾರ್ ಕೂಟ ಏರ್ಪಡಿಸುವ ಮೂಲಕ ಹಿಂದೂಗಳಿಗೆ ಅವಮಾನ ಮಾಡಲಾಗಿದೆ. ''ಸ್ವಾಮೀಜಿಯವರೇ ಹಿಂದೂ ಧರ್ಮದ ಭಕ್ತಿಯ ಮೇಲೆ ಆಘಾತ ಮಾಡಿದ್ದಕ್ಕಾಗಿ ಕ್ಷಮೆ ಯಾಚಿಸಿ, ಮುಸಲ್ಮಾನರ ಓಲೈಕೆ ನಿಲ್ಲಿಸಿ, ಗೋಮೂತ್ರದಿಂದ ಶ್ರೀಕೃಷ್ಣ ಮಠ ಶುದ್ಧಿ ಮಾಡಿ'' ಎಂದು ಧರಣಿ ನಿರತರು ಒತ್ತಾಯಿಸಿದರು.

ಹಿಂದೂ ಮಹಾಸಭಾ ರಾಜ್ಯ ವಕ್ತಾರ ರಾಜೇಂದ್ರ ಮಾತನಾಡಿ, ಪೇಜಾವರ ಸ್ವಾಮೀಜಿ ಮಠದಲ್ಲಿ ಇಫ್ತಾರ್ ಕೂಟಕ್ಕೆ ಅವಕಾಶ ನೀಡಬಾರದಿತ್ತು. ಶ್ರೀಮಠ ಭಕ್ತರ ಸೊತ್ತು. ರಾಜಕೀಯ ಪಕ್ಷಗಳ ಷಡ್ಯಂತರಕ್ಕೆ ಸ್ವಾಮೀಜಿ ಬಲಿಯಾಗಿದ್ದಾರೆ. ಶ್ರೀಮಠಕ್ಕೆ ಜಾಗವನ್ನು ಮುಸ್ಲಿಮರು ದಾನ ಮಾಡಿದ್ದಾರೆ ಎಂಬುದು ಸುಳ್ಳು. ಅಖಂಡ ಭಾರತದ ಸಂಕಲ್ಪದ ಬಗ್ಗೆ ಮಾತನಾಡುವ ಸ್ವಾಮೀಜಿ ಇಫ್ತಾರ್ ಕೂಟ ಆಯೋಜಿಸುವ ಮೂಲಕ ಹಿಂದೂ ಸಮಾಜಕ್ಕೆ ಅವಮಾನ ಮಾಡಿದ್ದಾರೆ. ಆದ್ದರಿಂದ ಪೇಜಾವರ ಸ್ವಾಮೀಜಿ ಭೇಷರತ್ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಪೀಠತ್ಯಾಗ ಮಾಡಬೇಕು ಎಂದರು.

ಶ್ರೀರಾಮಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಮಾತನಾಡಿ, ಕೃಷ್ಣ ಮಠದಲ್ಲಿ ಮುಸ್ಲಿಮರಿಗೆ ಪ್ರಾರ್ಥನೆಗೆ ಅವಕಾಶ ನೀಡಿದ್ದು ಸರಿಯಲ್ಲ. ಹಿಂದೂ ಸಮಾಜದ ಉನ್ನತಿಗಾಗಿ ಮಾರ್ಗರ್ಶನ ಮಾಡಿದ ನೀವೇ ಈ ರೀತಿ ನಡೆದುಕೊಂಡರೆ ಇನ್ನು ಹಿಂದೂ ಸಮಾಜ ಏನು ಮಾಡಬೇಕು. ಹಿಂದೆ ಮುಸ್ಲಿಮರನ್ನು ವಿರೋಧಿಸಿದ್ದ ನೀವು ಈಗ ಅವರನ್ನು ಪುರಸ್ಕರಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಹಿಂದೂ ಜನಜಾಗೃತಿ ಸಮಿತಿಯ ಸಮನ್ವಯಕಾರ ಚಂದ್ರಮೋಹನ ಮಾತನಾಡಿ, ಗೋಹತ್ಯೆ, ಮತಾಂತರ ಪ್ರಕರಣಗಳು ನಡೆಯುತ್ತಿರಬೇಕಾದರೆ, ಇಫ್ತಾರ್‌ಕೂಟ ಆಯೋಜಿಸಿ ಸೌಹಾರ್ಧ ಮೆರೆಯುವ ಅಗತ್ಯ ಏನಿದೆ? ಮಠವನು ಶುದ್ಧೀಕರಣಗೊಳಿಸಬೇಕು. ಇಲ್ಲದಿದ್ದರೆ ಮುಂದೆ ಉಡುಪಿಯ ಎಲ್ಲ ಮಠಗಳಲ್ಲೂ ನಮಾಝ್, ಪ್ರಾರ್ಥನೆ ಕೂಟಗಳು ನಡೆದರೆ ಅಚ್ಚರಿ ಇಲ್ಲ ಎಂದರು.
ಶಂಖನಾದ ಹಾಗೂ ಕೃಷ್ಣ ಸ್ಮರಣೆಯೊಂದಿಗೆ ಧರಣಿ ಆರಂಭಗೊಂಡಿತು. ಧರಣಿಗೂ ಮುನ್ನ ಶ್ವಾನದಳದಿಂದ ಪ್ರತಿಭಟನಾ ಸ್ಥಳದ ಸುತ್ತಮುತ್ತ ತಪಾಸಣೆ ನಡೆಸಲಾಯಿತು. ಪೊಲೀಸ್ ಬಂದೋಬಸ್ತ್ ಬಿಗುಗೊಳಿಸಲಾಗಿತ್ತು.

ಧರಣಿಯಲ್ಲಿ ಸಂಘಟನೆಗಳ ಮುಖಂಡರದ ಧರ್ಮೇಂದ್ರ, ರಾಜೇಶ್ ಪವಿತ್ರನ್ ಮತ್ತಿತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X